Homeಮುಖಪುಟಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

- Advertisement -
- Advertisement -

ಕಳೆದ ವರ್ಷ ಏಪ್ರಿಲ್ ಮತ್ತು ಮೇ ತಿಂಗಳ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಗಂಗಾ ನದಿಗೆ ಹರಿದು ಬರುವ ಮಾಲಿನ್ಯವು ಕಡಿಮೆಯಾಗಿದ್ದರಿಂದ ನದಿಯು ಸ್ಪಚ್ಛಗೊಂಡಿತ್ತು. ಆದರೆ ಕೊರೊನಾ ಎರಡನೆ ಅಲೆಯ ಸಂದರ್ಭದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌ನಿಂದಾಗಿ ನದಿಯು ಸ್ವಚ್ಛವಾಗಬಹುದು ಎಂದು ನಂಬಲಾಗಿತ್ತು, ಆದರೆ ಇದೀಗ ನದಿ ನೀರಿನ ಬಣ್ಣವು ಗಾಢ ಹಸಿರು ಬಣ್ಣಕ್ಕೆ ತಿರುಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಗಂಗಾ ನದಿಯು ತನ್ನ ಬಣ್ಣವನ್ನು ಹಸಿರು ಬಣ್ಣಕ್ಕೆ ಬದಲಾಯಿಸಿದಂತೆ ತೋರುತ್ತಿದೆ. ವಿಜ್ಞಾನಿಗಳ ಪ್ರಕಾರ, ನೀರು ವಿಷಕಾರಿಯಾಗುವ ಸಾಧ್ಯತೆಯಿದ್ದು, ಹಸಿರು ಬಣ್ಣವು ಹೆಚ್ಚು ಕಾಲ ಇರಲಿದೆಯೆ ಎಂದು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ಕೆಲವು ದಿನಗಳಿಂದ ನದಿ ನೀರಿನ ಬಣ್ಣದಲ್ಲಿ ಬದಲಾವಣೆಯಾಗಿದ್ದು ವಾರಣಾಸಿಯ ಜನರು ಕಳವಳ ವ್ಯಕ್ತಪಡಿಸಿದ್ದಾರೆ. 84 ಕಾಂಕ್ರೀಟ್ ನದಿ ತೀರಗಳ ಹೊರತಾಗಿಯು, ನದಿಯು ಹಸಿರು ಬಣ್ಣಕ್ಕೆ ಬದಲಾಗಿದ್ದು ಇತರ ಪ್ರದೇಶಗಳಲ್ಲೂ ಕಾಣಿಸುತ್ತಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

PC: India Today / Roshan Jaiswal

“ಮಳೆಗಾಲದ ಸಮಯದಲ್ಲಿ ಕೊಳ, ಕೆರೆಗಳಿಂದ ಪಾಚಿಗಳು ನದಿಗೆ ಸೇರುವುದರಿಂದ ಗಂಗಾ ನದಿಯ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯವಾಗಿದೆ. ಆದರೆ ಈ ಸಮಯದಲ್ಲಿ ನದಿಯ ನೀರು ಗಾಢ ಹಸಿರು ಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ, ಕೆಲವು ಘಾಟ್‌ಗಳಿಂದ ನಿಂತು ನೋಡಿದರೆ ಮಾತ್ರ ಕಾಣಿಸುತ್ತಿತ್ತು ಆದರೆ ಈಗ ಎಲ್ಲಡೆ ಈ ಬಣ್ಣ ಗೋಚರಿಸುತ್ತದೆ. ಕೆಟ್ಟ ವಾಸನೆ ಹರಡಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ವಾರಣಾಸಿಯ ನಿವಾಸಿ ಲವ್‌ಕುಶ್‌‌ ಸಾಹ್ನಿ ಹೇಳಿದ್ದಾರೆಂದು ಇಂಡಿಯಾ ಟುಡೆ ವರದಿ ಮಾಡಿದೆ.

ಬೆನಾರಸ್ ಹಿಂದೂ ವಿಶ್ವವಿದ್ಯಾಲಯದ ಮಾಳವಿಯಾ ಗಂಗಾ ಸಂಶೋಧನಾ ಕೇಂದ್ರದ ಅಧ್ಯಕ್ಷ ಬಿ.ಡಿ. ತ್ರಿಪಾಠಿ ಅವರು, ನದಿಯ ಹಸಿರು ಬಣ್ಣವು ಮೈಕ್ರೋಸಿಸ್ಟಿಸ್ ಪಾಚಿಗಳಿಂದಾಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ 

“ಹರಿಯುವ ನೀರಿನಲ್ಲಿ ಇವುಗಳನ್ನು ಕಾಣಬಹುದು. ಆದರೆ ಇದು ಸಾಮಾನ್ಯವಾಗಿ ಗಂಗಾ ನದಿಯಲ್ಲಿ ಕಂಡುಬರುವುದಿಲ್ಲ. ಆದರೆ ನೀರು ನಿಂತು ಪೋಷಕಾಂಶಗಳು ಸೃಷ್ಟಿಯಾದರೆ ಈ ಮೈಕ್ರೋಸಿಸ್ಟಿಸ್ ಪಾಚಿ ಬೆಳೆಯಲು ಪ್ರಾರಂಭಿಸುತ್ತದೆ. ಕೊಳ ಮತ್ತು ಕಾಲುವೆಗಳ ನೀರಿನಲ್ಲಿ ಮಾತ್ರ ಬೆಳೆಯುವುದು ಇದರ ವಿಶೇಷತೆಯಾಗಿದ” ಎಂದು ತ್ರಿಪಾಠಿ ಹೇಳಿದ್ದಾರೆ.

“ಪ್ರಸ್ತುತ ನೀರು ಹತ್ತಿರದ ಕೊಳ ಮತ್ತು ಸಣ್ಣ ನದಿಗಳಿಂದ ಬಂದಿರಬಹುದು. ನೀರಿನ ಹರಿವು ಹೆಚ್ಚಾದರೆ ಪಾಚಿಗಳು ಹರಿಯುತ್ತವೆ. ಆದರೆ ಅದು ಹರಿದು ಹೋಗದೆ ಈ ರೀತಿ ತುಂಬಾ ಸಮಯ ಇದ್ದರೆ ಅವು ನರಮಂಡಲದ ಮೇಲೆ ಪರಿಣಾಮ ಬೀರುವ ವಿಷವನ್ನು ಹೊರಸೂಸುತ್ತದೆ. ಇದು ಜಲಚರಗಳಿಗೆ ಅಪಾಯವನ್ನುಂಟು ಮಾಡುತ್ತದೆ” ಅವರು ಹೇಳಿದ್ದಾರೆ.

PC: India Today / Roshan Jaiswal

ಪರಿಸರ ಮಾಲಿನ್ಯ ವಿಜ್ಞಾನಿ ಡಾ.ಕೃಪಾ ರಾಮ್ ಅವರು ಹೇಳುವಂತೆ ನೀರಿನಲ್ಲಿ ಪಾಚಿ ಬೆಳೆಯುವ ಪೋಷಕಾಂಶಗಳು ಹೆಚ್ಚಿರುವುದರಿಂದ ಇದು ಕಂಡುಬಂದಿದೆ. ಗಂಗಾ ನೀರಿನ ಬಣ್ಣ ಬದಲಾಗಲು ಮಳೆ ಕೂಡ ಒಂದು ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

“ಮಳೆಯಿಂದಾಗಿ, ಈ ಪಾಚಿಗಳು ನದಿಗೆ ಹರಿಯುತ್ತವೆ. ಸಾಕಷ್ಟು ಪೋಷಕಾಂಶಗಳನ್ನು ಪಡೆದ ನಂತರ ಅವು ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ನೀರು ತುಂಬಾ ಸಮಯದವರೆಗೂ ಹಾಗೆ ಇದ್ದರೆ, ದ್ಯುತಿಸಂಶ್ಲೇಷಣೆಯನ್ನು ಶಕ್ತಗೊಳಿಸುವ ಸೂರ್ಯನ ಕಿರಣಗಳು ಆಳಕ್ಕೆ ಹೋಗಬಹುದು. ಫಾಸ್ಫೇಟ್, ಗಂಧಕ ಮತ್ತು ನೈಟ್ರೇಟ್‌ ಪಾಚಿಗಳ ಬೆಳವಣಿಗೆಗೆ ಸಹಾಯ ಮಾಡುವ ಪೋಷಕಾಂಶಗಳಾಗಿವೆ. ಪೋಷಕಾಂಶಗಳು ಕೃಷಿ ಭೂಮಿ ಮತ್ತು ಒಳಚರಂಡಿಯಿಂದಲೂ ಬರಬಹುದು” ಎಂದು ಕೃಪಾ ರಾಮ್ ಹೇಳಿದ್ದಾರೆ.

“ಯಾವುದೆ ಚಿಂತೆಯ ಅಗತ್ಯವಿಲ್ಲ. ಇದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ನಡೆಯುತ್ತದೆ. ಆದರೆ ಇದು ನೀರನ್ನು ವಿಷಕಾರಿಯಾಗಿಸುತ್ತದೆ. ಅದರಲ್ಲಿ ಸ್ನಾನ ಮಾಡುವುದರಿಂದ ಚರ್ಮ ರೋಗಗಳು ಉಂಟಾಗುತ್ತದೆ. ಅಲ್ಲದೆ ಈ ನೀರನ್ನು ಕುಡಿಯುವುದರಿಂದ ಯಕೃತ್ತಿಗೆ ಹಾನಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...