Homeಮುಖಪುಟ'ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ': ಆರ್‌ಜೆಡಿ ನಾಯಕ

‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳುವ ಮೂಲಕ ಆರ್‌ಜೆಡಿ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ವಿವಾದಕ್ಕೆ ತುತ್ತಾಗಿದ್ದಾರೆ.

ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, ”ಹಿಂದುಳಿದ ಸಮುದಾಯಗಳಿಗೆ ಸೇರಿದ ಮಹಿಳೆಯರಿಗೆ ಕೇಂದ್ರ ಸರ್ಕಾರ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ, ‘ಲಿಪ್‌ಸ್ಟಿಕ್ ಮತ್ತು ಬಾಬ್ ಕಟ್ ಹೇರ್ ಸ್ಟೈಲ್ ಮಾಡಿಕೊಂಡ ಮಹಿಳೆಯರು ಮುಂದೆ ಬರುತ್ತಾರೆ’ ಎಂದು ಅವರು ಹೇಳಿದ್ದಾರೆ.

ವಿವಾದಕ್ಕಿಡಾದ ಬಳಿಕ ಮಾತನಾಡಿದ ಅವರು, ”ಆರ್‌ಜೆಡಿ ಪಕ್ಷವು “ಮೊದಲಿನಿಂದಲೂ” ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಲು ಪ್ರಯತ್ನಿಸಿದರು. ರ‍್ಯಾಲಿಯಲ್ಲಿ ಬಹಳಷ್ಟು ಮಹಿಳೆಯರು ಗ್ರಾಮದವರಾಗಿದ್ದರು, ಹಾಗಾಗಿ ಜನರಿಗೆ ಅರ್ಥವಾಗುವಂತೆ ‘ಗ್ರಾಮ್ಯ ಭಾಷೆಯಲ್ಲಿ’ ಮಾತನಾಡಿದೆ. ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕು. ಹೊಸ ಕಾನೂನಿನ ಬಗ್ಗೆ ಎಲ್ಲ ಮಹಿಳೆಯರಿಗೆ ಅರ್ಥಮಾಡಿಕೊಳ್ಳಲಿ ಎಂದು ನಾನು ವಿಶಿಷ್ಟವಾದ ಗ್ರಾಮೀಣ ಭಾಷೆಯನ್ನು ಬಳಸಿರುವುದಾಗಿ” ಅಬ್ದುಲ್ ಬಾರಿ ಸಿದ್ದಿಕಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್ ಈ ಹೇಳಿಕೆಯನ್ನು ”ಆರ್‌ಜೆಡಿ ನಾಯಕನ ಸಂಕುಚಿತ ಮನಸ್ಥ್ತಿತಿಯ ಸಂಕೇತ” ಎಂದು ಹೇಳಿದ್ದಾರೆ.

”ಇದು ಅವರ ಸಂಕುಚಿತ  ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್​​ಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದರು.

ಸಿದ್ದಿಕಿ ಅವರ ಹೇಳಿಕೆಯನ್ನು INDIA ಮೈತ್ರಿಕೂಟದ ಮಿತ್ರಪಕ್ಷವಾದ ಜೆಎಂಎಂ ಟೀಕಿಸಿದೆ. ”ಇಂತಹ ಹೇಳಿಕೆಗಳು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ಪಕ್ಷದ ರಾಜ್ಯಸಭಾ ಸಂಸದ ಮಹುವಾ ಮಜಿ ಹೇಳಿದ್ದಾರೆ.

”ನಾವು ಇಂದು 21 ನೇ ಶತಮಾನದಲ್ಲಿದ್ದೇವೆ, ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ನಾವು ಮಹಿಳೆಯರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಮಸೂದೆ ಬಗ್ಗೆಯೂ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದರು.

ಅದರೊಳಗೆ ಒಬಿಸಿ ಕೋಟಾ ಇಲ್ಲದ ಮಹಿಳಾ ಕೋಟಾ ಮಸೂದೆಗೆ ಆರ್‌ಜೆಡಿಯ ಆಕ್ಷೇಪ ಹೊಸದೇನಲ್ಲ. ಆರ್‌ಜೆಡಿ ಮುಖಂಡರು, ಸಮಾಜವಾದಿ ಪಕ್ಷದ ಸಂಸದರು ಮತ್ತು ಒಮ್ಮೆ ಜೆಡಿಯು ನೇತೃತ್ವ ವಹಿಸಿದ್ದ ಶರದ್ ಯಾದವ್, ಈ ಹಿಂದೆ ಹಲವು ಸಂದರ್ಭಗಳಲ್ಲಿ ಸದನದ ಬಾವಿಗೆ ನುಗ್ಗಿ, ಮಸೂದೆಯ ಪ್ರತಿಯನ್ನು ಕಸಿದುಕೊಳ್ಳಲು ಯತ್ನಿಸಿ ಮಸೂದೆ ಅಂಗೀಕಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಂದೆ ಮತ್ತು ಪಕ್ಷದ ಮುಖ್ಯಸ್ಥರಾಗಿದ್ದ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ”ಈ ಮೀಸಲಾತಿಯು ಶ್ರೀಮಂತ ಮಹಿಳೆಯರಿಗೆ ಮಾತ್ರ ಹೇಗೆ ಪ್ರಯೋಜನವನ್ನು ನೀಡುತ್ತದೆ” ಎಂಬ ಅವರ ಹೇಳಿಕೆಗಾಗಿ ಕನಿಷ್ಠ ಎರಡು ಬಾರಿ ವಿವಾದಕ್ಕೆ ಒಳಗಾಗಿದ್ದರು.

2012 ರಲ್ಲಿ ಮೀಸಲಾತಿ ಬೇಡಿಕೆಯ ಬಗ್ಗೆ ಕೇಳಿದಾಗ, ಅವರು “…ಬಡೇ ಘರ್ ಕಿ ಲಡ್ಕಿಯಾ ಔರ್ ಮಹಿಳಾಯೇನ್ ಕೋ ಫಾಯ್ದಾ ಮಿಲೇಗಾ… ಹುಮಾರಿ ಗಾಂವ್ ಕಿ ಗರೀಬ್ ಮಹಿಲಾವೋಂ ಕೋ ನಹಿಂ… ಆಕರ್ಷಕ್ ನಹೀ ಹೋತಿ…ಬಾಸ್ ಇತ್ನಾ ಕಹುಂಗಾ… ಜ್ಞಾದಾ ನಹೀ… (ಈಗಿನ ರೂಪದಲ್ಲಿರುವ ಮಹಿಳಾ ಮೀಸಲಾತಿ ಮಸೂದೆಯು ಶ್ರೀಮಂತ ಮತ್ತು ನಗರ ಪ್ರದೇಶದ ಮಹಿಳೆಯರಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ… ನಮ್ಮ ಬಡ ಮತ್ತು ಗ್ರಾಮೀಣ ಮಹಿಳೆಯರು ಆಕರ್ಷಕವಾಗಿಲ್ಲ…ನಾನು ಹೇಳುವುದಿಷ್ಟೇ)” ಎಂದಿದ್ದರು.

ಎರಡು ವರ್ಷಗಳ ಹಿಂದೆ, ಮಾರ್ಚ್ 2010 ರಲ್ಲಿ ಅಂಗೀಕಾರಕ್ಕಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದಾಗ, “ಮಹಿಳಾ ಮೀಸಲಾತಿ ಮಸೂದೆಯು ಪ್ರಸ್ತುತ ಸ್ವರೂಪದಲ್ಲಿ ಅಂಗೀಕರಿಸಲ್ಪಟ್ಟರೆ, ಸಂಸತ್ತಿನಲ್ಲಿ ಯುವಕರನ್ನು ಶಿಳ್ಳೆ ಹೊಡೆಯಲು ಪ್ರಚೋದಿಸುತ್ತದೆ” ಎಂದು ಅವರು ಹೇಳಿದ್ದರು.

ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಕೋರುವ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಯಿಂದ ಅಂತಿಮ ಮುದ್ರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...