Homeಮುಖಪುಟಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಹಸಿವು ನೀಗಿಸುತ್ತಿರುವ ’ರಿಕ್ಷಾ ಚಾಲಕ’

- Advertisement -
- Advertisement -

ಪುಣೆ ಮೂಲದ ಆಟೋರಿಕ್ಷಾ ಚಾಲಕರೊಬ್ಬರು ತನ್ನ ಮದುವೆಗೆ ಉಳಿಸಿದ ಹಣದಿಂದ ವಲಸೆ ಕಾರ್ಮಿಕರ ಆಹಾರಕ್ಕಾಗಿ ಬಳಸುತ್ತಾ ಆದರ್ಶವನ್ನು ಮೆರೆದಿದ್ದಾರೆ. ಇದರಿಂದ ಪ್ರಭಾವಿತರಾದ ಹಲವಾರು ಜನರು ಅವರಿಗೆ ಹಣದ ಸಹಾಯವನ್ನು ಮಾಡುತ್ತಿದ್ದಾರೆ.

ಅಕ್ಷಯ್ ಕೊಥಾವಾಲೆ (30) ಮಹಾರಾಷ್ಟ್ರದ ಪುಣೆಯಲ್ಲಿ ಅಗತ್ಯವಿರುವ ಹಾಗೂ ಬಡ ಜನರಿಗೆ ಆಹಾರ ಮತ್ತು ಪಡಿತರ ಕಿಟ್‌ಗಳನ್ನು ಒದಗಿಸಲು ತನ್ನ ಹಣ ಮತ್ತು ತನಗೆ ದೊರೆತ ಸಹಾಯದ ಹಣವನ್ನೂ ಮತ್ತೆ ಬಳಸುತ್ತಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೊತವಾಲೆ, ತನಗೆ ದೊರೆತ ಅಪಾರ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ ಮತ್ತು ಪುಣೆಯಲ್ಲಿ ಅಗತ್ಯವಿರುವವರಿಗೆ ಸಹಾಯ ಮಾಡಲು ನನ್ನನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ಷಯ್ ಕೊಥಾವಾಲೆ ತನ್ನ ಮದುವೆಗೆಂದು 2 ಲಕ್ಷ ರೂ.ಗಳನ್ನು ಉಳಿಸಿದ್ದರು. ಮದುವೆಯನ್ನು ಮೇ 25 ರಂದು ನಿಗದಿಪಡಿಸಲಾಗಿತ್ತು ಆದರೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಜಾರಿಗೊಳಿಸಿದ ಲಾಕ್‌ಡೌನ್ ಕಾರಣ ಮದುವೆಯನ್ನು ಮುಂದೂಡಲಾಗಿತ್ತು.

ಬಡ ಜನರು ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು, ಯಾವುದೇ ಕೆಲಸ ಮತ್ತು ಆದಾಯವಿಲ್ಲದ ಕಾರಣ ಸಂಕಷ್ಟಗಳನ್ನು ಎದುರಿಸುತ್ತಿರುವುದನ್ನು ನೋಡಿದ ಅವರು, ತಮ್ಮಲ್ಲಿರುವ ಹಣದಿಂದ ಕೆಲವು ಸ್ನೇಹಿತರೊಂದಿಗೆ ಸೇರಿ ಆಹಾರವನ್ನು ಸಿದ್ಧಪಡಿಸುವ ಅಡುಗೆಮನೆ ಸ್ಥಾಪಿಸಿ, ಆಹಾರವನ್ನು ಪುಣೆಯ ಹಲವಾರು ಸ್ಥಳಗಳಲ್ಲಿ ವಿತರಿಸಿದರು.

ಅವರ ತಂದೆ ಕಳೆದ ತಿಂಗಳು ನಿಧನರಾಗಿದ್ದು, ಇದರ ಮಧ್ಯೆಯೂ ಅಕ್ಷಯ್ ತಮ್ಮ ಸೇವೆಯನ್ನು ಮುಂದುವರೆಸಿದ್ದರು. ತಮಗೆ ಒದಗಿ ಬಂದ ದುರಂತದ ನಡುವೆಯೂ ಆಹಾರ ವಿತರಣೆಯನ್ನು ಮುಂದುವರೆಸುವ ಅವರ ಸಂಕಲ್ಪದ ಬಗ್ಗೆ ಓದಿದ ದೇಶದಾದ್ಯಂತ ಹಲವಾರು ಜನರು ಆರ್ಥಿಕ ಸಹಾಯವನ್ನು ನೀಡಿದ್ದಾರೆ.

“ನಾನು ದೇಶಾದ್ಯಂತದ ಜನರಿಂದ ಸುಮಾರು 6 ಲಕ್ಷ ರೂ. ಪಡೆದಿದ್ದೇನೆ. ನಮ್ಮ ಕಾರ್ಯಕ್ರಮದ ಬಗ್ಗೆ ಓದಿದ ಹಲವಾರು ಜನರು ಮುಂದೆ ಬಂದು ಸಹಾಯ ಹಸ್ತ ನೀಡಿದ್ದಾರೆ. ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳುತ್ತಾರೆ.

ತಾನು ಸ್ವೀಕರಿಸಿದ ಹಣದಿಂದ ಹಲವಾರು ಪ್ರದೇಶಗಳಲ್ಲಿ ಆಹಾರ ವಿತರಣೆಯನ್ನು ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

“ಕೈಯಲ್ಲಿರುವ ಹಣದೊಂದಿಗೆ, ನಾವು ಸಗಟು ಮಾರುಕಟ್ಟೆಯಿಂದ ಅಗತ್ಯವಾದ ದಿನಸಿ ವಸ್ತುಗಳನ್ನು ಖರೀದಿಸಿದ್ದೇವೆ, ನಂತರ ಅದನ್ನು ಬೇಯಿಸಿದ ಆಹಾರದ ಜೊತೆಗೆ, ಅಗತ್ಯವಿರುವ ಕುಟುಂಬಗಳಿಗೆ ಪಡಿತರ ಕಿಟ್‌ಗಳನ್ನು ವಿತರಿಸಲು ನಾವು ಯೋಜಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಆಹಾರ ವಿತರಣೆಯ ಜೊತೆಗೆ, ಅಕ್ಷಯ್ ಕೊಥವಾಲೆ ತಮ್ಮ ಸ್ವಂತ ರಿಕ್ಷಾದಲ್ಲಿ ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಉಚಿತ ಸವಾರಿಯನ್ನೂ ನೀಡುತ್ತಾರೆ.

ಅವರು ತಮ್ಮ ಆಟೋರಿಕ್ಷಾದಲ್ಲಿ ಧ್ವನಿವರ್ಧಕವನ್ನು ಹಾಕಿದ್ದು, ಅದರ ಮೂಲಕ ಅವರು ಮತ್ತು ಅವರ ಸ್ನೇಹಿತರು ಕೊರೊನಾ ಸಾಂಕ್ರಮಿಕದ ವಿರುದ್ಧ ಹೇಗೆ ಸುರಕ್ಷಿತವಾಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.


ಓದಿ: ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟಿರುವ ನಟರಾದ ಸೋನು ಸೂದ್‌ ಹಾಗೂ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...