Homeಮುಖಪುಟಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

- Advertisement -
- Advertisement -

ದೇಶದಲ್ಲಿ ಕಳೆದ ಒಂದು ವರ್ಷದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರಿಗಿಂತ ರಸ್ತೆ ಅಪಘಾತಗಳಿಂದ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಹಾಗಾಗಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಗಂಭೀರವಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಗುರುವಾರ ಲೋಕಸಭೆಯಲ್ಲಿ ಪ್ರಶ್ನಾವಳಿ ಸಮಯದಲ್ಲಿ ಮಾತನಾಡಿದ ಕೇಂದ್ರ ಸಚಿವ ಗಡ್ಕರಿ, ’ರಸ್ತೆ ಅಪಘಾತಗಳ ಬಗ್ಗೆ ಸರ್ಕಾರವು ತುಂಬಾ ಕಾಳಜಿ ವಹಿಸುತ್ತಿದೆ ಮತ್ತು ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ.

“ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿದೆ. ಕಳೆದ ಒಂದು ವರ್ಷದಲ್ಲಿ 1.5 ಲಕ್ಷ ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ್ದಾರೆ. ಇದು ದೇಶದಲ್ಲಿ ಕೊರೊನಾ ಸಾಂಕ್ರಾಮಿಕದಿಂದ ಮೃತಪಟ್ಟ 1.46 ಲಕ್ಷ ಸಾವಿಗಿಂತ ಹೆಚ್ಚಾಗಿದೆ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು 18 ರಿಂದ 35 ವಯಸ್ಸಿನವರು ಎಂದು ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ವಿಶ್ವಬ್ಯಾಂಕ್ ವರದಿಯ ಪ್ರಕಾರ, ಜಾಗತಿಕವಾಗಿ ಭಾರತದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ನಡೆಯುತ್ತಿವೆ ಎಂದಿದೆ. ವರ್ಷಕ್ಕೆ 4.5 ಲಕ್ಷ ರಸ್ತೆ ಅಪಘಾತಗಳು ನಡೆಯುತ್ತಿದ್ದು, ವಾರ್ಷಿಕವಾಗಿ 1.5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಜೊತೆಗೆ ಒಂದು ವರ್ಷದೊಳಗೆ ದೇಶದಲ್ಲಿನ ಟೋಲ್‌ ಪ್ಲಾಜಾಗಳಲ್ಲಿರುವ ಬೂತ್‌ಗಳನ್ನು ತೆಗೆದು, ಜಿಪಿಎಸ್ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆ ಸರ್ಕಾರ ಜಾರಿಗೆ ತರಲಾಗುವುದು ಎಂದು ಸಚಿವ ನಿತನ್ ಗಡ್ಕರಿ ತಿಳಿಸಿದ್ದಾರೆ.


ಇದನ್ನೂ ಓದಿ: ‘ಕಮಲದ ಗುಂಡಿ ಒತ್ತಿ, ಮಮತಾ ತನ್ನ ಕುರ್ಚಿಯಿಂದ ಎರಡು ಅಡಿ ಹಾರಿ ಬೀಳುವ ಕರೆಂಟ್ ಹೊಡೆಯುತ್ತದೆ’-ನಿತಿನ್ ಗಡ್ಕರಿ ವಿವಾದಾತ್ಮಕ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...