Homeಮುಖಪುಟಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ...

ಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ ಪಕ್ಷಗಳು

- Advertisement -
- Advertisement -

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ನಾಳೆ(ಅ.8) ಪ್ರಕಟಗೊಳ್ಳಲಿದೆ. ಅದಕ್ಕೂ ಮುನ್ನ ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಐವರು ಸದಸ್ಯರನ್ನು ನಾಮನಿರ್ದೇನ ಮಾಡಲು ಮುಂದಾಗಿರುವುದು ವಿರೋಧಕ್ಕೆ ಕಾರಣವಾಗಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯರಾಗಿ ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡಲಿರುವ ಐವರು ಕೇಂದ್ರಾಡಳಿತ ಪ್ರದೇಶದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ಸಲಹೆಯನ್ನು ಆಧರಿಸಿ ಐವರು ಸದಸ್ಯರನ್ನು ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡುವರು. ಈ ಸದಸ್ಯರು ನೂತನ ಸರ್ಕಾರ ರಚನೆಯಲ್ಲಿ ನಿರ್ಣಾಯಕವಾದ ಪಾತ್ರವನ್ನು ವಹಿಸಲಿದ್ದಾರೆ.

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸರ್ಕಾರ ರಚನೆಗೆ ಮುನ್ನ ಐವರು ಸದಸ್ಯರ ನಾಮನಿರ್ದೇಶನವನ್ನು ವಿರೋಧಿಸಿವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಎಚ್ಚರಿಕೆ ನೀಡಿದೆ.

ಆಗಸ್ಟ್ 2019ರಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಪುನರ್‌ರಚನಾ ಕಾಯ್ದೆ-2019ರ, ಸೆಕ್ಷನ್‌ 14 ಉಪ ನಿಯಮ (30)ರ ಅನ್ವಯ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನಂಟ್‌ ಗವರ್ನರ್ ಅವರು ಇಬ್ಬರನ್ನು ನಾಮನಿರ್ದೇಶನ ಮಾಡಬಹುದು. ಮಹಿಳೆಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಾವು ಭಾವಿಸಿದಲ್ಲಿ ಈ ಮೂಲಕ ಆ ಕೊರತೆ ತುಂಬಬಹುದು ಎಂದಿದೆ. ಈ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ತರಲಾಗಿದೆ.

ತಿದ್ದುಪಡಿ ಬಳಿಕ, 15ಎ ಉಪ ನಿಯಮದ ಅನುಸಾರ, ಲೆಫ್ಟಿನಂಟ್ ಗವರ್ನರ್ ಅವರು ಇಬ್ಬರಿಗಿಂತಲೂ ಹೆಚ್ಚು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗದು. ಇಬ್ಬರಲ್ಲಿ ಒಬ್ಬರು ಕಾಶ್ಮೀರಿ ವಲಸಿಗ ಸಮುದಾಯಕ್ಕೆ ಸೇರಿದ ಮಹಿಳೆ ಆಗಿರಬೇಕು. ಉಪ ನಿಯಮ 15ಬಿ ಅನುಸಾರ ಪಾಕ್‌ ಆಕ್ರಮಿತ ಕಾಶ್ಮೀರ ಭಾಗದಿಂದ ವಲಸೆ ಬಂದಿರುವ ವ್ಯಕ್ತಿಯೊಬ್ಬರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ರಾಜ್ಯಪಾಲರು ಈಗ ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿರುವ ಐವರು ಸದಸ್ಯರಿಗೂ ಚುನಾಯಿತ ಸದಸ್ಯರಿಗೆ ಇರುವಂತೆಯೇ ಮತದಾನದ ಹಕ್ಕು ಇರುತ್ತದೆ ಎಂದು ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಲೆಫ್ಟಿನೆಂಟ್ ಗವರ್ನರ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿವೆ. ಇದು, ‘ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು’ ಎಂದು ಟೀಕಿಸಿದೆ.

ನಾಮನಿರ್ದೇಶನ ಮಾಡುವ ನಿರ್ಧಾರವು ಮತಎಣಿಕೆಗೆ ಮೊದಲೇ ಜನಾದೇಶವನ್ನು ತಿರುಚುವ ಕೇಂದ್ರ ಸರ್ಕಾರದ ಯತ್ನವಾಗಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಎಂದು ಟೀಕಿಸಿದ್ದಾರೆ.

ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯ ಬಲ 90 ಆಗಿದೆ. ಐವರ ನಾಮ ನಿರ್ದೇಶನಗೊಂಡಲ್ಲಿ ಸದಸ್ಯ ಬಲ 95ಕ್ಕೆ ಏರಲಿದೆ. ಸರ್ಕಾರ ರಚನೆಗೆ 48 ಸದಸ್ಯರ ಸರಳ ಬಹುಮತ ಅಗತ್ಯವಾಗಿರಲಿದೆ.

ಇದನ್ನೂ ಓದಿ : ಸಾಮಾಜಿಕ ಮಾಧ್ಯಮದಲ್ಲಿ ಭವಿಶ್ ಅಗರ್ವಾಲ್-ಕುನಾಲ್ ಕಮ್ರಾ ಜಟಾಪಟಿ; ಶೇ.8 ರಷ್ಟು ಕುಸಿತ ಕಂಡ ಓಲಾ ಎಲೆಕ್ಟ್ರಿಕ್ ಷೇರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...