Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ನಾಲ್ಕು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

- Advertisement -
- Advertisement -

ಬಹು ನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕ್ ಎದುರು ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದೆ. ವಿರಾಟ್ ಕೊಹ್ಲಿಯ ಅದ್ಭುತ ಇನ್ನಿಂಗ್ಸ್ (53 ಎಸೆತಗಳಲ್ಲಿ 82 ರನ್)  ಮೂಲಕ ಕಳೆದ ವರ್ಷದ ಮೊದಲ ಪಂದ್ಯದ ಸೋಲಿನ ಕಹಿ ಮರೆತಿದೆ. ಅಲ್ಲದೆ ಎರಡನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ದವೂ 56 ರನ್ ಗಳ ಜಯ ಕಂಡಿದೆ. ಆದರೆ ಇಷ್ಟಕ್ಕೆ ಭಾರತ ನಿಟ್ಟುಸಿರು ಬಿಡುವ ಪರಿಸ್ಥಿತಿ ಇಲ್ಲ. ಭಾರತ ತಂಡಕ್ಕೆ ಸೂಪರ್ 12 ಹಂತದ ಇನ್ನು ಮೂರು ಪಂದ್ಯಗಳು ಬಾಕಿ ಇದ್ದು ಒಮ್ಮೆ ಮೈ ಮರೆತರೂ ಕಳೆದ ವರ್ಷದಂತೆ ಸೆಮಿಫೈನಲ್ ಪ್ರವೇಶಿಸದೆ ಹೊರಬೀಳುವ ಆತಂಕವಿದೆ.

ಕಳೆದ ವರ್ಷದ ಸೂಪರ್ 12 ಹಂತದಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಪಾಕ್ ಮತ್ತು ನ್ಯೂಜಿಲೆಂಡ್ ಎದುರು ಪರಾಭವಗೊಂಡಿದ್ದ ಭಾರತ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಗ್ರೂಪ್ ಎರಡರಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಕ್ರಮವಾಗಿ 5 ಮತ್ತು 4 ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪಿದ್ದವು. ಈ ಬಾರಿ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದು ವಿಶ್ವಾಸದಲ್ಲಿರುವ ಭಾರತ ತಂಡವು ಉಳಿದ ಪಂದ್ಯಗಳತ್ತ ದೃಷ್ಟಿ ನೆಟ್ಟಿದೆ.

ಗ್ರೂಪ್ ಎರಡರಲ್ಲಿ 6 ತಂಡಗಳಿದ್ದು, ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳಷ್ಟೇ ಸೆಮಿಗೆ ಹೋಗಲು ಸಾಧ್ಯ. ಭಾರತ ಮುಂದಿನ ಎದುರಾಳಿಗಳಾದ ದಕ್ಷಿಣ ಆಫ್ರಿಕಾ, ಮತ್ತು ಬಾಂಗ್ಲಾದೇಶ ತಂಡಗಳು ಸಹ ಬಲಿಷ್ಟವಾಗಿ ಕಾಣಿಸುತ್ತಿವೆ. ಅಲ್ಲದೆ ಪಾಕ್ ತಂಡ ಉಳಿದ ಪಂದ್ಯಗಳಲ್ಲಿ ಕಮ್ ಬ್ಯಾಕ್ ಮಾಡುವ ಉದ್ದೇಶ ಹೊಂದಿದೆ. ಹಾಗಾಗಿ ಭಾರತ ತಂಡ ಸತತ ಗೆಲುವುಗಳೊಂದಿಗೆ ಸೆಮಿಫೈನಲ್ ತಲುಪುವ ಸಾಧ್ಯತೆಗಳು ಈ ಕೆಳಗಿನಂತಿವೆ.

ಇದನ್ನೂ ಓದಿ; ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಸಾಧ್ಯತೆ 1: ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ಕ್ರಮವಾಗಿ ದಕ್ಷಿಣ ಆಫ್ರಿಕಾ (ಅಕ್ಟೋಬರ್ 30), ಬಾಂಗ್ಲಾದೇಶ (ನವೆಂಬರ್ 2) ಮತ್ತು ಜಿಂಬಾಬ್ವೆ (ನವೆಂಬರ್ 6) ವಿರುದ್ದ ಸೆಣಸಲಿದೆ. ಈ ಮೂರು ಪಂದ್ಯಗಳನ್ನು ಗೆದ್ದಲ್ಲಿ ಅದು 10 ಪಾಯಿಂಟ್‌ಗಳೊಂದಿಗೆ ನಿರಾಂತಕವಾಗಿ ಸೆಮಿಫೈನಲ್ ತಲುಪಲಿದೆ.

ಸಾಧ್ಯತೆ 2: ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ನಡುವಿನ ಪಂದ್ಯ ಮಳೆಯ ಕಾರಣದಿಂದ ಸ್ಥಗಿತಗೊಂಡಿತು. ಹಾಗಾಗಿ ಎರಡೂ ತಂಡಕ್ಕೂ ತಲಾ ಒಂದೊಂದು ಅಂಕ ನೀಡಲಾಗಿದೆ. ಹಾಗಾಗಿ ಸೆಮಿಫೈನಲ್ ತಲುಪುವ ಪ್ರಬಲ ತಂಡಗಳಾದ ಪಾಕ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುವ ನವೆಂಬರ್ 3ರ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ. ಆ ಪಂದ್ಯದಲ್ಲಿ ಸೋತ ತಂಡ ಹೊರನಡೆಯುವ ಸಾಧ್ಯತೆಯಿರುತ್ತದೆ. ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ದಾರಿ ಸುಲಭವಾಗಲಿದೆ.

ಒಂದು ಪಂದ್ಯ ಸೋತಿರುವ ಪಾಕಿಸ್ತಾನ ಮತ್ತು ಒಂದು ಟೈ ಮಾಡಿಕೊಂಡಿರುವ ದಕ್ಷಿಣ ಆಫ್ರಿಕಾ ತಂಡಗಳು ಒಂದು ಪಂದ್ಯ ಸೋತರೂ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಇದೆ. ಏಕೆಂದರೆ ಬಾಂಗ್ಲಾದೇಶ ತಂಡವು ಪರಿಣಾಮಕಾರಿ ಪ್ರದರ್ಶನ ನೀಡುತ್ತಿದೆ. ಭಾರತ ಬಾಂಗ್ಲಾದೇಶ ವಿರುದ್ಧ ಗೆದ್ದಲ್ಲಿ ಸೆಮಿಫೈನಲ್ ತಲುಪುವ ಸಾಧ್ಯತೆ ದಟ್ಟವಾಗುತ್ತದೆ.

ಕಳೆದ ವರ್ಷ ಗ್ರೂಪ್ ಒಂದರಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ನಾಲ್ಕು ಪಂದ್ಯ ಗೆದ್ದು ತಲಾ 08 ಅಂಕ ಗಳಿಸಿದ್ದರು. ಆದರೂ ರನ್‌ ರೇಟ್ ಆಧಾರದಲ್ಲಿ ಕಡಿಮೆಯಿದ್ದ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಿಂದ ಹೊರಬಿದ್ದರೆ ಉಳಿದ ತಂಡಗಳು ಸೆಮಿಫೈನಲ್‌ಗೇರಿದವು. ಅಂದರೆ ಸೂಪರ್ 12 ಹಂತದಲ್ಲಿ ಭಾರೀ ಪೈಪೋಟಿ ಇರುವುದರಿಂದ ಪ್ರತಿ ತಂಡಗಳು ಜಾಗರೂಕತೆಯಿಂದ ಕಣಕ್ಕಿಳಿಯುತ್ತಿವೆ. ಈ ಆಧಾರದಲ್ಲಿ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಒತ್ತಡದಲ್ಲಿದೆ.

ಇದನ್ನೂ ಓದಿ: ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...