Homeಕರ್ನಾಟಕಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

- Advertisement -
- Advertisement -

ಬಲಪಂಥೀಯ ಗುಂಪೊಂದು ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆ ಮಾಡದಂತೆ ತಡೆದ ಘಟನೆ ಗುರುವಾರ ನಡೆದಿದೆ. ದುಷ್ಕರ್ಮಿಗಳ ಗುಂಪು ಬಲವಂತವಾಗಿ ಶಾಲೆಗೆ ನುಗ್ಗಿ ಶಾಲೆಯಲ್ಲಿರುವ ಶಿಕ್ಷಕರ ಜೊತೆಗೆ ವಾಗ್ವಾದ ನಡೆಸಿ ಬೆದರಿಕೆ ಹಾಕಿದ್ದಾರೆ.

ನಿರ್ಮಲಾ ಇಂಗ್ಲಿಷ್ ಹೈಸ್ಕೂಲ್ ಮತ್ತು ಕಾಲೇಜಿನ ಮುಖ್ಯೋಪಾಧ್ಯಾಯಿನಿ ಪ್ರಕಾರ, ವಿದ್ಯಾರ್ಥಿಗಳು ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸಿದ್ದಾಗ ಬಲಪಂಥೀಯ ಗುಂಪುಗಳ ಸದಸ್ಯರು ಬಲವಂತವಾಗಿ ಸಂಸ್ಥೆಯೊಳಗೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

“ನಾವು ಪ್ರತಿ ವರ್ಷ ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸುತ್ತಿದ್ದೇವೆ. ಆದರೆ ಕೊರೊನಾ ಪ್ರೇರಿತ ನಿರ್ಬಂಧಗಳಿಂದ ಅದನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ನಾವು ಸಣ್ಣ ಆಚರಣೆಯನ್ನು ಆಯೋಜಿಸಿದ್ದೆವು. ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಹಣ ಸಂಗ್ರಹಿಸಿ ಕೇಕ್ ಅನ್ನು ಆರ್ಡರ್ ಮಾಡಿದ್ದರು. ಇದಕ್ಕೆ ಪೋಷಕರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಮುಖ್ಯೋಪಾಧ್ಯಾಯಿನಿ ಕನಿಕಾ ಫ್ರಾನ್ಸಿಸ್ ಮೇರಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಶಾಲೆಯು “ಕ್ರಿಶ್ಚಿಯಾನಿಟಿಯನ್ನು ಬೋಧಿಸುತ್ತಿದೆ” ಮತ್ತು ಕ್ರಿಸ್‌ಮಸ್ ಅನ್ನು ಆಚರಿಸುತ್ತಿದೆ. ಆದರೆ ಹಿಂದೂ ಹಬ್ಬಗಳನ್ನು ಆಚರಿಸುತ್ತಿಲ್ಲ ಎಂದು ವಿದ್ಯಾರ್ಥಿಯೊಬ್ಬನ ಪೋಷಕರು ಬಲಪಂಥೀಯ ಗುಂಪುಗಳಿಗೆ ತಿಳಿಸಿದ್ದರು ಎನ್ನಲಾಗಿದೆ. ಇದರ ಇದರ ನಂತರ ಆಚರಣೆಯ ಬಗ್ಗೆ ತಿಳಿದ ಬಲಪಂಥೀಯ ಗುಂಪಿನ ಸದಸ್ಯರು ಸಂಸ್ಥೆಗೆ ನುಗ್ಗಿ ಶಾಲೆಯಲ್ಲಿನ ಶಿಕ್ಷಕರನ್ನು ಪ್ರಶ್ನಿಸಿದ್ದಾರೆ.

ದೂರು ನೀಡಲು ನಿರ್ಧರಿಸಿದ ಶಾಲಾ ಆಡಳಿತ ಮಂಡಳಿ

“ಬಲಪಂಥೀಯ ಕಾರ್ಯಕರ್ತರು ನಮ್ಮೊಂದಿಗೆ ತೀವ್ರವಾದ ವಾಗ್ವಾದ ಮಾಡಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಸರಸ್ವತಿ ದೇವಿಯ ಫೋಟೋವನ್ನು ನೇತುಹಾಕಲು ಮತ್ತು ಶಾಲೆಯ ಆವರಣದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ನಮಗೆ ಆದೇಶಿಸಿದ್ದಾರೆ. ಜೊತೆಗೆ ನಾವು ಮತಾಂತರ ಮಾಡುತ್ತಿರುವುದಾಗಿ ನಮ್ಮ ವಿರುದ್ಧ ಆರೋಪಿಸಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ NDTV ಗೆ ತಿಳಿಸಿದ್ದಾರೆ.

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದ ನಂತರ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಇತ್ತೀಚಿನ ವಾರಗಳಲ್ಲಿ ಚರ್ಚ್‌ಗಳು ಸೇರಿದಂತೆ ಕ್ರಿಶ್ಚಿಯನ್ ಸಂಸ್ಥೆಗಳ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಬಿಜೆಪಿ ಬೆಂಬಲಿತ ಬಲಪಂಥೀಯ ಗುಂಪುಗಳ ಮೇಲೆ ಕರ್ನಾಟಕ ಸರ್ಕಾರವು ಸೌಮ್ಯವಾಗಿ ವರ್ತಿಸುತ್ತಿದೆ.

ಇದನ್ನೂ ಓದಿ:ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

LEAVE A REPLY

Please enter your comment!
Please enter your name here

- Advertisment -

Must Read

ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

1
ಇರಾನ್‌ ದೇಶದ ಕಟ್ಟುನಿಟ್ಟಾದ ಮಹಿಳಾ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಂಧನದ ಸಮಯದಲ್ಲಿ ಮಹ್ಸಾ ಅಮಿನಿ ಎಂಬ ಮಹಿಳೆ ಸಾವಿಗೀಡಾದ ಬಳಿಕ ಸ್ಫೋಟಿಸಿದ ಮಹಿಳಾ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ....