Homeಮುಖಪುಟಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಕೋಲ್ಕತ್ತಾದ ಪ್ರತಿಷ್ಠಿತ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ನ್ಯಾಯಾಲಯ ಸೋಮವಾರ (ಜ.20) ಜೀವಾವಧಿ ಶಿಕ್ಷೆ ವಿಧಿಸಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 103(1)ರ ಅಡಿಯಲ್ಲಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಕೋಲ್ಕತ್ತಾದ ಸಿಯಾಲದಹ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬಕ್ಕೆ 17 ಲಕ್ಷ ಪರಿಹಾರ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಪ್ರಕರಣದ ವಿಚಾರಣೆ ವೇಳೆ ಕೇಂದ್ರ ತನಿಖಾ ದಳವು (ಸಿಬಿಐ) ಆರೋಪಿ ಸಂಜಯ್ ರಾಯ್‌ಗೆ ‘ಮರಣದಂಡನೆ’ ವಿಧಿಸುವಂತೆ ಕೋರಿತ್ತು. ಅಪರಾಧಿಗೆ ಮರಣದಂಡನೆ ವಿಧಿಸಲು ಈ ಪ್ರಕರಣ “ಅಪರೂಪದಲ್ಲಿ ಅಪರೂಪ” ವರ್ಗಕ್ಕೆ ಸೇರುವುದಿಲ್ಲ ಎಂದು ನ್ಯಾಯಾಧೀಶ ದಾಸ್ ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಅಪರಾಧಿ ಸಂಜಯ್ ರಾಯ್ “ತಾನು ಏನೂ ತಪ್ಪು ಮಾಡಿಲ್ಲ. ತನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಸುಮ್ಮನೆ ಸಿಲುಕಿಸಲಾಗಿದೆ. ನನಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರಿಗೆ ಬೇಕಾದುದ್ದಕ್ಕೆ ಸಹಿ ಹಾಕುವಂತೆ ಒತ್ತಾಯಿಸಿದ್ದಾರೆ” ಎಂದು ಪುನರುಚ್ಚರಿಸಿದ್ದಾರೆ.

ಅಪರಾಧಿ ಪರ ವಕೀಲರು ವಾದ ಮಂಡಿಸಿ, “ಇದು ಅಪರೂಪದ ಪ್ರಕರಣವಾಗಿದ್ದರೂ ಸಹ, ಸುಧಾರಣೆಗೆ ಅವಕಾಶವಿರಬೇಕು. ಅಪರಾಧಿ ಸುಧಾರಣೆ ಅಥವಾ ಪುನರ್ವಸತಿಗೆ ಏಕೆ ಅರ್ಹನಲ್ಲ ಎಂದು ನ್ಯಾಯಾಲಯ ತೋರಿಸಬೇಕು. ಸರ್ಕಾರಿ ಅಭಿಯೋಜಕರು ಈ ಸಂಬಂಧ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಬೇಕು ಮತ್ತು ವ್ಯಕ್ತಿಯು ಸುಧಾರಣೆಗೆ ಅರ್ಹನಲ್ಲ ಎಂಬುದಕ್ಕೆ ಕಾರಣಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆದರೆ, ಸಂತ್ರಸ್ತೆಯ ಕುಟುಂಬದ ಪರ ವಕೀಲರು, ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆ ವಿಧಿಸುವಂತೆ ಕೋರಿದ್ದಾರೆ. ಸಂತ್ರಸ್ತೆಯ ತಂದೆ ಕೂಡ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದು, ಬೀದಿಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್‌ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ರಾಯ್ ದೋಷಿ ಎಂದು ನ್ಯಾಯಾಧೀಶರು ಶನಿವಾರ ಆದೇಶ ಪ್ರಕಟಿಸಿದ್ದರು.

ಹೆತ್ತ ತಾಯಿಯನ್ನು ಕೊಲೆಗೈದ ಮಗ : ‘ಜನ್ಮ ನೀಡಿದ್ದಕ್ಕೆ ಕೊಂದೇ’ ಎಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...