Homeಕರ್ನಾಟಕರಸ್ತೆ ಅಪಘಾತ, ಸಾವು ನೋವುಗಳಲ್ಲಿ ಬೆಂಗಳೂರು ರಾಜ್ಯಕ್ಕೆ ಪ್ರಥಮ; 4 ವರ್ಷಗಳಲ್ಲಿ ದ್ವಿಗುಣ!

ರಸ್ತೆ ಅಪಘಾತ, ಸಾವು ನೋವುಗಳಲ್ಲಿ ಬೆಂಗಳೂರು ರಾಜ್ಯಕ್ಕೆ ಪ್ರಥಮ; 4 ವರ್ಷಗಳಲ್ಲಿ ದ್ವಿಗುಣ!

- Advertisement -
- Advertisement -

ಕಳೆದ ನಾಲ್ಕು ವರ್ಷಗಳಲ್ಲಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳು ಮತ್ತು ಸಾವಿನ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ನೇಮಕಾತಿ) ಮತ್ತು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತ ಕೆ.ವಿ.ಶರತ್ ಚಂದ್ರ ಹೇಳಿದ್ದಾರೆ. ಅತಿವೇಗವೆ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಅವರು ಪ್ರತಿಪಾದಿಸಿದ್ದಾರೆ. ರಸ್ತೆ ಅಪಘಾತ

ಬೆಂಗಳೂರಿನಲ್ಲಿ 2020 ರಲ್ಲಿ, 1,928 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, 2024 ರಲ್ಲಿ ಅಕ್ಟೋಬರ್ 31 ರವರೆಗೆ 3,969 ಪ್ರಕರಣಗಳು ವರದಿಯಾಗಿವೆ ಎಂದು ಅವರು ಹೇಳಿದ್ದಾರೆ. ಈ ಅವಧಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ. 2020 ರಲ್ಲಿ ರಸ್ತೆ ಅಪಘಾತದ ಕಾರಣಕ್ಕೆ 344 ಸಾವುಗಳು ವರದಿಯಾಗಿದ್ದು, 2024 ರಲ್ಲಿ ಇದು 723 ಕ್ಕೆ ಏರಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅತಿ ಹೆಚ್ಚು ರಸ್ತೆ ಅಪಘಾತಗಳು, ಗಾಯಗಳು ಮತ್ತು ಸಾವುನೋವುಗಳಲ್ಲಿ ಬೆಂಗಳೂರು ನಗರವು ರಾಜ್ಯದಲ್ಲೆ ಅಗ್ರಸ್ಥಾನದಲ್ಲಿದೆ ಎಂದು ಅವರು ಹೇಳಿದ್ದಾರೆ. ತುಮಕೂರು ನಂತರದ ಸ್ಥಾನದಲ್ಲಿದೆ ಎಂದು ಶರತ್ ಚಂದ್ರ ಹೇಳಿದ್ದಾರೆ.

ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ ಶರತ್ ಚಂದ್ರ, “ಹೆದ್ದಾರಿಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅವುಗಳ ಮೂಲಕ ಸಮಗ್ರ ಸಂಚಾರ ನಿರ್ವಹಣೆ ಪರಿಹಾರಗಳನ್ನು ಪರಿಚಯಿಸಲಾಗಿದೆ. ಆದಾಗ್ಯೂ, ರಸ್ತೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನಗಳು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 34,178 ರಸ್ತೆ ಅಪಘಾತಗಳು 2020ರಲ್ಲಿ ವರದಿಯಾಗಿದ್ದು, ಅದರಲ್ಲಿ 9,720 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ 43,440 ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 12,321 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಜಾಗೃತಿ, ಉತ್ತಮ ರಸ್ತೆ ಎಂಜಿನಿಯರಿಂಗ್ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಅವರು ಪ್ರತಿಪಾದಿಸಿದ್ದಾರೆ.

ಬ್ಲೂಮ್‌ಬರ್ಗ್ ಫಿಲಾಂತ್ರಪೀಸ್ ಇನಿಶಿಯೇಟಿವ್ ಫಾರ್ ಗ್ಲೋಬಲ್ ರೋಡ್ ಸೇಫ್ಟಿ ಅಡಿಯಲ್ಲಿ ಜಾಗತಿಕ ಸಾರ್ವಜನಿಕ ಆರೋಗ್ಯ ಸಂಸ್ಥೆಯಾದ ವೈಟಲ್ ಸ್ಟ್ರಾಟಜೀಸ್‌ನ ತಾಂತ್ರಿಕ ಬೆಂಬಲದೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ‘ಮೋಟಾರ್ ಸೈಕಲ್ ಪುನರ್ನಿರ್ಮಾಣ’ ಅಭಿಯಾನಕ್ಕೆ ಮಂಗಳವಾರ ಬೆಂಗಳೂರಿನಲ್ಲಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....