Homeಮುಖಪುಟಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

ಪ್ಯಾಲೆಸ್ತೀನ್‌ ಕುರಿತ ಹೇಳಿಕೆ: ಬ್ರಿಟನ್‌ ಸಚಿವೆ ಸುಯೆಲ್ಲಾ ವಜಾ

- Advertisement -
- Advertisement -

ಪ್ಯಾಲೆಸ್ತೀನ್ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಆಂತರಿಕ ಸಚಿವೆ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ವಜಾಗೊಳಿಸಿದ್ದಾರೆ.

ಬ್ರಿಟನ್‌ ಅತ್ಯಂತ ಹಿರಿಯ ಸಚಿವರಲ್ಲಿ ಒಬ್ಬರಾದ ಬ್ರೇವರ್‌ಮ್ಯಾನ್ ವಿರುದ್ಧದ ಕ್ರಮವು ಪ್ಯಾಲೇಸ್ತೀನ್‌ ಪರ  ಮೆರವಣಿಗೆಯನ್ನು ಪೋಲೀಸರು ನಿರ್ವಹಿಸಿದ ರೀತಿಯ ಬಗ್ಗೆ ಅವರ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇತ್ತೀಚೆಗೆ ಪ್ಯಾಲೆಸ್ತೀನ್‌ ಪರ ಮೆರವಣಿಗೆ ಮಾಡಿದ ಸಮಯದಲ್ಲಿ ಪೊಲೀಸರು ನಡೆದುಕೊಂಡ ರೀತಿಯನ್ನು ಸುಯೆಲ್ಲಾ ಬ್ರಾವರ್‌ಮನ್ ಟೀಕಿಸಿದ್ದರು. ಶನಿವಾರ ನಡೆದ ಮೆರವಣಿಗೆಯನ್ನು ಪೊಲೀಸರು ನಿರ್ವಹಣೆ ಮಾಡಿದ ರೀತಿಯ ಬಗ್ಗೆ ಒಂದು ಲೇಖನವನ್ನು ಕೂಡ ಬರೆದಿದ್ದರು. ಇದಕ್ಕೆ ಸುನಕ್‌ ಅವರ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಸುನಕ್ ಅವರು ಸರ್ಕಾರವನ್ನು ತೊರೆಯಲು ಸುಯೆಲ್ಲಾ ಬ್ರಾವರ್ಮನ್ ಅವರಿಗೆ ಸೂಚಿಸಿದ್ದಾರೆ ಮತ್ತು ಅವರು ಈ ನಿರ್ದೇಶನವನ್ನು ಒಪ್ಪಿಕೊಂಡಿದ್ದಾರೆ. ನಾನು ಸರಿಯಾದ ಸಮಯದಲ್ಲಿ ಈ ಬಗ್ಗೆ ಹೆಚ್ಚಿನದನ್ನು ಹೇಳುತ್ತೇನೆ ಎಂದು ಸುಯೆಲ್ಲಾ ಬ್ರೆವರ್‌ಮನ್ ಹೇಳಿದ್ದಾರೆ. ಬ್ರಾವರ್‌ಮನ್ ಗೆ ಸರ್ಕಾರದಲ್ಲಿ ಸಣ್ಣ ಹುದ್ದೆ ನೀಡುವ ಪ್ರಸ್ತಾಪವಿತ್ತು. ಆದರೆ ಅವರು ಅದನ್ನು ಸ್ವೀಕರಿಸಲು ಒಪ್ಪಲಿಲ್ಲ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಅವರು ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ರ್ಯಾಲಿಗಳನ್ನು ದ್ವೇಷದ ಮೆರವಣಿಗೆಗಳು ಎಂದು ಕರೆದಿದ್ದರು. ಪ್ಯಾಲೆಸ್ತೀನ್‌ ಪರವಾದ ಪ್ರತಿಭಟನೆಗಳು ಕೆಲವು ಗುಂಪುಗಳ ಪ್ರಾಮುಖ್ಯತೆಯ ಪ್ರತಿಪಾದನೆಯಾಗಿದೆ ಎಂದು ಹೇಳಿದ್ದರು.

ಬ್ರೆವರ್‌ಮನ್ ಹೇಳಿಕೆ ಉದ್ವಿಗ್ನತೆಗೆ ಕಾರಣವಾಗಿತ್ತು ಮತ್ತು ಬಲಪಂಥೀಯ ಪ್ರತಿಭಟನಾಕಾರರು ಲಂಡನ್‌ನ ಬೀದಿಗಳಲ್ಲಿ ಪ್ರತಿಭಟನೆ ಮಾಡಲು ಪ್ರಚೋದಿಸಿತ್ತು ಎನ್ನಲಾಗಿದೆ.

ಸೆ.2022ರಲ್ಲಿ ಮಾಜಿ ಪ್ರಧಾನಿ ಲಿಜ್ ಟ್ರಸ್ ಅವರು ಈ ಸ್ಥಾನಕ್ಕೆ ಬ್ರೆವರ್‌ಮನ್ ಅವರನ್ನು ನೇಮಿಸಿದ್ದರು. ತಮ್ಮ ವೈಯಕ್ತಿಕ ಇಮೇಲ್‌ನಿಂದ ಅಧಿಕೃತ ದಾಖಲೆಯನ್ನು ಕಳುಹಿಸಿದ್ದರಿಂದ ಅವರು ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ರಿಷಿ ಸುನಕ್ ಅವರು ಬ್ರೆವರ್‌ಮನ್ ಅವರನ್ನು ಮತ್ತೆ ನೇಮಿಸಿದ್ದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...