Homeಮುಖಪುಟನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ'...

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ ಮಂಡನೆ

- Advertisement -
- Advertisement -

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದಾರೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.

ಇದಕ್ಕೆಂದು ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

ವಿಧೇಯಕದಲ್ಲಿ 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ, ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ, ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ, ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ,  ರಸ್ತೆಗಳು, ಬಡಾವಣೆ ಪ್ರದೇಶದ ನಾಮಫಲಕದಲ್ಲೂ ಕನ್ನಡ ಕಡ್ಡಾಯ, ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯದ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

ಮಸೂದೆಯ ಮೂಲಕ ಇನ್ನು ಮುಂದೆ ನಾಮಫಲಕಗಳಲ್ಲಿ ಕಾಟಾಚಾರಕ್ಕೆ ಮಾತ್ರ ಕನ್ನಡ ಬರದಂತೆ ಮಾಡುವುದು ಅಥವಾ ನಾಮಫಲಕದ ಒಂದು ಮೂಲೆಯಲ್ಲಿ ಮಾತ್ರ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಅನೇಕ ಕಡೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಇಂತಹ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇದೇ ಕಾರಣಕ್ಕೆ ಕನ್ನಡಪರ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ನಡೆಸಿದ್ದವು. ಬೇರೆ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳು ಎದ್ದು ಕಾಣುವಂತೆಯೇ ಕರ್ನಾಟಕದಲ್ಲೂ ಆಗಬೇಕು ಎಂದು ಆಗ್ರಹಿಸಲಾಗಿತ್ತು.

 ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು, ಮಾಲ್‌ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು  ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ  ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿರಲಿಲ್ಲ.

ಇದಾದ ಬಳಿಕ ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್‌ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...