ಚಿಕ್ಕಬಳ್ಳಾಪುರ ಸಮೀಪ ಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿರುವ ಬುಧವಾರ (ಏ.30) ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದ ಅವರು, ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹಿಂದಿರುಗುವ ವೇಳೆ ಕಾರಿನ ಚಕ್ರ ಸಿಡಿದ ಪರಿಣಾಮ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ಚಲಾಯಿಸುತ್ತಿದ್ದ ವಕೀಲೆಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ದಳಸಗೆರೆ ಮೂಲದ ಬಿ.ಚನ್ನಕೃಷ್ಣಪ್ಪ ಸುಮಾರು 35 ವರ್ಷಕ್ಕೂ ಹೆಚ್ಚು ಕಾಲ ದಲಿತ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ನಾಡಿನ ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿದ್ದ ಅವರು, ಇತ್ತೀಚೆಗಷ್ಟೇ ದಾವಣಗೆರೆಯಲ್ಲಿ ನಡೆದ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಭಾಗವಹಿಸಿದ್ದರು.
“ಭೂಮಿ ಮತ್ತು ವಸತಿ ಹೋರಾಟದೊಂದಿಗೆ ಜೊತೆಗಿದ್ದ ಚನ್ನ ಕೃಷ್ಣಪ್ಪನವರು ಆರಂಭದಿಂದಲೂ ಹೋರಾಟದಲ್ಲಿ ಸಕ್ರೀಯವಾಗಿದ್ದರು. ಕಳೆದ ಬಾರಿ ಬೆಂಗಳೂರಿನಲ್ಲಿ ನಡೆದ ಹೋರಾಟದಲ್ಲಿ ಜವಾಬ್ದಾರಿ ತೆಗೆದುಕೊಂಡಿದ್ದ ಅವರು, ರಾಜ್ಯಾದ್ಯಂತ ಭೂಮಿ ವಸತಿ ವಿಚಾರ ಇಟ್ಟುಕೊಂಡು ಹೋರಾಟ ಕಟ್ಟುವ ಬಗ್ಗೆ ಪ್ರಸ್ತಾಪಿಸಿದ್ದರು. ಇವರ ಅಗಲಿಕೆ ಹೋರಾಟಕ್ಕೂ ನಮಗೂ ನಷ್ಟವೇ ಆಗಿದೆ. ಅಗಲಿದ ಹೋರಾಟದ ಒಡನಾಡಿಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಅಂತಿಮ ನಮನಗಳು” ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಹೇಳಿದರು.
ಪಾಕಿಸ್ತಾನ ಪರ ಘೋಷಣೆ ಕೂಗುವುದು ‘ದೇಶದ್ರೋಹ’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ


