Homeಕರ್ನಾಟಕಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು : ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು : ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

- Advertisement -
- Advertisement -

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಕಿತ್ತಾಟ ಶುರುವಾಗಿದೆ.

ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಆರ್‌ಎಸ್‌ ರಸ್ತೆ ಅಥವಾ ರಾಜಕುಮಾರಿ ರಸ್ತೆಗೆ (Princess Road)’ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಮರುನಾಮಕರಣ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಮೈಸೂರು ನಗರದ ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದ ವೃತ್ತದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ 1.5 ಕಿಮೀ ವ್ಯಾಪ್ತಿಯನ್ನು ಕೆಆರ್‌ಎಸ್ ರಸ್ತೆ ಅಥವಾ ರಾಜಕುಮಾರಿ ರಸ್ತೆ ( Princess Road) ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ. ಇಲ್ಲಿ ಪ್ರಿನ್ಸೆಸ್ ಅಥವಾ ರಾಜಕುಮಾರಿ ಎಂದರೆ ಒಡೆಯರ್ ಕುಟುಂಬದ ಕೃಷ್ಣರಾಜಮ್ಮನಿ ಅವರಾಗಿದ್ದಾರೆ.

ಕಳೆದ ನವೆಂಬರ್ ಅಂತ್ಯದಲ್ಲಿ ನಡೆದ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಶಿಷ್ಟಾಚಾರದ ಪ್ರಕಾರ ಈ ನಿರ್ಧಾರಕ್ಕೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಬಿಜೆಪಿ ನಾಯಕರು ಮತ್ತು ಕೆಲ ಸಾರ್ವಜನಿಕರು ಪಾಲಿಕೆ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ? : ಬಿ.ವೈ ವಿಜಯೇಂದ್ರ

ಮೈಸೂರು ಸಾಮ್ರಾಜ್ಯವನ್ನು ರಾಜರು ಮತ್ತು ಆಡಳಿತಗಾರರು ಕಟ್ಟಿ ಬೆಳೆಸಿದರು. ಆದರೆ, ಮಹಾನ್ ರಾಜವಂಶದ ಹೆಸರನ್ನು ಹೊಂದಿರುವ ರಸ್ತೆಗೆ ತಮ್ಮ ಹೆಸರಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸದ್ಯ ಚುನಾಯಿತ ಪ್ರತಿನಿಧಿಗಳಿಲ್ಲದ ಮೈಸೂರು ಮಹಾನಗರ ಪಾಲಿಕೆಯು ಇಂತಹ ಪ್ರಮುಖ ನಿರ್ಧಾರ ಕೈಗೊಳ್ಳುವುದು ಎಷ್ಟು ಸಮಂಜಸವಾಗಿದೆ. ಸಿದ್ದರಾಮಯ್ಯನವರಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ ಕುಟುಂಬದ ಮೇಲಿನ ದಾಳಿ ಹೆಚ್ಚಾಗಿದೆ : ಸಂಸದ ಯಧುವೀರ್

“ನಾನು ಸಂಸದನಾದ ಮೇಲೆ ರಾಜ ಕುಟುಂಬದ ಮೇಲಿನ ದಾಳಿ ಹೆಚ್ಚಾಗಿದೆ. ಎಂಸಿಸಿ ಯಾವುದೇ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಕೆಆರ್‌ಎಸ್ ರಸ್ತೆಯನ್ನು ಹಾಗೆಯೇ ಬಿಡಬೇಕು. 1904ರಲ್ಲಿ ಯುವರಾಣಿ ಕೃಷ್ಣರಾಜಮ್ಮಣ್ಣಿ ಕ್ಷಯರೋಗದಿಂದ ಮೃತಪಟ್ಟಿದ್ದರಿಂದ ಈ ರಸ್ತೆಗೆ ರಾಜಕುಮಾರಿ ರಸ್ತೆ ಎಂಬ ಹೆಸರು ಬಂದಿದೆ” ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಬಿಜೆಪಿಗೆ ವಿರೋಧಿಸೋದು ಬಿಟ್ಟು ಬೇರೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ 

ಬಿಜೆಪಿಗರ ವಿರೋಧದ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಎಲ್ಲಾ ವಿಷಯಗಳನ್ನು ವಿರೋಧಿಸುವುದು ಬಿಜೆಪಿಗರ ಕೆಲಸ. ಬಿಜೆಪಿಯವರು ಇದನ್ನು (ರಸ್ತೆಯ ಹೆಸರು ಬದಲಾವಣೆ) ಸ್ವಾಗತಿಸುತ್ತಾರಾ? ವಿರೋಧಿಸುವುದು ಅವರ ಕರ್ತವ್ಯ. ಅವರು ಒಳ್ಳೆಯದ್ದನ್ನೂ ವಿರೋಧಿಸುತ್ತಾರೆ, ಕೆಟ್ಟದ್ದನ್ನೂ ವಿರೋಧಿಸುತ್ತಾರೆ. ಅವರಿಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ.

ಪಾಲಿಕೆ ನಿರ್ಧಾರ ಸ್ವಾಗತಿಸಿದ ಪ್ರತಾಪ್ ಸಿಂಹ!

ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಪಾಲಿಕೆ ನಿರ್ಧಾರವನ್ನು ಮೈಸೂರಿನ ಮಾಜಿ ಸಂಸದ, ಬಿಜೆಪಿ ನಾಯಕ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ. “ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇನೆಯೇ ಹೊರತು, ರಸ್ತೆಗೆ ನಾಮಕರಣ ವಿಚಾರದಲ್ಲಿ ಅವರನ್ನು ವಿರೋಧ ಮಾಡುವುದಿಲ್ಲ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...