Homeಅಂತರಾಷ್ಟ್ರೀಯ‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

- Advertisement -
- Advertisement -

ಕೆನಡಾದಲ್ಲಿ ದ್ವೇಷಪರಾಧಗಳು, ಪ್ರತ್ಯೇಕತಾವಾದ ಹಿಂಸಾಚಾರ ಮತ್ತು ಭಾರತ ವಿರೋಧಿ ಚಟುವಟಿಕೆಗಳ ತೀವ್ರ ಹೆಚ್ಚಳಗೊಂಡಿದ್ದು, ಈ ಹಿನ್ನಲೆಯಲ್ಲಿ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಆ ದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಎಚ್ಚರಿಕೆಯಿಂದ ಇರಲು ಭಾರತ ಶುಕ್ರವಾರ ಸಲಹೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಸಲಹೆ ನೀಡಿದೆ. ಕೆನಡಾದ ಹೈಕಮಿಷನ್ ಅಥವಾ ಕಾನ್ಸುಲೇಟ್ ಜನರಲ್ ಅವರು ಕೆನಡಾದ ಅಧಿಕಾರಿಗಳೊಂದಿಗೆ ಈ ಘಟನೆಗಳ ಬಗ್ಗೆ ಗಮನಸೆಳೆದಿದ್ದು, ಈ ಅಪರಾಧಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ವಿನಂತಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆನಡಾದಲ್ಲಿ ಈ ಅಪರಾಧ ಎಸಗುವ ಅಪರಾಧಿಗಳನ್ನು ಇದುವರೆಗೆ ಕಾನೂನಿನ ಕುಣಿಕೆಗೆ ಒಳಪಡಿಸಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೆನಡಾ: ದ್ವೇಷಪೂರಿತ ದಾಳಿಗೆ ಒಂದೇ ಕುಟುಂಬದ ನಾಲ್ವರು ಬಲಿ

“ಮೇಲೆ ವಿವರಿಸಿದಂತೆ ಅಪರಾಧಗಳ ಹೆಚ್ಚುತ್ತಿರುವ ಘಟನೆಗಳ ಹಿನ್ನಲೆಯಲ್ಲಿ, ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಶಿಕ್ಷಣಕ್ಕಾಗಿ ಅಥವಾ ಇತರ ಪ್ರಯಾಣಕ್ಕಾಗಿ ಕೆನಡಾಕ್ಕೆ ತೆರಳುವವರು ಸರಿಯಾದ ಎಚ್ಚರಿಕೆಯನ್ನು ವಹಿಸಬೇಕು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ” ಎಂದು ಸಚಿವಾಲಯದ ಸಲಹೆಯು ಹೇಳಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತದ ವಿದ್ಯಾರ್ಥಿಗಳು ಸಚಿವಾಲಯದ ವೆಬ್‌ಸೈಟ್‌ಗಳು ಅಥವಾ MADAD ಪೋರ್ಟಲ್ madad.gov.in ಮೂಲಕ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಯಾವುದೇ ಅವಶ್ಯಕತೆ ಅಥವಾ ತುರ್ತು ಸಂದರ್ಭದಲ್ಲಿ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಈ ನೋಂದಣಿಯು ಹೈ ಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಅನ್ನು ಸಕ್ರಿಯಗೊಳಿಸುತ್ತದೆ ಎಂದು ಅದು ಹೇಳಿದೆ.

ಟೊರೊಂಟೊದಲ್ಲಿರುವ BAPS ಸ್ವಾಮಿನಾರಾಯಣ ಮಂದಿರದಲ್ಲಿ ಭಾರತ ವಿರೋಧಿ ಬರಹಗಳನ್ನು ಬರೆದು ವಿರೂಪಗೊಳಿಸಲಾಯಿತು ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಭಾರತೀಯ ಹೈಕಮಿಷನ್ ಕಳೆದ ವಾರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಘಟನೆಯ ಬಗ್ಗೆ ತನಿಖೆ ಮಾಡಲು ಮತ್ತು ದುಷ್ಕರ್ಮಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳನ್ನು  ವಿನಂತಿಸಿದೆ.

ಇದನ್ನೂ ಓದಿ: ‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

ಕೆನಡಾ ಭಾರತೀಯ ಮೂಲದ 16 ಲಕ್ಷ ಜನರಿಗೆ ಮತ್ತು ಅನಿವಾಸಿ ಭಾರತೀಯರಿಗೆ ನೆಲೆಯಾಗಿದೆ. ಪ್ರಪಂಚದಾದ್ಯಂತದ ಭಾರತೀಯರು ಅತೀ ಹೆಚ್ಚು ಇರುವ ರಾಷ್ಟ್ರಗಳಲ್ಲಿ ಕೆನಡಾ ಕೂಡಾ ಒಂದಾಗಿದೆ. ಅಲ್ಲದೆ ಕೆನಡಾದಲ್ಲಿ ರಕ್ಷಣಾ ಸಚಿವೆ ಅನಿತಾ ಆನಂದ್ ಸೇರಿದಂತೆ ಭಾರತೀಯ ಮೂಲದ 17 ಸಂಸದರು ಮತ್ತು ಮೂವರು ಕ್ಯಾಬಿನೆಟ್ ಮಂತ್ರಿಗಳು ದೇಶದ ಆಡಳಿತರೂಢ ಸರ್ಕಾರದಲ್ಲಿ ಇದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...