Homeಕರ್ನಾಟಕಭ್ರೂಣ ಲಿಂಗ ಪತ್ತೆ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ

ಭ್ರೂಣ ಲಿಂಗ ಪತ್ತೆ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆವೆ. ಅದರಲ್ಲೂ ಮುಖ್ಯವಾಗಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಅಧಿಕವಾಗಿದೆ. ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಹತ್ಯೆ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ನಗದು ಬಹುಮಾನ ಯೋಜನೆಯನ್ನು ರೂಪಿಸಿದೆ.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿದ್ದರೆ ಇದರ ಬಗ್ಗೆ ಜನರು ಇಲಾಖೆಗೆ ಸುಳಿವು ನೀಡಬಹುದು. ಸುಳಿವು ನೀಡಿದವರಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಹಾಗೆಯೇ ಸುಳಿವು ನೀಡಿದವರ ಮಾಹಿತಿಯೂ ಕೂಡಾ ಗೌಪ್ಯವಾಗಿರಿಸಲಾಗುತ್ತದೆ ಎಂದು ಈ ಹಿಂದೆಯೇ ಆರೋಗ್ಯ ಇಲಾಖೆ ತಿಳಿಸಿತ್ತು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ (ಪಿಪಿಪಿಎನ್‌ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗುಪ್ತ ಕಾರ್ಯಾಚರಣೆಯು ಯಶಸ್ವಿಯಾದರೆ ಈ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಒಂದು ಲಕ್ಷ ರೂಪಾಯಿ ಬಹುಮಾನ ಮೊತ್ತದಲ್ಲಿ 50 ಸಾವಿರ ರೂ. ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮತ್ತು ಇನ್ನುಳಿದ 50 ಸಾವಿರ ರೂ. ಹಣವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಪಿಪಿಎನ್‌ಡಿಟಿ ಶುಲ್ಕದಿಂದ ಭರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದ ತಂಡವೊಂದನ್ನು ಕಳೆದ ಅಕ್ಟೋಬರ್​ನಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವಿರೇಶ್ ಎಂಬ ನಾಲ್ವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬಳಿಯ ಆಲೆಮನೆಯಲ್ಲಿ ಕೂಡ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಮಾಡುವುದು ಬೆಳಕಿಗೆ ಬಂದಿತ್ತು. ಇತ್ತೀಚೆಗೆ ಬೆಳಗಾವಿಯಲ್ಲಿ ಕೂಡ ಮಕ್ಕಳ ಮಾರಾಟ ಮತ್ತು ಭ್ರೂಣ ಹತ್ಯೆ ಮಾಡುತ್ತಿದ್ದ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ : ಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೇಘಾಲಯ: ಸಾರ್ವಜನಿಕವಾಗಿ ಮಹಿಳೆಗೆ ಅಮಾನುಷವಾಗಿ ಥಳಿತ; 6 ಮಂದಿ ಬಂಧನ

0
ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಆರು ಜನರನ್ನು ಮೇಘಾಲಯ ಪೊಲೀಸರು ಬಂಧಿಸಿದ್ದಾರೆ, ಶಾಲೆಯ ಆವರಣದಲ್ಲಿ ಹಲವಾರು ಪುರುಷರು ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ...