Homeಮುಖಪುಟಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ಸಿ-ವೋಟರ್ ಪ್ರಕಾರ, ಕಳೆದ ವರ್ಷ ಮೋದಿಯವರ ಆಡಳಿತವನ್ನು 65% ಜನ “ತುಂಬಾ ತೃಪ್ತಿಕಾರಕವಾಗಿದೆ” ಎಂದಿದ್ದರು. ಅದು ಈಗ ಕೇವಲ 37% ಗೆ ಕುಸಿತ ಕಂಡಿದೆ.

- Advertisement -
- Advertisement -

ಭಾರತೀಯ ಸರ್ವೆ ಏಜೆನ್ಸಿ ಸಿ-ವೋಟರ್ ಮತ್ತು ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್‌ ಸಮೀಕ್ಷೆಯಲ್ಲಿ ಭಾರತದಲ್ಲಿ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಿರುವುದು ಕಂಡುಬಂದಿದೆ. ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗಾಗಿ ಜಗತ್ತಿನ ಸಾಂಕ್ರಾಮಿಕ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಮೋದಿಯವರ ವಿರುದ್ದದ ಅಲೆಯೂ ಏರುತ್ತಲಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಆದರೆ ಕೋವಿಡ್ ಮೊದಲ ಮತ್ತು ಎರಡನೇ ಅಲೆಗೆ ಸಿಕ್ಕಿ ಭಾರತ ನರಳುತ್ತಿರುವ ಸಂದರ್ಭದಲ್ಲಿ ಮೋದಿ ವಿರುದ್ಧ ಅಲೆ ತೀವ್ರವಾಗಿದೆ.

ಭಾರತೀಯ ಸಂಸ್ಥೆ ಸಿ-ವೋಟರ್ ಪ್ರಕಾರ, ಕೇವಲ 37% ರಷ್ಟು ಜನರು ಮೋದಿಯವರ ಆಡಳಿತವನ್ನು “ತುಂಬಾ ತೃಪ್ತಿಕಾರಕವಾಗಿದೆ” ಎಂದು ಹೇಳಿದ್ದಾರೆ. ರಾಯಿಟರ್ಸ್ ಪ್ರಕಾರ, 2020 ರಲ್ಲಿ ದಾಖಲಾದ ಇದು 65% ಇದ್ದು, ಈಗ ಭಾರಿ ಕುಸಿತ ಕಂಡಿದೆ.

ಅಮೆರಿಕದ ಡಾಟಾ ಕಂಪನಿ ‘ಮಾರ್ನಿಂಗ್ ಕನ್ಸಲ್ಟ್’ ನಡೆಸುವ ವಿಶ್ವ ನಾಯಕರ ಅಪ್ರುವಲ್ ರೇಟಿಂಗ್ ಟ್ರಾಕಿಂಗ್ ಪ್ರಕಾರ ಪ್ರಧಾನ ಮಂತ್ರಿ ಮೋದಿಯವರ ಜನಪ್ರಿಯತೆ  ಮೇ ಮೂರನೇ ವಾರ ಶೇಕಡಾ 63 ಕ್ಕೆ ಇಳಿದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 74 ಇತ್ತು. ಅಂದರೆ ಆಗಸ್ಟ್ 2019 ರಿಂದ ಏಜೆನ್ಸಿಯು ರೇಟಿಂಗ್ ಅನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರದಲ್ಲಿ ಮೋದಿಯವರ ಜನಪ್ರಿಯತೆ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ.

ಅದೇ ರೀತಿಯಲ್ಲಿ ಟ್ರ್ಯಾಕರ್ ಅನ್ನು ಪ್ರಾರಂಭಿಸಿದಾಗಿನಿಂದ ನರೇಂದ್ರ ಮೋದಿಯವರಿಗೆ ಅಸಮ್ಮತಿ ರೇಟಿಂಗ್ ಅತ್ಯುನ್ನತ ಮಟ್ಟಕ್ಕೆ ಏರಿದೆ. ಮಾರ್ಚ್ ಆರಂಭದಲ್ಲಿ ಶೇಕಡಾ 20 ಇದ್ದ ಮೋದಿ ವಿರೋಧಿ ಅಲೆ ಮೇ ಮೂರನೇ ವಾರಕ್ಕೆ ಶೇಕಡಾ 31 ಕ್ಕೆ ಏರಿದೆ.

ಉಳಿದ ವಿಶ್ವ ನಾಯಕರಿಗೆ ಹೋಲಿಸಿದರೆ ನರೇಂದ್ರ ಮೋದಿಯವರ ಜನಪ್ರಿಯತೆ ಈಗಲೂ ಹೆಚ್ಚಿಗೆಯೇ ಇದೆ. ಆದರೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಅವರು ಅನುಸರಿಸಿದ ಕ್ರಮಗಳಿಂದ ತೀವ್ರ ಟೀಕೆಗೆ ಒಳಗಾದ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ಕುಸಿಯಲು ಆರಂಭಿಸಿದೆ.

“ಪ್ರಧಾನ ಮಂತ್ರಿ ತಮ್ಮ ವೃತ್ತಿಜೀವನದ ಅತಿದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ” ಎಂದು ಸಿ-ವೋಟರ್ ಸಂಸ್ಥಾಪಕ ಯಶ್ವಂತ್ ದೇಶ್ಮುಖ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಆದರೂ, ಮೋದಿಯವರ ಅಪ್ರುವಲ್ ರೇಟಿಂಗ್‌ಗಳ ಕುಸಿತದ ಹೊರತಾಗಿಯೂ, ಅವರು ರಾಜಕೀಯದಲ್ಲಿ ಭಾರತದ ಅತ್ಯಂತ ಜನಪ್ರಿಯ ಮುಖವಾಗಿ ಉಳಿದಿದ್ದಾರೆ ಎಂದು ಸಿವೋಟರ್ ಡೇಟಾ ತೋರಿಸಿದೆ.

ಫೆಬ್ರವರಿಯಲ್ಲಿ ಅವರು ನಾವು ಕೋವಿಡ್‌ ಅನ್ನು ಮಣಿಸಿದ್ದೇವೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಉದ್ಘರಿಸಿದ್ದು ಮತ್ತು ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಪ್ರಧಾನಿ ಮೋದಿಯವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮಾರ್ಚ್ ಅಂತ್ಯದಿಂದ ಆರಂಭಗೊಂಡ ಕೋವಿಡ್ ಎರಡನೇ ಅಲೆ ಭಾರತಕ್ಕೆ ತೀವ್ರ ಆಘಾತ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಮ್ಲಜನಕ, ಔಷಧಿಗಳ ಕೊರತೆ ತೀವ್ರವಾಗಿ ಬಾಧಿಸಿದೆ. ಶ್ಮಶಾನದಲ್ಲಿ ಶವಸಂಸ್ಕಾರಕ್ಕೂ ಉದ್ದನೆಯ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಕೋವಿಡ್‌ ಅಲೆಯನ್ನು ಕಡೆಗಣಿಸಿದ್ದರ ಪರಿಣಾಮವಾಗಿ ಗೋಚರಿಸುತ್ತಿದೆ.

ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೊ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸರ್ಕಾರಿ ನಾಯಕರ ಅಪ್ರುವಲ್ ರೇಟಿಂಗ್ ಅನ್ನು ಟ್ರ್ಯಾಕ್ ಮಾಡುತ್ತಿದೆ. ವಾರಕ್ಕೊಮ್ಮೆ ಈ ಪುಟವು ಎಲ್ಲಾ 13 ದೇಶಗಳ ಇತ್ತೀಚಿನ ಡೇಟಾವನ್ನು ಅಪ್ಡೇಟ್ ಮಾಡುತ್ತದೆ. ಇದು ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಚಲನಶಾಸ್ತ್ರದ ಬಗ್ಗೆ ನೈಜ ಒಳನೋಟವನ್ನು ನೀಡುತ್ತದೆ. ಅಪ್ರುವಲ್ ರೇಟಿಂಗ್‌ಗಳು ಪ್ರತಿ ದೇಶದ ವಯಸ್ಕ ನಿವಾಸಿಗಳ ಏಳು ದಿನಗಳ ಅಭಿಪ್ರಾಯಗಳ ಸರಾಸರಿಯನ್ನು ಆಧರಿಸಿವೆ, ಮತ್ತು ಮಾದರಿಗಳ ಗಾತ್ರಗಳು ದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...