Homeಮುಖಪುಟಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

ಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

- Advertisement -
- Advertisement -

8 ದಿನಗಳ ಅವಧಿಯಲ್ಲಿ ಸಂಸತ್ತಿನಲ್ಲಿ 146 ವಿರೋಧ ಪಕ್ಷದ ಸದಸ್ಯರನ್ನು ವಜಾಗೊಳಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕಳಂಕ ಎಂದು ಹೇಳಿದೆ ಮತ್ತು ಅಮಾನತುಗೊಂಡ ಸಂಸದರು ಎತ್ತಿರುವ ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ತಕ್ಷಣವೇ ಉತ್ತರವನ್ನು ಸಚಿವರುಗಳು ಅಪ್‌ಲೋಡ್ ಮಾಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

146 ಸಂಸದರನ್ನು ಅಮಾನತುಗೊಳಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಅಧಿವೇಶನಗಳಲ್ಲಿ ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮಗಳು ಆಕಸ್ಮಿಕವಲ್ಲ. ಇದು ಸಂಸತ್ತಿನ ಪ್ರಕ್ರಿಯೆಯನ್ನು ಅಪಮೌಲ್ಯಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟವಾಗಿ ಸೂಚಿಸಿದೆ ಎಂದು ಪಿಯುಸಿಎಲ್‌ ಹೇಳಿದೆ.

ವಿರೋಧ ಪಕ್ಷದ ಸದಸ್ಯರ ಸಾಮೂಹಿಕ ಅಮಾನತಿನಿಂದ ಸಂಸತ್ತಿನಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಿದಂತಾಗುತ್ತದೆ. ಈ ಹಿಂದೆ ಲೋಕಸಭೆಯಿಂದ ಅಮಾನತುಗೊಂಡ ಹೆಚ್ಚು ಸಂಸದರ ಸಂಖ್ಯೆ 63. ಈ ಬಾರಿ 100 ಸಂಸದರನ್ನು ಅಮಾನತು ಮಾಡಲಾಗಿದೆ. ವಿರೋಧ ಪಕ್ಷಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಸಮಾಜವಾದಿ ಪಕ್ಷ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಯೂನಿಯನ್ ಮುಸ್ಲಿಂ ಲೀಗ್, ಜನತಾ ದಳ ಯುನೈಟೆಡ್, ಡಿಎಂಕೆ, ಆಮ್ ಆದ್ಮಿ ಪಾರ್ಟಿ,  ಬಹುಜನ ಸಮಾಜ ಪಕ್ಷ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ 46 ಸಂಸದರನ್ನು ಅಮಾನತುಗೊಳಿಸಲಾಗಿದೆ, ಅಸ್ಸಾಂನ ಪಕ್ಷೇತರ ಸಂಸದ, ಜನತಾ ದಳ ಯುನೈಟೆಡ್, ಜಾರ್ಖಂಡ್ ಮುಕ್ತಿ ಮೋರ್ಚಾದ ಸಂಸದರನ್ನು ಕೂಡ ಅಮಾನತು ಮಾಡಲಾಗಿದೆ. ಈ ಎಲ್ಲಾ ಅಮಾನತುಗಳು ಅಶಿಸ್ತಿನ ನಡವಳಿಕೆ ನೆಪದಲ್ಲಿ ನಡೆದಿದೆ. ಸಂಸದರ ನಿಜವಾದ ಬೇಡಿಕೆ ಎಂದರೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚಿಸುವುದಾಗಿತ್ತು. ಗೃಹ ಸಚಿವರೊಬ್ಬರು ವಿಶೇಷವಾಗಿ ಸಂಸತ್ತಿನ ಭದ್ರತೆಯ ಉಲ್ಲಂಘನೆಯಂತಹ ಗಂಭೀರ ವಿಷಯದ ಬಗ್ಗೆ ಹೇಳಿಕೆ ನೀಡಲು ನಿರಾಕರಿಸುವುದು  ಆಘಾತಕಾರಿಯಾಗಿದೆ ಎಂದು ಪಿಯುಸಿಎಲ್‌ ಹೇಳಿದೆ.

ಲೋಕಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ ಪರಿಣಾಮ 19 ಕೋಟಿಗೂ ಅಧಿಕ ಜನರು ಸಂಸತ್ತಿನಲ್ಲಿ ಧ್ವನಿ ಕಳೆದುಕೊಂಡಂತಾಗಿದೆ. ಈ ಅಮಾನತುಗಳಿಂದ ಪ್ರಜಾಸತ್ತಾತ್ಮಕ ಭರವಸೆ ಹುಸಿಯಾಗಿದೆ. ಸರ್ಕಾರವು ತನ್ನ ಅಜೆಂಡಾಗಳನ್ನು ಸಾಧಿಸಲು ಸಂಸತ್ತಿನ ಅಧಿಕಾರಗಳನ್ನು ಬಳಸುವುದನ್ನು ಮುಂದುವರೆಸಿದಾಗ, ಅದು ಸಂಸದೀಯ ಪ್ರಜಾಪ್ರಭುತ್ವದ ಅರ್ಥವನ್ನು ವಿರೂಪಗೊಳಿಸುತ್ತದೆ. ಇದು ಚರ್ಚೆ ಮತ್ತು ಚರ್ಚೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾಂವಿಧಾನಿಕ ನಿಯಮವನ್ನು ಅಣಕಿಸುತ್ತದೆ ಎಂದು ಪಿಯುಸಿಎಲ್‌ ಹೇಳಿದೆ.

ಸಂಸತ್ತಿನಲ್ಲಿ ಬಹುತೇಕ ಸಂಸದರನ್ನು ಅಮಾನತು ಮಾಡಿದ ಬಳಿಕ ಆಡಳಿತಾರೂಢ ಸರ್ಕಾರವು ಭಾರತದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯ ಸ್ವರೂಪವನ್ನು ಬದಲಾಯಿಸಲು ಮೂರು ನಿರ್ಣಾಯಕ ಕಾನೂನುಗಳನ್ನು ಅಂಗೀಕರಿಸಿದೆ. ಭಾರತೀಯ ಸಾಕ್ಷಿ (ಎರಡನೇ) ಮಸೂದೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ-2023 ಮತ್ತು ಭಾರತೀಯ ನ್ಯಾಯ (ಎರಡನೇ) ಸಂಹಿತಾ-2023ನ್ನು ಆಡಳಿತ ಪಕ್ಷದ ಸದಸ್ಯರ ಧ್ವನಿ ಮತದೊಂದಿಗೆ ಅಂಗೀಕರಿಸಿದವು. ಇದಲ್ಲದೆ ವಿವಾದಾತ್ಮಕ ದೂರಸಂಪರ್ಕ ಮಸೂದೆ-2023 ನ್ನು ಲೋಕಸಭೆ ಮತ್ತು ರಾಜ್ಯಸಭೆ ಎರಡರಿಂದಲೂ ಅಂಗೀಕರಿಸಲಾಯಿತು. ಇದ ಗಂಭೀರ ಗೌಪ್ಯತೆಯ ಕಾಳಜಿಯನ್ನು ಹೊಂದಿದೆ. ಸಂಸದರ ಅಮಾನತು ಆರಂಭವಾದ ನಂತರ ಈ ಅಧಿವೇಶನದಲ್ಲಿ ಆತಂಕಕಾರಿಯಾದ ಒಟ್ಟು 14 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದಲ್ಲದೆ ಪೋಸ್ಟ್ ಆಫೀಸ್ ಬಿಲ್-2023, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ- 2023, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವೆಯ ಷರತ್ತುಗಳು) ಮಸೂದೆ-2023ನ್ನು ಅಂಗೀಕರಿಸಲಾಗಿದೆ. ಇವೆಲ್ಲಾ ಮಸೂದೆಗಳನ್ನು ಚರ್ಚೆ ಮಾಡದೆ, ಪ್ರತಿಪಕ್ಷಗಳ ಅಭಿಪ್ರಾಯವನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

146 ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಅವರು ಸಂಸತ್ತಿನಲ್ಲಿ ಉತ್ತರಿಸಲು ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳನ್ನು ಕೂಡ ಡಿಲಿಟ್‌ ಮಾಡಲಾಗಿದೆ. ಭಾರತದ ಸಾಮಾನ್ಯ ನಾಗರಿಕರ ಮಾಹಿತಿಯ ಹಕ್ಕನ್ನು ಪ್ರತಿನಿಧಿಸುವ ವಿರೋಧ ಪಕ್ಷದ ಸಂಸದರು ಈ ಅಧಿವೇಶನದಲ್ಲಿ ಎತ್ತಿದ 290 ಪ್ರಶ್ನೆಗಳನ್ನು ರದ್ದುಗೊಳಿಸಿರುವುದು ಆಘಾತಕಾರಿಯಾಗಿದೆ. 146 ಸಂಸದರ ಅಮಾನತು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಅಡಿಪಾಯವನ್ನು ದುರ್ಬಲಗೊಳಿಸಿದೆ. ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮುಕ್ತವಾಗಿ ಭಾಗವಹಿಸಲು 146 ಸಂಸದರ ಅಮಾನತು ತಕ್ಷಣವೇ ಜಾರಿಗೆ ಬರುವಂತೆ ಹಿಂಪಡೆಯಬೇಕು. ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ತಕ್ಷಣವೇ ಸಂಸತ್ತಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. 2024ರ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಅವುಗಳನ್ನು ಹೆಚ್ಚಿನ ಚರ್ಚೆಗೆ ತೆಗೆದುಕೊಳ್ಳಬೇಕು. ಮುಂದಿನ ಅಧಿವೇಶನವು ಲೋಕಸಭೆಯ ಭದ್ರತೆಯ ಉಲ್ಲಂಘನೆಯನ್ನು ಚರ್ಚಿಸುವುದರೊಂದಿಗೆ ಪ್ರಾರಂಭವಾಗಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಇದನ್ನು ಓದಿ: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...