Homeಕರ್ನಾಟಕ2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು:  2019 ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಡಿಪ್ಲೊಮಾ ವಿದ್ಯಾರ್ಥಿಯ ಕುಟುಂಬಕ್ಕೆ ರಾಜ್ಯ ಹೈಕೋರ್ಟ್ ಪರಿಹಾರವನ್ನು ಹೆಚ್ಚಿಸಿ ತೀರ್ಪು ನೀಡಿದೆ. ಮೋಟಾರ್ ಅಕ್ಸಿಡೆಂಟ್ ಕ್ಲೈಮ್ಸ್ ಟ್ರಿಬ್ಯೂನಲ್ ಆರಂಭದಲ್ಲಿ ನೀಡಿದ್ದ 1,53,000 ಲಕ್ಷ  ರೂ.ವನ್ನು 21,28,800 ಲಕ್ಷ ರೂ.ಗೆ ಹೆಚ್ಚಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಮತ್ತು ವಿಜಯಕುಮಾರ್ ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪರಿಷ್ಕೃತ ಪರಿಹಾರವನ್ನು ಆರಂಭದಲ್ಲಿ ವಿಮಾ ಕಂಪನಿಯು ಪಾವತಿಸಬೇಕು. ನಂತರ ವಾಹನ ಮಾಲೀಕರಿಂದ ಮೊತ್ತವನ್ನು ಕಂಪನಿಯು ಮರುಪಡೆಯಬಹುದು. ಈ ಪ್ರಕರಣವು 2019 ರ ಏಪ್ರಿಲ್ 23 ರಂದು ಸ್ನೇಹಿತ ಅರವಿಂದ್ ಅವರೊಂದಿಗೆ 19 ವರ್ಷದ ಎಂ.ಎಸ್. ಶ್ರೀಹರಿ ಅವರ ರಸ್ತೆ ಅಫಘಾತದಿಂದಾದ ಸಾವಿಗೆ ಸಂಬಂಧಿಸಿದೆ.

ಬೆಂಗಳೂರು ಸಮೀಪದ ಹೆಜ್ಜಾಲ-ಕೆಂಪದ್ಯಾಪನಹಳ್ಳಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಅತಿವೇಗದ ಚಾಲನೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ರಾಮನಗರ ಜಿಲ್ಲೆಯ ಮಲ್ಲತ್ತಹಳ್ಳಿ ಗ್ರಾಮದ ಬಳಿ ಮಣ್ಣಿನ ಗೋಡೆಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯುವಕ ಇಲ್ಲಿನ ಪಿಇಎಸ್ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಹಾಲು ಮಾರಾಟ ವ್ಯವಹಾರದ ಮೂಲಕ ತಿಂಗಳಿಗೆ  20,000  ರೂ. ಸಂಪಾದಿಸುತ್ತಿದ್ದ  ಎಂದು ತಿಳಿಸಿರುವ ಶ್ರೀಹರಿಯ ಕುಟುಂಬದ ಪೋಷಕರು ಮತ್ತು ಸಹೋದರಿ ಆರಂಭದಲ್ಲಿ 30 ಲಕ್ಷ ರೂ. ಕೋರಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ನ್ಯಾಯಾಲಯವು ತನ್ನ ಏಪ್ರಿಲ್ 2022 ರ ಆದೇಶದಲ್ಲಿ, 1.53 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ಸವಾರನು ಆ ಸಂದರ್ಭದಲ್ಲಿ ಚಾಲನಾ ಪರವಾನಗಿಯನ್ನು ಹೊಂದಿರಲಿಲ್ಲವಾಗಿದ್ದರಿಂದ ಪ್ರಾಥಮಿಕವಾಗಿ ಮೋಟಾರ್ ಮಾಲೀಕ ಸೂರಜ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಿದೆ.

ಇದನ್ನೂ ಓದಿ…10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

ನ್ಯಾಯಮಂಡಳಿಯ ತೀರ್ಪಿನಿಂದ ಅತೃಪ್ತರಾದ ಕುಟುಂಬವು ಮೇಲ್ಮನವಿ ಸಲ್ಲಿಸಿ, ಸುಪ್ರೀಂ ಕೋರ್ಟ್ ಪೂರ್ವನಿದರ್ಶನಕ್ಕೆ ಅನುಗುಣವಾಗಿ ಪರಿಹಾರವನ್ನು ಮುಂಗಡವಾಗಿ ಪಾವತಿಸಲು ಮತ್ತು ನಂತರ ಮಾಲೀಕರಿಂದ ವಸೂಲಿ ಮಾಡಲು ವಿಮಾ ಕಂಪನಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ,ಚಾಲನಾ ಪರವಾನಿಗೆ ಇಲ್ಲದಿರುವುದು ನೀತಿ ಉಲ್ಲಂಘನೆಯಾಗಿದೆ ಮತ್ತು ಹಕ್ಕುದಾರರು ಶ್ರೀಹರಿಯ ಮೇಲೆ ಆರ್ಥಿಕ ಅವಲಂಬನೆಯನ್ನು ಸಾಕಷ್ಟು ಸಾಬೀತುಪಡಿಸಿಲ್ಲ ಎಂದು ವಿಮಾದಾರರು ವಾದಿಸಿದರು.

ಆದಾಗ್ಯೂ, ಕುಟುಂಬದ ಪರವಾಗಿ ತೀರ್ಪು ನೀಡಿರುವ ಹೈಕೋರ್ಟ್,ಸುಪ್ರೀಂ ಕೋರ್ಟ್ ಸೂಚಿಸಿದ  “ಪಾವತಿ ಮತ್ತು ಮರುಪಡೆಯುವಿಕೆ” ಎಂಬ ನಿರ್ದೇಶನ ಈ ಪ್ರಕರಣಕ್ಕೆ ಅನ್ವಯಿಸುತ್ತದೆ ಎಂದು ಹೇಳಿದೆ. ಶ್ರೀಹರಿಯ ಕುಟುಂಬವು ಆದಾಯವನ್ನು ನಿರ್ಣಾಯಕವಾಗಿ ಸಾಬೀತುಪಡಿಸಲು ಸಾಧ್ಯವಾಗದಿದ್ದರೂ,ಅವರ ವಯಸ್ಸು ಮತ್ತು ಕೌಟುಂಬಿಕ ಪಾತ್ರವನ್ನು ರುಜುವಾತುಪಡಿಸಲಾಗಿದೆ ಎಂದಿದೆ.

ನ್ಯಾಯಾಲಯವು ಅವನ ಮಾಸಿಕ ಗಳಿಕೆಯನ್ನು  14,000 ರೂ. ಎಂದು ಅಂದಾಜು ಮಾಡಿದೆ. ಅರ್ಜಿ ಸಲ್ಲಿಸಿದ ದಿನದಿಂದ ಮೊತ್ತವನ್ನು ಠೇವಣಿ ಇಡುವವರೆಗೆ ಶೇ 6ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ₹21,28,800 ಪಾವತಿಸುವಂತೆ ಪೀಠವು ವಿಮಾ ಕಂಪನಿಗೆ ಸೂಚಿಸಿದೆ.

ಇದನ್ನೂ ಓದಿ….2019ರ ರಸ್ತೆ ಅಪಘಾತ: ವಿದ್ಯಾರ್ಥಿ ಕುಟುಂಬಕ್ಕೆ 21 ಲಕ್ಷ ರೂ. ಪರಿಹಾರ ಹೆಚ್ಚಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...