ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ ಅವರ ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಸುವ ಕಾನೂನು ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ ಎಂದು ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ. “ಪ್ರಕರಣದ ಮರು ತನಿಖೆಗೆ ನಿರ್ದೇಶನ ನೀಡುವಂತೆ ನಾವು ಈಗಾಗಲೇ ಹೈಕೋರ್ಟ್‌ಗೆ ಟಿಪ್ಪಣಿ ಸಲ್ಲಿಸಿದ್ದೇವೆ. ಪ್ರಕರಣದ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ ಬಿಡುವುದಿಲ್ಲ” ಎಂದು ವಿಕ್ರಮಾರ್ಕ ಹೇಳಿದ್ದಾರೆ. ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ರಾಮಚಂದರ್ ರಾವ್ ಅವರ ನೇಮಕದ ಕುರಿತು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ … Continue reading ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ