Homeಮುಖಪುಟಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆಹಾಕಿದ ರೋಹಿತ್ ವೇಮುಲಾ ತಾಯಿ ರಾಧಿಕ ವೇಮುಲಾ

ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆಹಾಕಿದ ರೋಹಿತ್ ವೇಮುಲಾ ತಾಯಿ ರಾಧಿಕ ವೇಮುಲಾ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತೆಲಂಗಾಣ ರಾಜ್ಯದಲ್ಲಿ 7ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿ ಹೋರಾಟಗಾರ ಹುತಾತ್ಮ ರೋಹಿತ್ ವೇಮುಲಾರವರ ತಾಯಿ ರಾಧಿಕ ವೇಮುಲಾರವರು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿ ಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್ ದಾಳಿಯಿಂದ ಸಂವಿಧಾನವನ್ನು ಉಳಿಸುವುದಕ್ಕಾಗಿ, ರೋಹಿತ್ ವೇಮುಲಾ ಸಾವಿಗೆ ನ್ಯಾಯಕ್ಕಾಗಿ, ರೋಹಿತ್ ಕಾಯ್ದೆ ಜಾರಿಯಾಗಲು, ಉನ್ನತ ನ್ಯಾಯಾಂಗದಲ್ಲಿ ದಲಿತರು, ತುಳಿತಕ್ಕೊಳಗಾದ ವರ್ಗಗಳ ಪ್ರಾತಿನಿಧ್ಯವನ್ನು ಹೆಚ್ಚಿಸುವುದಕ್ಕಾಗಿ ಮತ್ತು ಎಲ್ಲರಿಗೂ ಶಿಕ್ಷಣಕ್ಕಾಗಿ ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸಿ ರಾಹುಲ್ ಗಾಂಧಿ ಜೊತೆಯಲ್ಲಿ ನಡೆದಿದ್ದೇನೆ ಎಂದು ರಾಧಿಕ ವೇಮುಲಾರವರು ಟ್ವೀಟ್ ಮಾಡಿದ್ದಾರೆ.

“ರೋಹಿತ್ ವೇಮುಲನ ತಾಯಿಯೊಂದಿಗೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ತಾಯಿಯ ಭರವಸೆ… ಮಗನ ಭಾವ” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಕೂಡ ಫೋಟೊಗಳನ್ನು ಹಂಚಿಕೊಂಡಿದೆ.

ವಿಶ್ವವಿದ್ಯಾಲಯದ ಜಾತಿ ತಾರತಮ್ಯ, ಶೋಷಣೆ ವಿರುದ್ಧ ಹೋರಾಡಿ ಕೊನೆಗೆ “ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು”… ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ಪ್ರಾಣತ್ಯಾಗ ಮಾಡಿದರು ರೋಹಿತ್ ವೇಮುಲಾ.

ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ವೇಮುಲಾರನ್ನು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ಬಹುತೇಕರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಕೊನೆಗೂ ಪ್ರಭುತ್ವ ಆತನನ್ನು ಬಲಿ ತೆಗೆದುಕೊಂಡಿತು. ಅಂದಿನಿಂದ ಜಾತಿ ತಾರತಮ್ಯದ ವಿರುದ್ಧ ರೋಹಿತ್ ಕಾಯ್ದೆ ಜಾರಿಗೆ ಬರಬೇಕು ಎಂಬ ಹೋರಾಟ ಆರಂಭಗೊಂಡಿದೆ.

ಇದನ್ನೂ ಓದಿ: ‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...