Homeಸಿನಿಮಾಕ್ರೀಡೆಕೆ.ಎಲ್ ರಾಹುಲ್ ವಿರುದ್ಧ ರನ್ ಔಟ್ ಮನವಿ ಹಿಂಪಡೆದು ಕ್ರೀಡಾಸ್ಫೂರ್ತಿ ಮೆರೆದ ರೋಹಿತ್, ಕೃನಾಲ್: ನೆಟ್ಟಿಗರ...

ಕೆ.ಎಲ್ ರಾಹುಲ್ ವಿರುದ್ಧ ರನ್ ಔಟ್ ಮನವಿ ಹಿಂಪಡೆದು ಕ್ರೀಡಾಸ್ಫೂರ್ತಿ ಮೆರೆದ ರೋಹಿತ್, ಕೃನಾಲ್: ನೆಟ್ಟಿಗರ ಮೆಚ್ಚುಗೆ

- Advertisement -
- Advertisement -

ಮಂಗಳವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ 42ನೇ ಐಪಿಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯಗಳಿಸಿತು. ಆದರೆ ಅದಕ್ಕಿಂತಲೂ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ತೋರಿದ ಕ್ರೀಡಾಸ್ಫೂರ್ತಿಗೆ ಅಭಿಮಾನಿಗಳು ಅಭಿನಂದನೆಗಳ ಮಹಾಪೂರ ಹರಿಸಿದ್ದಾರೆ.

ಪಂದ್ಯದ 6ನೇ ಓವರ್‌ನಲ್ಲಿ ಕೃನಾಲ್ ಪಾಂಡ್ಯ ಕೊನೆಯ ಬಾಲ್ ಮಾಡಿದರು. ಬ್ಯಾಟಿಂಗ್‌ನಲ್ಲಿದ್ದ ಕ್ರಿಸ್ ಗೇಲ್ ಬಲವಾಗಿ ಹೊಡೆದ ಬಾಲ್ ನಾನ್ ಸ್ಟ್ರೈಕರ್ ಎಂಡ್‌ನಲ್ಲಿದ್ದ ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಕೈಗೆ ಬಡಿಯಿತು. ಗಾಯಗೊಂಡ ರಾಹುಲ್ ಒಂದು ಕ್ಷಣ ವಿಚಲಿತರಾದರು. ಅಷ್ಟರಲ್ಲಿ ಕೃನಾಲ್ ಬಾಲ್ ಅನ್ನು ವಿಕೆಟ್‌ಗೆ ಮುಟ್ಟಿಸಿ ರನ್ ಔಟ್ ಮನವಿ ಮಾಡಿದರು. ಅಂಪೈರ್ ಮೂರನೇ ಅಂಪೈರ್‌ಗೆ ರೆಫರ್ ಮಾಡಿದರು. ಆದರೆ ರಾಹುಲ್‌ ಗಾಯಗೊಂಡಿದ್ದನ್ನು ಗಮನಿಸಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕೂಡಲೇ ರನ್ ಔಟ್ ಮನವಿ ರದ್ದುಗೊಳಿಸಿದರು. ಕೃನಾಲ್ ಪಾಂಡ್ಯ ಸಹ ಅದಕ್ಕೆ ಸಹಮತ ವ್ಯಕ್ತಪಡಿಸಿ ರನ್ ಔಟ್ ಮನವಿ ಹಿಂಪಡೆದರು. ಈ ರೀತಿ ಕ್ರೀಡಾಸ್ಫೂರ್ತಿ ಮೆರೆದ ರೋಹಿತ್ ಶರ್ಮಾ ಮತ್ತು ಕೃನಾಲ್ ಪಾಂಡ್ಯರಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎಲ್ ರಾಹುಲ್ ಥಂಬ್ಸ್ ಅಪ್ ಮಾಡುವ ಮೂಲಕ ಕೃತಜ್ಞತೆ ತೋರಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 136 ರನ್ ಗಳಿಸಲಷ್ಟೇ ಸಾಧ್ಯವಾಯಿತು. ನಂತರ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿ 6 ವಿಕೆಟ್‌ಗಳ ಜಯ ಪಡೆಯಿತು.


ಇದನ್ನೂ ಓದಿ: ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....