Homeಮುಖಪುಟರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ, ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿಧದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಗಳಿಗೆ ಸಂಬಂಧಿಸಿದಂತೆ ಇಂದು ಎನ್‌ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ನಟಿ ತಾನು ಡ್ರಗ್ಸ್ ಬಳಸುತ್ತಿದ್ದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಸ್ಟಡಿಯಲ್ಲಿರುವ ರಿಯಾ ಚಕ್ರವರ್ತಿಯನ್ನು ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಕಸ್ಟಡಿಗೆ ಪಡೆಯುವುದಿಲ್ಲ ಎಂದು ಆನ್‌ಲೈನ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಿಳಿಸಿದೆ. ಏಕೆಂದರೆ ಮೂಲಗಳ ಪ್ರಕಾರ ಸಂಸ್ಥೆ ತನಗೆ ಬೇಕಾದ ಪುರಾವೆ ಮತ್ತು ಮಾಹಿತಿಯನ್ನು ಸಂಪೂರ್ಣವಾಗಿ ಹೊಂದಿದೆ ಎಂದು ಮೂಲಗಳು ತಿಳಿಸುತ್ತವೆ. ನಟಿಗೆ ಜಾಮೀನು ನೀಡುವ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ.

ನಟ ಸುಶಾಂತ್ ಸಿಂಗ್ ರಜಪೂತ್‌ರ ಕೊನೆಯ ದಿನಗಳಲ್ಲಿ ರಿಯಾ ಚಕ್ರವರ್ತಿ ಆತನ ಗೆಳತಿಯಾಗಿದ್ದರು. ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿದ್ದದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

28 ವರ್ಷದ ನಟಿ ಟಿವಿ ಸಂದರ್ಶನದಲ್ಲಿ ಡ್ರಗ್ಸ್ ಬಳಸುವುದನ್ನು ನಿರಾಕರಿಸಿದ್ದರು. ಆದರೆ ಕಳೆದ ವಾರ ತನ್ನ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಿದಾಗ ನಟಿ ಆತಂಕಕ್ಕೆ ಒಳಗಾಗಿದ್ದರು.

ಆಕೆಯ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನ್ನ ವಿಚಾರಣೆಯನ್ನು ಪ್ರಾರಂಭಿಸಿತು, ಇದು ಔಷಧಿಗಳನ್ನು ಸಂಗ್ರಹಿಸುವ, ಹಂಚುವ ಬಗ್ಗೆ ಅನುಮಾನಾಸ್ಪದ ಸಂಭಾಷಣೆಗಳನ್ನು ಬಹಿರಂಗಪಡಿಸಿತು.

ಎರಡನೇ ದಿನದಂದು ರಿಯಾ ಚಕ್ರವರ್ತಿ “ನಾನು ಏನೇ ಮಾಡಿದರೂ ಸುಶಾಂತ್‌ಗಾಗಿ ಮಾಡಿದ್ದೇನೆ”  ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಮುಂದೆ ಭಾವನಾತ್ಮಕವಾಗಿ ಮಾತನಾಡಿದ್ದರು.

ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ರಜಪೂತ್ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಗಾಂಜಾ ಖರೀದಿಸಿರುವ ಬಗ್ಗೆ ಪುರಾವೆಗಳಿವೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಹೇಳಿಕೊಂಡಿದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ರಿಯಾ ಮತ್ತು ಶೋಯಿಕ್ ಚಕ್ರವರ್ತಿಯವರ ಆದೇಶದ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯ ಸಿಬ್ಬಂದಿ ದೀಪೇಶ್ ಸಾವಂತ್ ಅವರು ಮಾರ್ಚ್ ಮತ್ತು ಜೂನ್ ನಡುವೆ ಒಟ್ಟು 165 ಗ್ರಾಂ ಗಾಂಜಾವನ್ನು ಸಂಗ್ರಹಿಸಿ ನೀಡಿದ್ದಾರೆ ಎಂದು ಬ್ಯೂರೋ ಹೇಳಿಕೊಂಡಿದೆ. ಜೊತೆಗೆ ಸೆಪ್ಟೆಂಬರ್ 2018 ರಿಂದ ಸುಶಾಂತ್ ಸಿಂಗ್ ರಜಪೂತ್ ಅವರು ಗಾಂಜಾ ಸೇದುವುದನ್ನು ನೋಡಿದ್ದೇನೆ ಎಂದು ಸಾವಂತ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬವು ನಟಿ ರಿಯಾ ಮೇಲೆ ದೂರು ನೀಡಿತ್ತು. ಸುಶಾಂತ್‌ನನ್ನು  ಹಣಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ, ಮಾನಸಿಕವಾಗಿ ಕಿರುಕುಳ ನೀಡಿ ಮತ್ತು ಅವರ ಸಾವಿನಲ್ಲಿ ಪಾತ್ರವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸದ್ಯ ರಿಯಾ ಚಕ್ರವರ್ತಿಯನ್ನು ಮೂರು ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.


ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...