HomeUncategorizedಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ 'ಅಂತಿಮ' ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ ‘ಅಂತಿಮ’ ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

- Advertisement -
- Advertisement -

ಪ್ರತಿಭಟನಾನಿರತ ವೈದ್ಯರೊಂದಿಗೆ ಎರಡು ಬಾರಿ ನಡೆದ ಮಾತುಕತೆ ವಿಫಲಗೊಂಡ ನಂತರವೂ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪಶ್ಚಿಮ ಬಂಗಾಳ ಸರ್ಕಾರವು ಮತ್ತೊಮ್ಮೆ ವೈದ್ಯರನ್ನು ಸಂಪರ್ಕಿಸಿದೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್ ಅವರು ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿದ್ದು, “ಸಭೆಗೆ ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ” ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಸಭೆಯನ್ನು ವೀಡಿಯೊಗ್ರಾಫ್ ಮಾಡಲು ಅಥವಾ ಲೈವ್-ಸ್ಟ್ರೀಮ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ. ಇದೇ ಕಾರಣಕ್ಕೆ ಹಿಂದಿನ ಸಭೆಗಳು ರದ್ದಾಗಿದ್ದವು.

“ಇದು ಐದನೇ ಮತ್ತು ಕೊನೆಯ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ನಿಮ್ಮ ಪ್ರತಿನಿಧಿಗಳ ನಡುವಿನ ಸಭೆಗಾಗಿ ನಾವು ನಿಮ್ಮನ್ನು ಸಂಪರ್ಕಿಸುತ್ತಿದ್ದೇವೆ. ಹಿಂದಿನ ದಿನದ ನಮ್ಮ ಚರ್ಚೆಗೆ ಅನುಗುಣವಾಗಿ, ನಾವು ಮತ್ತೊಮ್ಮೆ ಮಾನ್ಯ ಮುಖ್ಯಮಂತ್ರಿಗಳೊಂದಿಗಿನ ಸಭೆಗೆ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ. ಅವರು ಕಾಳಿಘಾಟ್ ನಿವಾಸದಲ್ಲಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲಿದ್ದಾರೆ” ಎಂದು ಪತ್ರದಲ್ಲಿ ಆಹ್ವಾನಿಸಲಾಗಿದೆ.

ಇದನ್ನೂಓದಿ: ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಏತನ್ಮಧ್ಯೆ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಸೋಮವಾರ ಕೂಡಾ ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ. ವೈದ್ಯರ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ತಮ್ಮ ಕೆಲಸ ತೊರೆದು ನಡೆಸುತ್ತಿರುವ 36 ನೇ ದಿನದ ಮುಷ್ಕರವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ತಮ್ಮ ಧರಣಿ ನಡೆಸುವ ಮೂಲಕ ಮುಂದುವರೆಸಿದ್ದಾರೆ. ಅವರು ತಮ್ಮ ಬೇಡಿಕೆಗಳಾದ ಕೋಲ್ಕತ್ತಾ ಪೊಲೀಸ್ ಕಮಿಷನರ್ ಮತ್ತು ಹಿರಿಯ ರಾಜ್ಯ ಆರೋಗ್ಯ ಅಧಿಕಾರಿಗಳನ್ನು ವಜಾಗೊಳಿಸುವವರೆಗೂ ಮುಂದುವರಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸುತ್ತೇವೆ. ರಾಜ್ಯ ಸರಕಾರ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಧರಣಿ ನಿರತ ಕಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಭಟನಾ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ವೈದ್ಯರಿಗೆ ಅವರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಿಂದ ಸ್ನಾತಕೋತ್ತರ ಮಹಿಳಾ ವೈದ್ಯರ ಶವ ಪತ್ತೆಯಾಗಿತ್ತು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆ ನಡೆಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...