Homeಮುಖಪುಟದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ...

ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ

- Advertisement -
- Advertisement -

ಆರ್‌ಎಸ್‍ಎಸ್‍ನ ಎಂ.ಎಸ್ ಗೋಲ್ವಾಲ್ಕರ್ ಆಲೋಚನೆಗಳ ವಿರುದ್ಧ ಹೋರಾಟಕ್ಕೆ ಸೇರುವ ಮೂಲಕ ಮಾತ್ರ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ತಮ್ಮ ತಂದೆಯ ಪರಂಪರೆಯನ್ನು ಮುಂದಕ್ಕೆ ಒಯ್ಯಬಹುದು ಎಂದು  ಹೇಳಿರುವ RJD ನಾಯಕ ತೇಜಸ್ವಿ ಯಾದವ್‍, ದಲಿತ ನಾಯಕ ರಾಮ್‍ ವಿಲಾಸ್‍ ಪಾಸ್ವಾನ್‍ ಅವರ ಜನ್ಮ ದಿನಾಚರಣೆಯನ್ನು ಆಚರಿಸುತ್ತೇವೆ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ನಿಯಂತ್ರಣಕ್ಕಾಗಿ ಚಿಕ್ಕಪ್ಪ ಪಶುಪತಿ ಕುಮಾರ್ ಅವರೊಂದಿಗಿನ ಕಹಿಯ ಬಗ್ಗೆ ಬಿಜೆಪಿಯ ಮೌನದ ಬಗ್ಗೆ ಚಿರಾಗ್ ನಿರಾಶೆ ಹೊಂದಿರುವ ಸಂದರ್ಭದಲ್ಲಿ, ‘ಯಾರ್ಯಾರಿಂದ ಎಷ್ಟು ಲಾಭ ಬೇಕೋ ಅಷ್ಟನ್ನು ಪಡೆದ ಬಿಜೆಪಿ ಅಧಿಕಾರ ಸಿಕ್ಕ ನಂತರ ಅವರನ್ನು ಕೈ ಬಿಟ್ಟಿದೆ  ಎಂದ ತೇಜಸ್ವಿ ಯಾದವ್ ಚಿರಾಗ್‍ ಪರ ನಿಂತಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಯಾದವ್, ತಮ್ಮ ಪಕ್ಷವು ಯಾವಾಗಲೂ ರಾಮ್ ವಿಲಾಸ್ ಪಾಸ್ವಾನ್ ಅವರ ಪರವಾಗಿ ನಿಂತಿದೆ. ಎಲ್‍ಜೆಪಿಗೆ ಒಬ್ಬ ಶಾಸಕರಿಲ್ಲದಿದ್ದಾಗ ಮತ್ತು ರಾಮ್‍ ವಿಲಾಸ್‍ ಪಾಸ್ವಾನ್ 2009ರಲ್ಲಿ ನಡೆದ ಚುನಾವಣೆಯಲ್ಲಿ ಸೋತಾಗ, ಲಾಲು ಪ್ರಸಾದ್ ಯಾದವ್ RJD ಕೋಟಾದಲ್ಲಿ ಅವರನ್ನು ರಾಜ್ಯಸಭೆಗೆ ಕಳುಹಿಸಿದ್ದರು ಎಂದು ಹೇಳಿದ್ದಾರೆ.

ದೇಶದ ಬೇರೆ ಯಾವುದೇ ನಾಯಕ ಅಥವಾ ಪಕ್ಷ ಇಷ್ಟು ಕೆಲಸ ಮಾಡಿದ್ದಾರೆ ಅಥವಾ ತ್ಯಾಗ ಮಾಡಿದ್ದಾರೆಯೇ? ಎಂದು ಅವರು ಕೇಳಿದರು. “ರಾಮ್ ವಿಲಾಸ್ ಜಿ ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲು ಅವರ ಜನ್ಮ ದಿನಾಚರಣೆಯನ್ನು ಆಚರಿಸಲು ನಮ್ಮ ಪಕ್ಷ ನಿರ್ಧರಿಸಿದೆ” ಎಂದು ಯಾದವ್ ಹೇಳಿದರು.

“ದಿವಂಗತ ರಾಮ್ ವಿಲಾಸ್ ಜಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮತ್ತು ಲೋಕಸಭೆಯಲ್ಲಿ ಸಂಸದೀಯ ನಾಯಕರಾಗಿ ನೇಮಕ ಮಾಡುವ ಮೂಲಕ ಚಿರಾಗ್ ಪಾಸ್ವನ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಡಿದರು. ಈಗ ಅವರು ತಮ್ಮ ತಂದೆಯ ಪರಂಪರೆಯನ್ನು ಹೇಗೆ ಮುಂದಕ್ಕೆ ಸಾಗಿಸುತ್ತಾರೆ ಎಂಬುದು ಈಗ ಅವರ ಮೇಲಿದೆ” ಎಂದು ಯಾದವ್ ಹೇಳಿದರು.


ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...