Homeಮುಖಪುಟಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಮೇವು ಹಗರಣದ ದುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು

ಜಾಮೀನು ಮಂಜೂರಾಗಿದ್ದರೂ, ಲಾಲೂ ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ಬೇಕಾಗುತ್ತವೆ ಎಂದು ತಿಳಿಸಲಾಗಿದೆ.

- Advertisement -
- Advertisement -

ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು (ಏಪ್ರಿಲ್ 17) ಜಾಮೀನು ನೀಡಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ದುಮ್ಕಾ ಖಜಾನೆ ಪ್ರಕರಣ ಎಂದು ಕರೆಯಲ್ಪಡುವ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜಾರ್ಖಂಡ್ ನಗರದ ಖಜಾನೆಯಿಂದ 3.13 ಕೋಟಿ ರೂಪಾಯಿ ಹಣವನ್ನು ವಿತ್ ಡ್ರಾ ಮಾಡಿದ ಪ್ರಕರಣ ಇದಾಗಿದೆ.

ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ಜಾಮೀನು ಮಂಜೂರಾಗಿದ್ದರೂ, ಲಾಲು ಪ್ರಸಾದ್ ಯಾದವ್ ಜೈಲಿನಿಂದ ಹೊರಬರಲು ಇನ್ನು 2-3 ದಿನಗಳು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿನ ನಿಯಮದಿಂದಾಗಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸ್ವಲ್ಪ ವಿಳಂಬವಾಗಬಹುದು. ಬೆಲ್ ಬಾಂಡ್‌ಗಳು ತುಂಬಿದ ನಂತರ ಜೈಲಿನಿಂದ ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎನ್ನಲಾಗಿದೆ.

ಪ್ರಸ್ತುತ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್‌ನಲ್ಲಿರುವ ಯಾದವ್ ಅವರು ಬಿಹಾರದ ಮೇವಿನ ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರರಲ್ಲಿ ಜಾಮೀನು ಪಡೆದಿದ್ದರು. ದುಮ್ಕಾ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಕಾರಣ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮನೆಗೆ ಮರಳಬಹುದು.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲೂ ಪ್ರಸಾದ್ ಯಾದವ್,. ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಮ್ಮ ಜೈಲು ಶಿಕ್ಷೆಯ ಹೆಚ್ಚಿನ ಭಾಗವನ್ನು ಕಳೆದಿದ್ದಾರೆ. ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಜನವರಿಯಲ್ಲಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

“ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿದೆ. ಸುಪ್ರೀಂ ಕೋರ್ಟ್ ಮಾಡಿದ ನಿಯಮದಡಿಯಲ್ಲಿ ಜಾಮೀನು ನೀಡಲಾಗಿದೆ. ಬೆಲ್ ಬಾಂಡ್ ಸೇರಿದಂತೆ ಸಂಪೂರ್ಣ ಪ್ರಕ್ರಿಯೆಯನ್ನು ಗಮನಿಸಿದರೆ, ಲಾಲೂ ಪ್ರಸಾದ್ ಯಾದವ್ ಹೊರಬರಲು 3-4 ದಿನಗಳು ತೆಗೆದುಕೊಳ್ಳಬಹುದು” ಎಂದು ಆರ್‌ಜೆಡಿ ಮುಖಂಡ ಶಿವಾನಂದ್ ತಿವಾರಿ ಹೇಳಿದ್ದಾರೆ.

ಲಾಲೂ ಯಾದವ್ ಅವರ ಅನುಪಸ್ಥಿತಿಯಲ್ಲಿ, ಅವರ ಮಗ ತೇಜಶ್ವಿ ಯಾದವ್ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಕಳೆದ ವರ್ಷ ಬಿಹಾರ ಚುನಾವಣೆಯಲ್ಲಿ ಪಕ್ಷ ತೇಜಶ್ವಿ ಯಾದವ್ ನೇತೃತ್ವದಲ್ಲಿ ಉತ್ತಮ ಸಾಧನ ಮಾಡಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...