Homeಮುಖಪುಟಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

ಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

- Advertisement -
- Advertisement -

ಹೆರಿಗೆ ರಜೆ ಎಂಬುದು ಮಹಿಳಾ ಉದ್ಯೋಗಿಯ ಸಂತಾನೋತ್ಪತ್ತಿ ಹಕ್ಕು ಮತ್ತು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನ ಭಾಗವಾಗಿದೆ. ಮಹಿಳೆಗೆ ಜನಿಸಿದ್ದು ಮೂರನೇ ಮಗು, ಎರಡನೇ ಮದುವೆಯಿಂದ ಪಡೆದದ್ದು ಎಂಬ ಕಾರಣಗಳನ್ನು ಮುಂದಿಟ್ಟು ಆಕೆಗೆ ಹೆರಿಗೆ ರಜೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.23) ತೀರ್ಪು ನೀಡಿದೆ.

ಮಹಿಳಾ ಉದ್ಯೋಗಿ ಮೂರನೇ ಮಗುವಿಗೆ ಜನ್ಮ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಆಕೆಗೆ ಹೆರಿಗೆ ರಜೆ ನಿರಾಕರಿಸುವುದು ಸಂವಿಧಾನದ 21ನೇ ವಿಧಿಯಡಿ ಆಕೆಗೆ ದೊರೆಯಬೇಕಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿರುವುದಾಗಿ barandbench.com ವರದಿ ಮಾಡಿದೆ.

ತಮಿಳುನಾಡಿನ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು 2021ರಲ್ಲಿ ತಮ್ಮ ಎರಡನೇ ಮದುವೆಯ ಫಲವಾಗಿ ಗರ್ಭ ಧರಿಸಿದ ಹಿನ್ನೆಲೆ ಹೆರಿಗೆ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ತಮ್ಮ ಮೊದಲ ಮದುವೆಯಿಂದ ಆಕೆಗೆ ಇಬ್ಬರು ಮಕ್ಕಳು ಜನಿಸಿದ್ದರು. ವಿಚ್ಛೇದನ ಪಡೆದಿದ್ದ ಹಿನ್ನೆಲೆಯಲ್ಲಿ ಮೊದಲ ಮದುವೆಯ ಫಲವಾಗಿ ಜನಿಸಿದ ಮಕ್ಕಳು ಮಾಜಿ ಪತಿಯ ಸುಪರ್ದಿಯಲ್ಲೇ ಇದ್ದರು.

ಎರಡನೇ ಮದುವೆಯ ಫಲವಾಗಿ ಜನಿಸಿದ ಮಗುವಿಗೆ ಆಕೆ ಜನ್ಮ ನೀಡಿದ್ದರೂ, ಜಿಲ್ಲಾ ಶಿಕ್ಷಣ ಕಚೇರಿ ಆಕೆಗೆ ಹೆರಿಗೆ ರಜೆ ನಿರಾಕರಿಸಿತ್ತು. ತಮಿಳುನಾಡು ಮೂಲಭೂತ ನಿಯಮಾವಳಿಯ ನಿಯಮ 101(ಎ) ಪ್ರಕಾರ ಎರಡು ಮಕ್ಕಳು ಪಡೆಯುವವರೆಗೆ ಮಾತ್ರ ಮಹಿಳಾ ಸರ್ಕಾರಿ ನೌಕರರಿಗೆ ಹೆರಿಗೆ ರಜೆ ಪಡೆಯಲು ಅವಕಾಶ ಇರುತ್ತದೆ. ಆದರೆ, ಅರ್ಜಿದಾರೆ ಮೂರನೇ ಮಗು ಪಡೆಯುತ್ತಿರುವುದರಿಂದ ಆಕೆ ಹೆರಿಗೆ ರಜೆ ಪಡೆಯಲು ಅರ್ಹರಲ್ಲ ಎಂದು ಅದು ಹೇಳಿತ್ತು.

ಈ ಹಿನ್ನೆಲೆಯಲ್ಲಿ ಆಕೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಏಕ ಸದಸ್ಯ ಪೀಠ ಆಕೆಯ ಪರವಾಗಿ ತೀರ್ಪು ನೀಡಿತ್ತು. ಆಕೆಯ ಮೊದಲ ಇಬ್ಬರು ಮಕ್ಕಳು ಆಕೆ ಸೇವೆಗೆ ಸೇರುವ ಮುನ್ನ ಜನಿಸಿದ್ದರಿಂದ ಈ ಪ್ರಕರಣದಲ್ಲಿ ಇಬ್ಬರು ಮಕ್ಕಳಿಗಷ್ಟೇ ಹೆರಿಗೆ ರಜೆ ಅನ್ವಯ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತಿಲ್ಲ ಎಂದು ಅದು ಹೇಳಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಮಾತೃತ್ವ ರಜೆ ಮೂಲಭೂತ ಹಕ್ಕಲ್ಲ ಬದಲಿಗೆ ಸೇವಾ ಷರತ್ತಿನನ್ವಯ ದೊರೆಯುವ ಹಕ್ಕು ಎಂದ ವಿಭಾಗೀಯ ಪೀಠ ಆಕೆಗೆ ಪರಿಹಾರ ನಿರಾಕರಿಸಿತ್ತು. ಹೀಗಾಗಿ ಆಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಹೈಕೋರ್ಟ್‌ ವಿಭಾಗೀಯ ಪೀಠದ ತಾರ್ಕಿಕತೆಯನ್ನು ಒಪ್ಪದ ಸುಪ್ರೀಂ ಕೋರ್ಟ್ ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮೂಲಭೂತ ಹಕ್ಕು ಸಂತಾನೋತ್ಪತ್ತಿಯನ್ನೂ ಒಳಗೊಂಡಿದೆ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಜಾರಿಗೊಳಿಸಲು ಉದ್ದೇಶಿಸಲಾದ ನೀತಿಗಳು ದುಡಿಯುವ ಮಹಿಳೆಯರ ಘನತೆ ಮತ್ತು ಕಲ್ಯಾಣಕ್ಕೆ ಅನುಗುಣವಾಗಿರಬೇಕು ಎಂದಿದೆ.

ಪ್ರಸಕ್ತ ಪ್ರಕರಣಗಳಂತಹ ಸಂದರ್ಭಗಳಲ್ಲಿ ಎರಡು ಮಕ್ಕಳ ನಿಯಮವನ್ನು ಯಾಂತ್ರಿಕ ರೀತಿಯಲ್ಲಿ ಅನ್ವಯಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶ ರದ್ದುಗೊಳಿಸಿದೆ ಮತ್ತು ಎಫ್‌ಆರ್ 101(ಎ) ಅಡಿಯಲ್ಲಿ ಅವರಿಗೆ ಹೆರಿಗೆ ರಜೆ ನೀಡಬೇಕೆಂದು ನಿರ್ದೇಶಿಸಿದೆ. ಅಲ್ಲದೆ, ಎರಡು ತಿಂಗಳೊಳಗೆ ಆಕೆಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುವಂತೆ ಆದೇಶಿಸಿದೆ.

ಸೌಜನ್ಯ : barandbench.com

ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...