Homeಮುಖಪುಟಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

- Advertisement -
- Advertisement -

ರಾಜಸ್ಥಾನ ಸರ್ಕಾರದ ಕಾಳಿ ಬಾಯಿ ಭೀಲ್ ಸ್ಕೂಟಿ ಯೋಜನೆಯಡಿ ಖರೀದಿಸಲಾದ 1,500 ಕ್ಕೂ ಹೆಚ್ಚು ಹೊಚ್ಚ ಹೊಸ ಸ್ಕೂಟರ್‌ಗಳು ಬಳಕೆಯಾಗದೆ ಕ್ರಮೇಣ ಗುಜಿರಿ ವಸ್ತುಗಳಾಗಿ ಬದಲಾಗುತ್ತಿವೆ ಎಂದು ವರದಿಯಾಗದೆ. 2020 ರಲ್ಲಿ ಪ್ರಾರಂಭಿಸಲಾದ ಕಾಳಿ ಬಾಯಿ ಭೀಲ್ ಸ್ಕೂಟಿ ಯೋಜನೆಯಡಿಯಲ್ಲಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡಲು ಬನ್ಸ್ವಾರಾದ ಎರಡು ಕಾಲೇಜುಗಳಲ್ಲಿ ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ಹುಡುಗಿಯರಿಗೆ ಸ್ಕೂಟರ್‌ಗಳನ್ನು ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾರ್ಷಿಕವಾಗಿ ₹2.5 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಕುಟುಂಬಗಳ ಮತ್ತು ರಾಜ್ಯ ಬೋರ್ಡ್ ಪರೀಕ್ಷೆಗಳಲ್ಲಿ 65% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಾಗೂ 10 ನೇ ಅಥವಾ 12 ನೇ ತರಗತಿಯ CBSE ಪರೀಕ್ಷೆಗಳಲ್ಲಿ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹುಡುಗಿಯರು ಈ ಯೋಜನೆಯ ಸ್ಕೂಟರ್ ಪಡೆಯುವ ಅರ್ಹತೆ ಹೊಂದಿದವರಾಗಿದ್ದಾರೆ. ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ

ಇದನ್ನೂ ಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಅದಾಗ್ಯೂ, 2023ರಿಂದ ವಿದ್ಯಾಮಂದಿರ ಕಾಲೇಜು ಹಾಗೂ ಹರದೇವ್‌ ಜೋಶಿ ಸರಕಾರಿ ಬಾಲಕಿಯರ ಕಾಲೇಜು ಮೈದಾನದಲ್ಲಿ ₹80,000 ಬೆಲೆಬಾಳುವ ಒಟ್ಟು ₹12 ಕೋಟಿ ವೆಚ್ಚದ ಸ್ಕೂಟರ್‌ಗಳು ಬಳಕೆಯಾಗದೆ ಕೊಳೆಯುತ್ತಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಗೆದ್ದ ನಂತರ ಸರ್ಕಾರ ಬದಲಾದ ಕಾರಣ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು NDTV ಗೆ ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳಿಗೆ ಸ್ಕೂಟರ್‌ಗಳನ್ನು ನಿಯೋಜಿಸಿದ ನಂತರ, ಹಣಕಾಸು ಇಲಾಖೆಯಿಂದ ಅವರಿಗೆ QR ಕೋಡ್ ಅನ್ನು ರಚಿಸಲಾಗುತ್ತದೆ, ಆದಾಗ್ಯೂ, 1,500 ಸ್ಕೂಟರ್‌ಗಳಿಗೆ ಈ ಪ್ರಕ್ರಿಯೆಯನ್ನು ಇನ್ನೂ ಪ್ರಾರಂಭಿಸಲಾಗಿಲ್ಲ. 

ಇದನ್ನೂಓದಿ: ಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ಹರದೇವ್ ಜೋಶಿ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರಳಾ ಪಾಂಡ್ಯ ಎನ್‌ಡಿಟಿವಿಗೆ ಮಾತನಾಡಿ, “ಕಲ್ಯಾಣ ಯೋಜನೆಯಡಿ ಸ್ಕೂಟಿಗಳನ್ನು ವಿತರಿಸುವ ನೋಡಲ್ ಕಾಲೇಜು ನಮ್ಮದಾಗಿದೆ. ಮಾದರಿ ನೀತಿ ಸಂಹಿತೆಯಿಂದಾಗಿ ಅವುಗಳನ್ನು ವಿತರಿಸಲಾಗಿಲ್ಲ ಮತ್ತು ಈಗ ಹಣಕಾಸು ಇಲಾಖೆಯಿಂದ ಅನುಮತಿಗಾಗಿ ನಾವು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿನ ಈ ವಿಳಂಬಕ್ಕೆ ಪ್ರತಿಪಕ್ಷಗಳು ರಾಜಸ್ಥಾನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಭಾರತ್ ಆದಿವಾಸಿ ಪಕ್ಷದ ಬನ್ಸ್ವಾರಾ ಸಂಸದ ರಾಜ್ ಕುಮಾರ್ ರೋಟ್, “ಇದು ಈ ಸರ್ಕಾರದ ಕ್ರಿಮಿನಲ್ ನಿರ್ಲಕ್ಷ್ಯವಾಗಿದೆ. ಸ್ಕೂಟರ್‌ಗಳು ತುಕ್ಕು ಹಿಡಿಯುತ್ತಿದ್ದು, ಫಲಾನುಭವಿಗಳಿಗೆ ತಲುಪುವ ಬದಲು ಗುಜಿರಿಯಾಗುತ್ತಿವೆ. ಈ ಪರಿಸ್ಥಿತಿಯ ಬಗ್ಗೆ ಸರ್ಕಾರ ನಿಗಾ ವಹಿಸದಿರುವುದು ತುಂಬಾ ದುಃಖಕರವಾಗಿದೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಬುಡಕಟ್ಟು ಕಲ್ಯಾಣ ಸಚಿವ ಬಾಬು ಲಾಲ್ ಖರಾಡಿ ಅವರು ಸ್ಕೂಟರ್‌ಗಳನ್ನು ಒಂದು ವಾರದೊಳಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದ್ದಾರೆಯಾದರೂ, ಅತಿಯಾದ ವಿಳಂಬಕ್ಕೆ ಯಾವುದೇ ಕಾರಣಗಳನ್ನು ನೀಡಿಲ್ಲ. ಕರ್ತವ್ಯಲೋಪ ಮತ್ತು ಸರ್ಕಾರಿ ಆಸ್ತಿಗಳ ಬಗ್ಗೆ ನಿರ್ಲಕ್ಷ್ಯವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖಾರಾಡಿ ಭರವಸೆ ನೀಡಿದ್ದಾರೆ.

ವಿಡಿಯೊ ನೋಡಿ: ಹಾಸನ: ದಲಿತ ಕಾರ್ಮಿಕನ ಮೇಲೆ ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರು- ಆರೋಪ

ವಿಡಿಯೊ ನೋಡಿ: ಹಾಸನ: ದಲಿತ ಕಾರ್ಮಿಕನ ಮೇಲೆ ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರು- ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...