Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎಡಪಂಥೀಯ ಗುಂಪಿನ ಸದಸ್ಯರು ಸೇರಿದಂತೆ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ವಿದ್ಯಾರ್ಥಿಗಳನ್ನು ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಅಮಾನತುಗೊಳಿಸಲಾಗಿದೆ. ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು, ಬ್ಯಾನರ್‌ಗಳನ್ನು ಬೀಸುತ್ತಾ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ಎಳೆದೊಯ್ದರು.

ಪೊಲೀಸರು ಅಶ್ರುವಾಯು ಫಿರಂಗಿಗಳೊಂದಿಗೆ ವ್ಯಾನ್‌ಗಳಲ್ಲಿ ದೆಹಲಿಯ ಕಾಲೇಜಿನ ಗೇಟ್‌ ಒಳಗೆ ಬಂದರು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನ ಒಳಗೆ ಪ್ರವೇಶ ನೀಡಲಾಯಿತು ಆಗ ಇತರರು ತಿರುಗಿಬಿದ್ದರು ಆಗ ಗಲಾಟೆ ಸಂಭವಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನವರು ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರವನ್ನು ಫೇಸ್‌ಬುಕ್‌ನಲ್ಲಿ ಘೋಷಿಸಿದ್ದಾರೆ. ನಂತರ ಮಂಗಳವಾರ ಜಾಮಿಯಾ ಅಧಿಕಾರಿಗಳು, ಕ್ಯಾಂಪಸ್‌ನಲ್ಲಿ ಯಾವುದೇ ಅನಧಿಕೃತ ಕೂಟಗಳಿಗೆ ಅವಕಾಶ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಈ ಬಗ್ಗೆ ಎಸ್‌ಎಫ್‌ಐ ನಾಯಕ ವರ್ಕಿ ಪರಕ್ಕಲ್ ಎನ್‌ಡಿಟಿವಿಗೆ ಮಾತನಾಡಿದ್ದು, “ವಿದ್ಯಾರ್ಥಿಗಳು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ, ಸಾಕ್ಷ್ಯಚಿತ್ರವನ್ನು ಔಪಚಾರಿಕವಾಗಿ ನಿಷೇಧಿಸಲಾಗಿಲ್ಲ, ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯವು ಸಂವಿಧಾನದಲ್ಲಿ ಪ್ರತಿಪಾದಿಸಲ್ಪಟ್ಟ ಹಕ್ಕು, ನಮಗೆ ಕಲಿಸಬೇಕಾದ ಉನ್ನತ ಶಿಕ್ಷಣದ ಸ್ಥಳಗಳಲ್ಲಿ ಪ್ರಜಾಪ್ರಭುತ್ವದ ಈ ಮೂಲಭೂತ ಗುಣಗಳನ್ನು ನಿರಾಕರಿಸುತ್ತಿದ್ದಾರೆ. ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುತ್ತದೆ. ಆದರೆ ವಿದ್ಯಾರ್ಥಿಗಳು ಪ್ರಶ್ನಿಸಲು, ಟೀಕಿಸಲು, ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ನಿರ್ಭಂಧ ಹೇರಲಾಗುತ್ತಿದೆ. ಇದು ಅತ್ಯಂತ ಅಪಾಯಕಾರಿ ಪ್ರವೃತ್ತಿಯನ್ನು ತೋರಿಸುತ್ತಿದೆ” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಗೋಧ್ರಾ ಹತ್ಯಾಕಾಂಡವನ್ನು ಆಧರಿಸಿದ ಸಾಕ್ಷ್ಯಚಿತ್ರವು ದೇಶ ಮಾತ್ರವಲ್ಲದೇ ವಿಶ್ವದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದೆ. ಸರ್ಕಾರವು ಚಲನಚಿತ್ರದ ಮೇಲೆ ಹಿಡಿತ ಸಾಧಿಸಿದೆ ಮತ್ತು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಅದರ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಳಿದೆ. ಪ್ರತಿಪಕ್ಷಗಳು ಈ ಕ್ರಮವನ್ನು ‘ಘೋರ ಸೆನ್ಸಾರ್‌ಶಿಪ್’ ಎಂದು ಟೀಕಿಸಿವೆ.

ನಿನ್ನೆ ಸಂಜೆ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಕೆಲವು ವಿದ್ಯಾರ್ಥಿಗಳು ಈ ಸಾಕ್ಷ್ಯಚಿತ್ರದ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆದರೆ ಆಡಳಿತ ಮಂಡಳಿಯು, ಇಂಟರ್ನೆಟ್ ಮತ್ತು ವಿದ್ಯುತ್ ಎರಡನ್ನೂ ಸ್ಥಗಿತಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿತು. ಆದರೆ ನೂರಾರು ಜನಸಮೂಹವು ಫೋನ್ ಪರದೆಗಳಲ್ಲಿ ಅಥವಾ ಅವರ ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಕತ್ತಲೆಯಲ್ಲಿ ಹೊರಗೆ ಒಟ್ಟಿಗೆ ಸೇರಿತು ಮತ್ತು ಸಂಜೆ ಪ್ರತಿಭಟನಾ ಮೆರವಣಿಗೆಯೊಂದಿಗೆ ಕೊನೆಗೊಳಿಸಿದರು.

2002ರ ಗೋಧ್ರಾ ಹತ್ಯಾಕಾಂಡವು ಮೂರು ದಿನಗಳ ನಡೆಯಿತು. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ರೈಲಿನ ಬೋಗಿಗೆ ಬೆಂಕಿ ಹಚ್ಚಿ 59 ಜನರನ್ನು ಕೊಲ್ಲಲಾಯಿತು. ಆ ನಂತರ ಪ್ರಾರಂಭವಾದ ಗಲಭೆಯಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಆರೆ ಈ ಗಲಭೆಯನ್ನು ತಡೆಯಲು ರಾಜ್ಯ ಪೊಲೀಸರು ಸಾಕಷ್ಟು ಪ್ರಯತ್ನಗಳನ್ನು ಮಾಡಲಿಲ್ಲ ಎಂಬ ಗಂಭೀರ ಆರೋಪವನ್ನು ಮೋದಿ ಎದುರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...