Homeಕರ್ನಾಟಕಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

ಬೆಂಗಳೂರು: ಮುಸ್ಲಿಮರು ಕುಷ್ಠರೋಗಿಗಳು, ಕ್ರೈಸ್ತರು ಕ್ಯಾನ್ಸರ್‌‌ ಎಂದ ಬಲಪಂಥೀಯ ನಾಯಕ; ದೂರು ದಾಖಲು

- Advertisement -
- Advertisement -

ಬಲಪಂಥೀಯ ಸಂಘಟನೆಯಾಗಿರುವ ಹೆಚ್‌ಜೆಎಸ್‌‌ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಭೆಯೊಂದರಲ್ಲಿ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ದ್ವೇಷ ಭಾಷಣ ಮಾಡಿದ್ದ ಭಾಷಣಗಾರರ ವಿರುದ್ದ ಕ್ರಮಕೈಗೊಳ್ಳುವಂತೆ ಸಂಜಯ ನಗರ ಪೊಲೀಸ್‌ ಠಾಣೆಗೆ ಮತ್ತು ಬೆಂಗಳೂರು ನಗರ ಕಮೀಷನರ್‌ಗೆ ದೂರು ಸಲ್ಲಿಸಲಾಗಿದೆ.

ಮೇ 8ರ ಭಾನುವಾರದಂದು ರಾಜಾಜಿ ನಗರದ ಬಿಬಿಎಂಪಿ ಕನ್ವೆಂಷ್ಷನ್ ಹಾಲ್‌‌ನಲ್ಲಿ ನಡೆದಿದ್ದ “ಹಿಂದೂ ರಾಷ್ಟ್ರ ಅಧಿವೇಶನ’’ದಲ್ಲಿ ದುಷ್ಕರ್ಮಿಗಳು ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ವಿರುದ್ದ ದ್ವೇಷ ಭಾಷಣ ಮಾಡಿದ್ದರು. ಸಭೆಯಲ್ಲಿ ಮಾತನಾಡಿದ್ದ ಹೆಚ್‌ಜೆಎಸ್‌ ನಾಯಕ, “ಮುಸ್ಲಿಮರು ಕುಷ್ಠರೋಗಿಗಳು ಮತ್ತು ಕ್ರಿಶ್ಚಿಯನ್ನರು ಕ್ಯಾನ್ಸರ್‌” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಸ್ಲಿಮರು ಕುಷ್ಠರೋಗಿಗಳಾಗಿದ್ದು ಅವರು ಆಕ್ರಮಣ ಮಾಡುವುದು ಕಣ್ಣಿಗೆ ಕಾಣುತ್ತದೆ. ಕ್ರಿಶ್ಚಿಯನ್ನರು ಕ್ಯಾನ್ಸರ್‌ ಕಾಯಿಲೆ ಹರಡಿಸುವಂತವರು, ಅವರು ಒಳಗೊಳಗೆಯೆ ಕೆಲಸ ಮಾಡುತ್ತಾರೆ. ನಾವು ವೇದಾಂತವನ್ನು ಕೇಳಿಕೊಂಡು, ‘ಈಶ್ವರ ಅಲ್ಲಾ ತೇರೆ ನಾಮ್‌’ ಎಂದು ಹೇಳಿಕೊಂಡು, ಕೆಲಸಕ್ಕೆ ಬರದೇ ಇರುವ ಗಾಂಧಿ ತತ್ವವನ್ನು ಪಾಲಿಸಿಕೊಂಡು ಹೋದರೆ, ಹಿಂದೂ ಸಮಾಜ ಬಹಳ ಅಪಾಯಕ್ಕೆ ಸಿಕ್ಕಿಹಾಕಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ, ಈಗಾಗಲೆ ಎದುರಾಗಿದೆ” ಎಂದು ಹೇಳಿದ್ದನು.

ಇದೀಗ ಹೆಚ್‌ಜೆಎಸ್‌ ಕಾರ್ಯಕ್ರಮ ಆಯೋಜಕರ ವಿರುದ್ದ ಬೆಂಗಳೂರು ನಗರ ಕಮೀಷನರ್‌ ಮತ್ತು ಸಂಜಯನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಲಾಗಿದೆ.

ಇದನ್ನೂ ಓದಿ: ಹನಿ ಟ್ರ್ಯಾಪ್‌ಗೆ ಸಿಲುಕಿ ಜೀವ ಕಳೆದುಕೊಂಡ ಬೆಂಗಳೂರು BJP ಮುಖಂಡ ಅನಂತರಾಜು: ಪೊಲೀಸ್‌‌

ದೂರಿನಲ್ಲಿ, “ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಹಲವಾರು ಭಾಷಣಗಾರರು, ಧರ್ಮದ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದು, ಸೌಹಾರ್ದತೆ ಹಾಳು ಮಾಡುವ ಕೃತ್ಯಗಳನ್ನು ಎಸಗಿದೆ” ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಾಗಾದರೆ ಹಿಂದೂಗಳೂ ವಿದೇಶಗಳಲ್ಲಿ ಕ್ಯಾನ್ಸರ್ ಪೀಡೆಯನ್ನು ಸೃಷ್ಟಿಸುತ್ತಾರೆಯೆ? ಅಲ್ಲಿ,ಇಲ್ಲಿ, ಎಲ್ಲೆಲ್ಲಿ ದೇವಸ್ಥಾನಗಳನ್ನು ಕಟ್ಟಿ ವಿದೇಶಿಯರನ್ನು ಆಕರ್ಷಿಸಿ ಧರ್ಮ ಪ್ರಸಾರ ಮಾಡುತ್ತಾರಲ್ಲಾ ಇದಕ್ಕೇನು ಹೇಳ್ತೀರಾ ಮಹಾಷಯರೇ??

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...