Homeಕರ್ನಾಟಕಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

- Advertisement -
- Advertisement -

ಹೊಸ ವರ್ಷಾಚರಣೆ ವೇಳೆ ಅನೇಕ ಕನ್ನಡ ಟಿವಿ ಚಾನೆಲ್‌ಗಳು ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ನಡುವೆ ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಕ್ಯಾಮೆರಾ ಮುಂದೆಯೆ ಯುವಕರೊಬ್ಬರಿಗೆ ಜನಾಂಗಿಯ ನಿಂದನೆ ಮಾಡಿದ್ದಾರೆ.

ಹೊಸವರ್ಷದ ಆಚರಣೆ ವೇಳೆ ಕನ್ನಡದ ಪ್ರಮುಖ ಸುದ್ದಿ ವಾಹಿನಿಗಳು ಬೆಂಗಳೂರಿನ ಎಂಜಿ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದ ಪಬ್‌ಗಳು ಮತ್ತು ಬಾರ್‌ಗಳಿಂದ ಯುವಕ, ಯುವತಿಯರು ನಿರ್ಗಮಿಸುವ ವೀಡಿಯೊಗಳನ್ನು ಪ್ರಸಾರ ಮಾಡಿತ್ತು. ಜೊತೆಗೆ ಅದಕ್ಕೆ ಕೆಟ್ಟದಾಗಿ ಶೀರ್ಷಿಕೆ ಹಾಕಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲೂ ಪ್ರಸಾರ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಮಧ್ಯೆ, ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಅಶ್ವ ದಿವಿತ್ ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿ ಸೇರಿದ್ದ ಜನರೊಂದಿಗೆ ಹೊಸ ವರ್ಷಾಚರಣೆಯ ಅಭಿಪ್ರಾಯಗಳನ್ನು ಕೇಳುತ್ತಿದ್ದರು. ಈ ವೇಳೆ ಯುವಕನೊಬ್ಬ, ಸಿನಿಮಾ ಡೈಲಾಗ್‌ ಒಂದನ್ನು ಹೇಳುತ್ತಾ, ಏನ್ರಿ ಮೀಡಿಯಾ ಎಂದು ರಿಪಬ್ಲಿಕ್ ಕನ್ನಡ ಟಿವಿ ಮೈಕ್ ಮುಂದೆ ಕೇಳಿದ್ದಾರೆ. ಈ ವೇಳೆ ಅಸಮಾಧಾನದಿಂದ ಮಾತನಾಡಿದ ವರದಿಗಾರ ಅಶ್ವ ದಿವಿತ್, ”ಹೋಗೋ ಕರಿಯ ಹೋಗ್…” ಎಂದು ಕ್ಯಾಮೆರಾ ಮುಂದೆಯೆ ಎರೆಡೆರೆದು ಭಾರಿ ಹೇಳಿ, ಯುವಕನ ಜನಾಂಗೀಯ ನಿಂದನೆ ಮಾಡಿದ್ದಾರೆ.

ವಿಡಿಯೊವನ್ನು ರಿಪಬ್ಲಿಕ್ ಕನ್ನಡ ಟಿವಿ ತನ್ನ ಯೂಟ್ಯೂಬ್‌ನಲ್ಲಿ ಹಾಗೆ ಪ್ರಸಾರ ಮಾಡಿದ್ದು, ಅದನ್ನು ಹಾಗೆಯೆ ಉಳಿಸಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಗೌಡ್ರು ಸರ್ಕಾರ ಎಂಬ ಟ್ವಿಟರ್ ಖಾತೆಯೊಂದು, “ಏನ್ರಿ ಮೀಡಿಯಾ ಅಂದಿದ್ದಕ್ಕೆ ಅಷ್ಟೊಂದು ಕೋಪ ಬಂತಾ? ಪ್ರತಿಷ್ಠಿತ ಸಂಸ್ಥೆಯ ನ್ಯೂಸ್ ರಿಪೋರ್ಟರ್ ಒಬ್ಬ ಯುವಕನಿಗೆ ನೇರವಾಗಿ ಹೋಗೋ ಕರಿಯಾ ಎಂದು ಜನಾಂಗೀಯ ನಿಂದನೆ ಮಾಡುತ್ತಿದ್ದಾನೆ, ಹಾಗಾದರೆ ಅವನ ಮೇಲೆ ಕ್ರಮ ಕೈಗೊಳ್ಳಬಾರದೇಕೆ?” ಎಂದು ಪ್ರಶ್ನಿಸಿದ್ದಾರೆ.

ಇಷ್ಟೆ ಅಲ್ಲದೆ, ಕನ್ನಡದ ಇತರ ಟಿವಿ ಮಾಧ್ಯಮಗಳು, ಹೊಸ ವರ್ಷಾಚರಣೆ ಮಾಡುತ್ತಿದ್ದ ಯುವತಿಯರ ದೇಹದ ಮೇಲೆ ಕ್ಯಾಮರಾವನ್ನು ಜೂಮ್ ಮಾಡಿ, ಅದರಕ್ಕೆ ಅಶ್ಲೀಲ ಶೀರ್ಷಿಕೆಯನ್ನು ಹಾಕಿ ಪ್ರಸಾರ ಮಾಡಿವೆ. ಈ ಬಗ್ಗೆ ಸರ್ಕಾರ ಯಾವುದೆ ಪ್ರತಿಕ್ರಿಯೆ ನೀಡಿಲ್ಲ, ದೂರು ಕೂಡಾ ದಾಖಲಾಗಿಲ್ಲ. ಅಲ್ಲದೆ, ಮಹಿಳಾ ಆಯೋಗ ಮತ್ತು ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುವ ಯಾವುದೆ ಪ್ರಾಧಿಕಾರಗಳು ಪ್ರತಿಕ್ರಿಯೆ ನೀಡಿಲ್ಲ.

ಕನ್ನಡ ಮಾಧ್ಯಮಗಳ ಈ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ತಜ್ಞರು, “ಸಾರ್ವಜನಿಕ ಪ್ರದೇಶದಲ್ಲಿ ಚಿತ್ರೀಕರಿಸಲು ಯಾವುದೇ ಕಾನೂನು ನಿರ್ಬಂಧವಿಲ್ಲದಿದ್ದರೂ, ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಖಾಸಗಿ ವ್ಯಕ್ತಿಯ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡಿದರೆ ಕಾನೂನು ವಿರೋಧಿಯಾಗಿದೆ” ಎಂದು ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79, ಮಹಿಳೆಯ ಗೌಪ್ಯತೆಯ ಉಲ್ಲಂಘನೆ ಮಾಡಿ ಅವಮಾನಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದ ಕಠಿಣ ಶಿಕ್ಷೆಯಿದೆ.

ಇದನ್ನೂಓದಿ:  ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...