Homeಮುಖಪುಟಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಗಾಗಿ ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 10 ಕೆ.ಜಿ ಅಕ್ಕಿ ನೀಡಲು 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಅಕ್ಕಿ ಕೊಡುವುದಾಗಿ ತಿಳಿಸಿದೆ ಎಂದರು.

ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ. ಖಾಸಗಿಯವರಿಗೆ ಹರಾಜು ಮಾಡುತ್ತಾರೆ. ಆದರೆ, ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. ಇಂತಹ ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದ್ದಾರೆ.

ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ಸಿದ್ಧಗೊಂಡಿದೆ: ಡಿ.ಕೆ ಶಿವಕುಮಾರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...