Homeಮುಖಪುಟಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಆರ್‌ಬಿಐನ ನೂತನ ಗವರ್ನರ್ ಆಗಿ ನೇಮಕ

ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಆರ್‌ಬಿಐನ ನೂತನ ಗವರ್ನರ್ ಆಗಿ ನೇಮಕ

- Advertisement -
- Advertisement -

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ)ದ 26 ನೇ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ಸರ್ಕಾರ ಸೋಮವಾರ ನೇಮಕ ಮಾಡಿದೆ. ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಮಲ್ಹೋತ್ರಾ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಬುಧವಾರದಿಂದ ಮುಂದಿನ ಮೂರು ವರ್ಷಗಳ ಕಾಲ ಅವರು ಆರ್‌ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದಾರೆ.

ಸಂಜಯ್ ಮಲ್ಹೋತ್ರಾ ಅವರು 1990 ರ ಬ್ಯಾಚ್ ರಾಜಸ್ಥಾನ ಕೇಡರ್ IAS ಅಧಿಕಾರಿಯಾಗಿದ್ದು, ಅವರು ಪ್ರಸ್ತುತ, ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿ (ಕಂದಾಯ) ಆಗಿದ್ದಾರೆ. ಹಾಲಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿಯು ಮಂಗಳವಾರ (ಡಿಸೆಂಬರ್ 10, 2024) ಕೊನೆಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

26ನೇ ಆರ್‌ಬಿಐ ಗವರ್ನರ್ ಆಗಲಿರುವ ಮಲ್ಹೋತ್ರಾ ಅವರು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಜಿನಿಯರಿಂಗ್ ಪದವೀಧರರಾಗಿದ್ದು, ಅಮೆರಿಕದ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ತಮ್ಮ 33 ವರ್ಷಗಳ ವೃತ್ತಿಜೀವನದಲ್ಲಿ, ವಿದ್ಯುತ್, ಹಣಕಾಸು ಮತ್ತು ತೆರಿಗೆ, ಮಾಹಿತಿ ತಂತ್ರಜ್ಞಾನ ಮತ್ತು ಗಣಿ ಸೇರಿದಂತೆ ಬಹುವಿಧದ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಈ ಹಿಂದೆ ಅವರು, ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿ ಹಣಕಾಸು ಸೇವೆಗಳ ಇಲಾಖೆಯಲ್ಲಿ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರು. ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಣಕಾಸು ಮತ್ತು ತೆರಿಗೆಯಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ. ಅವರ ಪ್ರಸ್ತುತ ನಿಯೋಜನೆಯ ಭಾಗವಾಗಿ, ಅವರು ನೇರ ಮತ್ತು ಪರೋಕ್ಷ ತೆರಿಗೆಗಳಿಗೆ ಸಂಬಂಧಿಸಿದಂತೆ ತೆರಿಗೆ ನೀತಿಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ.

ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ ಶಕ್ತಿಕಾಂತ್ ದಾಸ್ ಅವರನ್ನು ಡಿಸೆಂಬರ್ 12, 2018 ರಂದು ಆರ್‌ಬಿಐನ 25 ನೇ ಗವರ್ನರ್ ಆಗಿ ನೇಮಿಸಲಾಯಿತು. ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಅವರಿಗೆ ವಿಸ್ತರಣೆಯನ್ನು ನೀಡಲಾಯಿತು. ಅವರ ವಿಸ್ತೃತ ಅಧಿಕಾರಾವಧಿ ಮಂಗಳವಾರ ಕೊನೆಗೊಳ್ಳಲಿದೆ.

ಇದನ್ನೂ ಓದಿ: ಡಿಎಂಕೆ ವಿರುದ್ಧ ‘ರಾಜಪ್ರಭುತ್ವ’ ಹೇಳಿಕೆ; ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ ವಿಸಿಕೆ

ಡಿಎಂಕೆ ವಿರುದ್ಧ ‘ರಾಜಪ್ರಭುತ್ವ’ ಹೇಳಿಕೆ; ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ ವಿಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...