Homeಮುಖಪುಟಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

- Advertisement -
- Advertisement -

ಹರಿದ ಜೀನ್ಸ್ ಧರಿಸುವುದು ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ದಾರಿ ಮಾಡಿಕೊಡುತ್ತದೆ. ಇಂದಿನ ಪೋಷಕರು ಮಕ್ಕಳಿಗಾಗಿ ರೂಪಿಸಿರುವ “ಕೆಟ್ಟ ಉದಾಹರಣೆಯ” ಪರಿಣಾಮವಾಗಿದೆ. ಇದರಿಂದ ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳವಾರ ಡೆಹರಾಡೂನ್‌ನಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ರಾಜ್ಯ ಆಯೋಗ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರ ಮಾದಕ ದ್ರವ್ಯ ಸೇವನೆ ಕುರಿತ ಕಾರ್ಯಾಗಾರದಲ್ಲಿ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಮಾತನಾಡಿದ್ದಾರೆ.

“ಬರೀ ಮೊಣಕಾಲುಗಳನ್ನು ತೋರಿಸುವುದು, ಹರಿದ ಡೆನಿಮ್ ಬಟ್ಟೆಗಳನ್ನು ಧರಿಸಿ ಶ್ರೀಮಂತ ಮಕ್ಕಳಂತೆ ಕಾಣುವುದು, ಇಂತಹ ವಿಷಯಗಳನ್ನು ಇಂದು ಮನೆಗಳಲ್ಲಿ ಕಲಿಸಲಾಗುತ್ತಿದೆ. ಇವುಗಳೆಲ್ಲ ಮನೆಯಿಂದಲೇ ಆರಂಭವಾಗುತ್ತದೆ. ಇರದಲ್ಲಿ ಶಾಲೆ ಮತ್ತು ಶಿಕ್ಷಕರ ತಪ್ಪಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ‘ಭವಿಷ್ಯದಲ್ಲಿ ಮೋದಿ ಕೂಡಾ ರಾಮನ ಅವತಾರ’- ಉತ್ತಾರಾಖಂಡ‌ ಸಿಎಂ

’ನಾನು ನನ್ನ ಮಗನನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇನೆ, ನಾನು ನನ್ನ ಮೊಣಕಾಲುಗಳನ್ನು ತೋರಿಸುತ್ತಿದ್ದೇನೆಯೇ..? ಯಾಕೆ ಹರಿದ ಜೀನ್ಸ್ ಧರಿಸಿದ್ದೇನೆ? ಎಂಬುದನ್ನು ಪೋಷಕರು ಯೋಚಿಸಬೇಕು. ತಮ್ಮ ಮೊಣಕಾಲುಗಳನ್ನು ತೋರಿಸಿಕೊಂಡು ಹೋಗುವುದರಲ್ಲಿ ಹುಡುಗಿಯರು ಕಡಿಮೆ ಇಲ್ಲ ಎಂದಿದ್ದಾರೆ.

’ಇವೆಲ್ಲವೂ, ಪಾಶ್ಚಿಮಾತ್ಯೀಕರಣದ ಹುಚ್ಚು ಅನುಕರಣೆಯಿಂದ ಬಂದಿದೆ. ಪಾಶ್ಚಾತ್ಯ ಜಗತ್ತು ಯೋಗ ಮಾಡುತ್ತಾ, ದೇಹವನ್ನು ಮುಚ್ಚಿಕೊಳ್ಳುತ್ತಾ ನಮ್ಮನ್ನು ಹಿಂಬಾಲಿಸುತ್ತಿರುವಾಗ ನಾವು ನಗ್ನತೆಯತ್ತ ಓಡುತ್ತಿದ್ದೇವೆ’ ಎಂದು ನೂತನ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಹರಿದ ಜೀನ್ಸ್ ಧರಿಸಿ ಎನ್‌ಜಿಒ ನಡೆಸುತ್ತಿದ್ದ ಮಹಿಳೆಯನ್ನು ಭೇಟಿಯಾಗಿ ತಾನು ಆಘಾತಕ್ಕೊಳಗಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ. “ಈ ರೀತಿಯ ಮಹಿಳೆಯರು ಸಮಾಜದಲ್ಲಿ ಜನರನ್ನು ಭೇಟಿ ಮಾಡಲು, ಅವರ ಸಮಸ್ಯೆಗಳನ್ನು ಪರಿಹರಿಸಲು ಹೊರಟರೆ, ನಾವು ಸಮಾಜಕ್ಕೆ, ನಮ್ಮ ಮಕ್ಕಳಿಗೆ ಯಾವ ರೀತಿಯ ಸಂದೇಶವನ್ನು ನೀಡಲು ಸಾಧ್ಯ? ಇದು ಮನೆಯಲ್ಲಿಯೇ ಪ್ರಾರಂಭವಾಗುತ್ತದೆ. ನಾವು ಏನು ಮಾಡುತ್ತೇವೆಯೋ ಅದನ್ನು ನಮ್ಮ ಮಕ್ಕಳೂ ಅನುಸರಿಸುತ್ತಾರೆ” ಎಂದು ಹೆಣ್ಣು ಮಕ್ಕಳ ಬಟ್ಟೆ ಆಯ್ಕೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕ ಸಂಜಯ್ ಝಾ ಕೂಡ ಪ್ರತಿಕ್ರಿಯೆ ನೀಡಿದ್ದು, ತಿರಥ್ ಸಿಂಗ್ ರಾವತ್ ಮಾತನ್ನು ನೀವು ಅನುಮೋದಿಸುತ್ತಿರಾ ಎಂದು ಪ್ರಶ್ನಿಸಿದ್ದಾರೆ.

ಹರಿದ ಜೀನ್ಸ್ ಧರಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಹಾಳುಮಾಡುತ್ತದೆ ಎಂದು ತೋರುತ್ತದೆ. ಇದು ಮಾದಕ ವಸ್ತು ಸೇವನೆಗೆ ಕಾರಣವಾಗುತ್ತದೆ ಎಂಬ ಉತ್ತರಾಖಂಡ ಸಿಎಂ ಮಾತುಗಳನ್ನು ಉಲ್ಲೇಖಿಸಿ, ಹರಿದ ಜೀನ್ಸ್ ಧರಿಸಿ ಪುಸ್ತಕ ಹಿಡಿದುಕೊಂಡಿರುವ ವ್ಯಕ್ತಿಯ ಚಿತ್ರವನ್ನು ಪೊಸ್ಟ್ ಮಾಡಿದ್ದಾರೆ.

ತಿರಥ್ ಸಿಂಗ್ ರಾವತ್, ಮಾರ್ಚ್ 11 ರಂದು ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಾರ್ಚ್ 9 ರಂದು ಅಲ್ಲಿನ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...