HomeಅಂಕಣಗಳುKarnataka against SIRಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

- Advertisement -
- Advertisement -

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ ನಾಗರಿಕರು ಮತ್ತು ಹೋರಾಟಗಾರರು ಗಂಭೀರ ಚಿಂತನೆಯೊಂದಿಗೆ ಸ್ವಾಗತಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ: ಪ್ರಜೆಯ ಜವಾಬ್ದಾರಿ

ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿದರು. ನಮ್ಮ ಹೆಸರು ಪಟ್ಟಿಯಲ್ಲಿದೆ ಎಂದು ನಿಷ್ಕಾಳಜಿ ವಹಿಸುವಂತಿಲ್ಲ. ಇದೇ ತಿಂಗಳ 30ರಿಂದ ನಡೆಯಲಿರುವ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಸಕ್ರಿಯವಾಗಿ ಭಾಗವಹಿಸಬೇಕು. ಬಿಎಲ್‌ಒ (BLO)ಗಳು ನೀಡುವ ನಮೂನೆಗಳನ್ನು ಪೂರ್ಣಗೊಳಿಸಿ ಸಲ್ಲಿಸುವುದು ಪ್ರತಿಯೊಬ್ಬ ಅರ್ಹ ಮತದಾರನ ಆದ್ಯ ಕರ್ತವ್ಯವಾಗಿದೆ ಎಂದು ಕರೆ ನೀಡಿದರು.

ಮುಂದುವರೆದು ಮಾತನಾಡುತ್ತಾ, ನಮ್ಮ ತಾಲೂಕಿನಾದ್ಯಂತ ಬಿಎಲ್‌ಎ (BLA)ಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಮನೆ ಮನೆಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟು ಹೋದರೆ ಅದು ಕೇವಲ ಮತದಾನದ ಹಕ್ಕಿನ ಕಸಿಯುವಿಕೆಯಲ್ಲ, ಬದಲಾಗಿ ಸರ್ಕಾರದ ವಿವಿಧ ಕಲ್ಯಾಣ ಸೌಲಭ್ಯಗಳಿಂದಲೂ ವಂಚಿತರಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಎಚ್ಚರದಿಂದಿದ್ದು, ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಸಂವಿಧಾನದ ಆಶಯ ಮತ್ತು ಆತಂಕ:

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಲಿತ ಮುಖಂಡ ತರೀಕೆರೆ ವೆಂಕಟೇಶ್ ಅವರು, ಸಂವಿಧಾನದ ಆಶಯಗಳನ್ನು ಸ್ಮರಿಸುತ್ತಾ ಆತಂಕ ವ್ಯಕ್ತಪಡಿಸಿದರು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಾರ್ವತ್ರಿಕ ಮತದಾನದ ಹಕ್ಕು ಭಾರತೀಯ ಪ್ರಜಾಪ್ರಭುತ್ವದ ಜೀವಾಳ. ಆದರೆ, ಇಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಪ್ರಭಾವದಿಂದ ಚುನಾವಣಾ ಆಯೋಗದ ನಿಷ್ಪಕ್ಷಪಾತ ಕಾರ್ಯನಿರ್ವಹಣೆಯ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಸಂಶಯಗಳು ವ್ಯಕ್ತವಾಗುತ್ತಿವೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ‘ಪ್ರಜೆಗಳೇ ಪ್ರಭುಗಳು’ ಎಂಬ ತತ್ವವು ಗೌಣವಾಗುತ್ತಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಕಳವಳಕಾರಿ ಸಂಗತಿ ಎಂದು ಅವರು ವಿಶ್ಲೇಷಿಸಿದರು.

ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಹಾಲ ವಜ್ರಪ್ಪ ಮಾತನಾಡಿ SIR ವಿರೋಧಿ ಜಾಥಾದ ಸದುದೇಶವನ್ನು ನಾವೆಲ್ಲರು ಅರ್ಥ ಮಾಡಿಕೊಳ್ಳಬೆಕು, ಸರ್ಕಾರಗಳು ಪ್ರಜೆಗಳ ರಕ್ಷಣೆಗೆ ನಿಲ್ಲಬೇಕು ಆದರೆ ಅವುಗಳು ತಮ್ಮ ಜವಾಬ್ದಾರಿ ಮರೆತಾಗ ಹೀಗೆ ನಾಗರಿಕ ಸಮಾಜ ಜನರ ಬೆಂಬಲವಾಗಿ ನಿಲ್ಲಬೇಕಾಗುತ್ತದೆ. ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಲ್ಲಿ ಆಗಿರುವ ಅನಾಹುತಗಳು ಕರ್ನಾಟಕದಲ್ಲಿ ಆಗದಂತೆ ನಾವು ತಡೆಯೊಡ್ಡಬೇಕೆಂದು ಕರೆ ನೀಡಿದರು.

ಈ ಜಾಗೃತಿ ಸಭೆಯಲ್ಲಿ ಎಪಿಸಿಆರ್ (APCR) ಜಿಲ್ಲಾಧ್ಯಕ್ಷ ಸಮೀವುಲ್ಲಾ, ಡಿಎಸ್‌ಎಸ್ ರಾಜ್ಯ ಸಂಚಾಲಕ ಎನ್. ವೆಂಕಟೇಶ್, ಸ್ಥಳೀಯ ಮುಖಂಡರು ಮತ್ತು ಜನಪ್ರತಿನಿಧಿಗಳಾದ ವರ್ಮ ಪ್ರಕಾಶ್, ದಾದಾಫೀರ್, ಗಿರೀಶ್, ಆದಿಲ್ ಪಾಷಾ, ರೋಷನ್, ಟಿ.ಜಿ. ಮಂಜುನಾಥ, ಟಿ.ಡಿ. ಮಂಜುನಾಥ, ಟಿ.ಆರ್. ಶ್ರೀಧರ್ ಹಾಗೂ ರಾಜು ಉಪಸ್ಥಿತರಿದ್ದರು. ಆದಿಲ್ ಪಾಷಾ ಸ್ವಾಗತಿಸಿದರೆ, ಸಾಹಿತಿ ಮನಸುವಳ್ಳಿ ಮೋಹನ್ ಅವರು ವಂದನಾರ್ಪಣೆ ಸಲ್ಲಿಸಿದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್, ಮುನ್ನ ಕಡೂರು, ರಾಮು ಕೌಳಿ, ಸುಮಂತ್, ರಾಜೀತ್ ಮತ್ತು ಸಂದೀಪ್ ಅವರು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...