Homeಮುಖಪುಟಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ | ಅಪರಾಧ ಸ್ಥಳಕ್ಕೆ ಭೇಟಿ ನೀಡಲು ಸಂತ್ರಸ್ತೆಯ ಪೋಷಕರಿಂದ ಮನವಿ

ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ | ಅಪರಾಧ ಸ್ಥಳಕ್ಕೆ ಭೇಟಿ ನೀಡಲು ಸಂತ್ರಸ್ತೆಯ ಪೋಷಕರಿಂದ ಮನವಿ

- Advertisement -
- Advertisement -

ಪಶ್ಚಿಮ ಬಂಗಾಳದ ಆರ್‌ಜಿ ಕರ್‌ ಆಸ್ಪತ್ರೆ ಆವರಣದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಮಹಿಳಾ ವೈದ್ಯೆಯ ಪೋಷಕರಿಗೆ ಅಪರಾಧ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ (ಎಸಿಜೆಎಂ ಸೀಲ್ಡಾ) ಗುರುವಾರ ಕೈಗೆತ್ತಿಕೊಳ್ಳಲಿದೆ ಎಂದು ಕಲ್ಕತ್ತಾ ಹೈಕೋರ್ಟ್ ಗುರುವಾರ ತಿಳಿಸಿದೆ. ಆರ್‌ಜಿ ಕರ್ ಅತ್ಯಾಚಾರ

ಸಂತ್ರಸ್ತ ವೈದ್ಯೆಯ ಪೋಷಕರು ತಮ್ಮ ವಕೀಲ ಫಿರೋಜ್ ಎಡುಲ್ಜಿ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ, ತಾವು ಆ ಪ್ರದೇಶಕ್ಕೆ ಭೇಟಿ ನೀಡಲು ಬಯಸಿದ್ದು, ಆದರೆ ಆಗಸ್ಟ್ 9, 2024 ರಂದು ತಮ್ಮ ಮಗಳ ಶವ ಪತ್ತೆಯಾದ ಸೆಮಿನಾರ್ ಹಾಲ್‌ಗೆ ಭೇಟಿ ನೀಡಲು ಉದ್ದೇಶಿಸಿಲ್ಲ ಎಂದು ಮಂಗಳವಾರ ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರ ಪೀಠಕ್ಕೆ ಮೊದಲು ತಿಳಿಸಿದ್ದರು.

ಆರ್‌ಜಿ ಕರ್ ಆಸ್ಪತ್ರೆಯ ಭದ್ರತೆ ಕೇಂದ್ರ ಪಡೆಗಳ ಉಸ್ತುವಾರಿಯಲ್ಲಿರುವುದರಿಂದ, ಅಪರಾಧ ಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲು ಹೈಕೋರ್ಟ್‌ನಿಂದ ಅನುಮತಿ ಪಡೆಯುತ್ತಿದ್ದೇವೆ ಎಂದು ಎಡುಲ್ಜಿ ಹೇಳಿದ್ದರು.

ನ್ಯಾಯಮೂರ್ತಿ ಘೋಷ್ ಅವರು ಗುರುವಾರ ಸಂತ್ರಸ್ತೆಯ ಪೋಷಕರು ಎಸಿಜೆಎಂ ಸೀಲ್ಡಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಕೇಳಿಕೊಂಡರು. ಈ ವೇಳೆ ಕೆಳ ನ್ಯಾಯಾಲಯವು 48 ಗಂಟೆಗಳ ಒಳಗೆ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಆದೇಶಿಸಿದ್ದರು.

ಆದಾಗ್ಯೂ, ರಾಜ್ಯ ಸರ್ಕಾರವು ಪ್ರಕರಣದ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಲ್ಯಾಣ್ ಬ್ಯಾನರ್ಜಿ, ಸಂತ್ರಸ್ತೆಯ ಕುಟುಂಬವು ಈ ಹಿಂದೆ ನ್ಯಾಯಾಲಯವನ್ನು ಹೆಚ್ಚು ವಿವರವಾದ ತನಿಖೆಗಾಗಿ ಕೋರಿತ್ತು ಎಂದು ವಾದಿಸಿದ್ದಾರೆ.

ಅವರ ಹಿಂದಿನ ಅರ್ಜಿಯೆ ಇನ್ನೂ ವಿಲೇವಾರಿಯಾಗಿಲ್ಲ. ಇದೀಗ ಈ ಹೊಸ ಅರ್ಜಿಯು ಮಾಧ್ಯಮಗಳ ಗಮನ ಸೆಳೆಯುವ ಪ್ರಯತ್ನವಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಬಯಸಿದರೆ, ಕೆಳ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದಲ್ಲಿ ಪಕ್ಷವಾಗಿ ಸೇರಿಕೊಂಡು ತನ್ನ ಹೇಳಿಕೆಯನ್ನು ನೀಡಬಹುದು ಎಂದು ನ್ಯಾಯಮೂರ್ತಿ ಘೋಷ್ ಹೇಳಿದರು. ಆದಾಗ್ಯೂ, ಸಂತ್ರಸ್ತೆಯ ಕುಟುಂಬವು ಅಪರಾಧ ಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಲು ಬಯಸಿದರೆ ನಮಗೆ ಯಾವುದೇ ಅಭ್ಯಂತರವಿಲ್ಲ ಎಂದು ತನಿಖಾ ಸಂಸ್ಥೆ ಸಿಬಿಐ ಹೇಳಿದೆ.

ಕಳೆದ ಆಗಸ್ಟ್‌ನಲ್ಲಿ, ಆರ್‌ಜಿ ಕರ್ ಆಸ್ಪತ್ರೆಯ ತುರ್ತು ಕಟ್ಟಡದಲ್ಲಿ ಯುವ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಯಿತು. ಈ ಘಟನೆಯಲ್ಲಿ ಕೋಲ್ಕತ್ತಾ ಪೊಲೀಸರ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ಅವರನ್ನು ಬಂಧಿಸಲಾಯಿತು. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ಘಟನೆಯ ತನಿಖೆಯನ್ನು ವಹಿಸಿಕೊಂಡಿತು.

ಇದರ ನಂತರ ಕೋಲ್ಕತ್ತಾ ಪೊಲೀಸರು ಬಂಧಿಸಿದ ನಾಗರಿಕ ಸ್ವಯಂಸೇವಕನನ್ನು ಸಿಬಿಐ ವಶಕ್ಕೆ ಪಡೆದರು. ಎಸಿಜೆಎಂ ಸೀಲ್ಡಾ ನ್ಯಾಯಾಲಯದಲ್ಲಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಚಾರ್ಜ್‌ಶೀಟ್‌ನಲ್ಲಿ ಸಂಜಯ್ ಹೆಸರು ಆರೋಪಿಯಾಗಿ ಮಾತ್ರ ಕಾಣಿಸಿಕೊಂಡಿದೆ. ಎಸಿಜೆಎಂ ಸೀಲ್ಡಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಆರ್‌ಜಿ ಕರ್ ಅತ್ಯಾಚಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಟ್ರಾನ್ಸ್‌ಜೆಂಡರ್‌ಗಳಿಗೆ ಶೇ 0.5 ಮೀಸಲಾತಿ: ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಹಂಗಾಮಿ ಸಿಜೆ ಕಾಮೇಶ್ವರ ರಾವ್‌

ಟ್ರಾನ್ಸ್‌ಜೆಂಡರ್‌ಗಳಿಗೆ ಶೇ 0.5 ಮೀಸಲಾತಿ: ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಹಂಗಾಮಿ ಸಿಜೆ ಕಾಮೇಶ್ವರ ರಾವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...