Homeಮುಖಪುಟಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ

- Advertisement -
- Advertisement -

ಬಿಹಾರ ಚುನಾವಣೆಯಲ್ಲಿನ ಸೋಲಿನ ನಂತರ ಮಹಾಘಟಬಂಧನ್ ಸೌಹಾರ್ದತೆಯ ನಡುವಿನ ಬಿರುಕುಗಳು ಭಾನುವಾರ ಬೆಳಕಿಗೆ ಬಂದಿದ್ದು, ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾದಳದ (RJD) ಹಿರಿಯ ಮುಖಂಡರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ಮಹಾಘಟಬಂಧನ್‌ಗೆ ಕಾಂಗ್ರೆಸ್ ಪಕ್ಷವೇ ಮುಳುವಾಯಿತು. ಅವರು 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ 70 ಸಾರ್ವಜನಿಕ ರ್ಯಾಲಿಗಳನ್ನೂ ಸಹ ನಡೆಸಲಿಲ್ಲ. ರಾಹುಲ್ ಗಾಂಧಿ ಮೂರು ದಿನಗಳ ಕಾಲ ಬಂದರು, ಪ್ರಿಯಾಂಕಾ ಗಾಂಧಿ ಬರಲೇ ಇಲ್ಲ. ಬಿಹಾರದ ಪರಿಚಯವೇ ಇಲ್ಲದವರು ಇಲ್ಲಿಗೆ ಬಂದರು. ಇದು ಸರಿಯಲ್ಲ” ಎಂದು ಶಿವಾನಂದ್ ತಿವಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

RJD, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಮಹಾ ಮೈತ್ರಿ ಅಥವಾ ಮಹಾಘಟಬಂಧನ್‌ ಬಹುಮತದ ಕೊರತೆಯಿಂದಾಗಿ ಸೋಲನ್ನು ಅನುಭವಿಸಿದೆ. ಚುನಾವಣಾ ಎಕ್ಸಿಟ್‌ ಪೋಲ್ ಸಮೀಕ್ಷೆಗಳು ತಲೆಕೆಳಗಾಗಿವೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

243 ಸ್ಥಾನಗಳ ಪೈಕಿ 70 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 19 ಸ್ಥಾನಗಳನ್ನು ಮಾತ್ರ ಪಡೆದುಕೊಂಡು, ಮೈತ್ರಿಯ ಹಿನ್ನಡೆಗೆ ಕಾರಣವಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವು ವ್ಯಾಪಕ ಟೀಕೆಗೆ ಒಳಗಾಯಿತು.

“ಇದು ಬಿಹಾರದಲ್ಲಿ ಮಾತ್ರ ಅಲ್ಲ ಎಂದು ನಾನು ಭಾವಿಸುತ್ತೇನೆ. ಇತರ ರಾಜ್ಯಗಳಲ್ಲಿಯೂ ಸಹ ಕಾಂಗ್ರೆಸ್ ಗರಿಷ್ಠ ಸಂಖ್ಯೆಯ ಸ್ಥಾನಗಳಿಗೆ ಸ್ಪರ್ಧಿಸಲು ಹೆಚ್ಚಿನ ಒತ್ತು ನೀಡುತ್ತದೆ. ಆದರೆ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವಲ್ಲಿ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಈ ಬಗ್ಗೆ ಯೋಚಿಸಬೇಕು” ಎಂದು ತಿವಾರಿ ಹೇಳಿದರು.

ಇದನ್ನೂ ಓದಿ: ಬಿಹಾರ: ಸಿಎಂ ನಿತೀಶ್‌ ಅನ್ನು ನಿಯಂತ್ರಿಸುವ ರಿಮೋಟ್ ಬೇರೆಯವರ ಬಳಿಯಿದೆ- ತಾರಿಖ್ ಅನ್ವರ್

“ಇಲ್ಲಿ ಚುನಾವಣೆಗಳು ಭರದಿಂದ ಸಾಗಿತ್ತು. ಆದರೆ ರಾಹುಲ್ ಗಾಂಧಿ ಶಿಮ್ಲಾದ ಪ್ರಿಯಾಂಕಾ ಜಿ ಅವರ ಮನೆಯಲ್ಲಿ ಪಿಕ್‌ನಿಕ್ ಮಾಡುತ್ತಿದ್ದರು. ಪಕ್ಷವು ಹಾಗೇ ನಡೆಯುತ್ತದೆಯೇ? ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿರುವ ರೀತಿ ಬಿಜೆಪಿಗೆ ಲಾಭವಾಗುತ್ತಿದೆ” ಎಂದು ಆರೋಪಿಸಿದರು.

ಇದೇ ರೀತಿಯ ಅಭಿಪ್ರಾಯವನ್ನು RJD ಮುಖಂಡ ತಾರಿಖ್ ಅನ್ವರ್ ಕೂಡ ವ್ಯಕ್ತಪಡಿಸಿದ್ದರು. ನಿನ್ನೆ ಎನ್‌ಡಿಎ ಕೂಡದಿಂದ ನಿತೀಶ್‌ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಮ್ಮತದಿಂದ ಘೊಷಿಸಲಾಯಿತು. ಇದಾದ ನಂತರ ಈ ಬಿರುಕು ಬೆಳಕಿಗೆ ಬಂದಿದೆ.


ಇದನ್ನೂ ಓದಿ: ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...