Homeಮುಖಪುಟರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

"ರೋಹಿತ್ ಪ್ರಕರಣದ ಆರೋಪಿಯನ್ನು ತೆಲಂಗಾಣದ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಬಿಜೆಪಿ ಜನರ ಕ್ಷಮೆಯಾಚಿಸಬೇಕು"

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ ಅವರ ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಸುವ ಕಾನೂನು ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ ಎಂದು ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

“ಪ್ರಕರಣದ ಮರು ತನಿಖೆಗೆ ನಿರ್ದೇಶನ ನೀಡುವಂತೆ ನಾವು ಈಗಾಗಲೇ ಹೈಕೋರ್ಟ್‌ಗೆ ಟಿಪ್ಪಣಿ ಸಲ್ಲಿಸಿದ್ದೇವೆ. ಪ್ರಕರಣದ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ ಬಿಡುವುದಿಲ್ಲ” ಎಂದು ವಿಕ್ರಮಾರ್ಕ ಹೇಳಿದ್ದಾರೆ.

ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ರಾಮಚಂದರ್ ರಾವ್ ಅವರ ನೇಮಕದ ಕುರಿತು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ “ಆಗ ಎಂಎಲ್‌ಸಿ ಆಗಿದ್ದ ರಾವ್, ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರಿಸಲಾದ ಆರೋಪಿಗಳಲ್ಲಿ ಒಬ್ಬರು” ಎಂದಿದ್ದಾರೆ.

“ರಾವ್ ಅವರ ನೇಮಕಾರಿ ಆದಿವಾಸಿಗಳ, ದಲಿತರ ವಿರುದ್ಧ ಯಾರು ಇರುತ್ತಾರೋ ಅವರಿಗೆ ಬಿಜೆಪಿಯಿಂದ ಪ್ರತಿಫಲ ಸಿಗುತ್ತದೆ ಎಂಬುದನ್ನು ತೋರಿಸುತ್ತದೆ” ಎಂದ ವಿಕ್ರಮಾರ್ಕ, “ಬಿಜೆಪಿ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ. “ರಾವ್ ಅವರನ್ನು ಅಧ್ಯಕ್ಷರಾಗಿ ನೇಮಿಸುವ ಮೂಲಕ ನೀವು ದಲಿತರನ್ನು ಗುರಿಯಾಗಿಸಿಕೊಂಡಿದ್ದೀರಾ?” ಎಂದು ಬಿಜೆಪಿ ಹೈಕಮಾಂಡ್‌ ಅನ್ನು ಪ್ರಶ್ನಿಸಿದ್ದಾರೆ.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ 2016ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಜಾತಿ ತಾರತಮ್ಯಕ್ಕೆ ರೋಹಿತ್ ಬಲಿಯಾಗಿದ್ದಾರೆ ಎನ್ನಲಾಗಿದೆ. ರೋಹಿತ್ ಸಾವು ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದಿತ್ತು.

ರೋಹಿತ್ ಸಾವು ಸಂಬಂಧ, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ರೋಹಿತ್ ನಿಧನದ ಎಂಟು ವರ್ಷಗಳ ನಂತರ, ಅಂದರೆ ಮೇ 2024ರಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ನ್ಯಾಯಾಲಯ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಮುಕ್ತಾಯ ವರದಿಯಲ್ಲಿ ರೋಹಿತ್ ವೇಮುಲ ದಲಿತನಲ್ಲ, ಒಬಿಸಿ ಎಂದು ಹೇಳಲಾಗಿದೆ.

ರಾಹುಲ್ ಗಾಂಧಿಯವರ ಮನವಿ ಮೇರೆಗೆ ತೆಲಂಗಾಣ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೆ ತರಲಿದೆ. ನಾವು ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಭವಿಷ್ಯದಲ್ಲಿ ಯಾವುದೇ ರೀತಿಯ ಕಾನೂನು ಸವಾಲನ್ನು ಎದುರಿಸದಂತೆ ಕಾಯ್ದೆಯನ್ನು ಸರಿಯಾಗಿ ಮತ್ತು ಸಂಪೂರ್ಣವಾಗಿ ಪರಿಶೀಲಿಸಲು ಕಾನೂನು ಇಲಾಖೆಗೆ ನೀಡಿದ್ದೇವೆ” ಎಂದು ಭಟ್ಟಿ ವಿಕ್ರಮಾರ್ಕ ಹೇಳಿದ್ದಾರೆ.

ರೋಹಿತ್ ವೇಮುಲ ಆತ್ಮಹತ್ಯೆಯನ್ನು ಒಂದು ಸಾಂಸ್ಥಿಕ ಕೊಲೆ ಎಂದು ಕರೆದ ವಿಕ್ರಮಾರ್ಕ, “ಪಿಎಚ್‌ಡಿ ಮಟ್ಟಕ್ಕೆ ತಲುಪಿದ್ದ ಯುವಕ, ವರ್ಣರಂಜಿತ ಜೀವನವನ್ನು ನಡೆಸುವ ಕನಸು ಕಂಡಿದ್ದ ಯುವಕ, ತನ್ನ ಜೀವನವನ್ನು ಕೊನೆಗೊಳಿಸುವ ನಿರ್ಧಾರ ತೆಗೆದುಕೊಳ್ಳುವ ಹಂತಕ್ಕೂ ಹೋಗಿದ್ದರೆ ಯೋಚಿಸಿ, ಅವರು ಆ ತೀರ್ಮಾನಕ್ಕೆ ಬರಲು ಏನು ಪ್ರೇರೇಪಿಸರಬಹುದು ಎಂದು. ಇದು ಸಾಂಸ್ಥಿಕ ಕೊಲೆಯಲ್ಲವೇ?” ಎಂದು ವಿಕ್ರಮಾರ್ಕ ಪ್ರಶ್ನಿಸಿದ್ದಾರೆ.

ಒಡಿಶಾ: ಬುಡಕಟ್ಟು ನಿಯಮ ಮೀರಿ ಮದುವೆ ಆರೋಪ-ಜೋಡಿಗೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಗ್ರಾಮಸ್ಥರು-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...