Homeಮುಖಪುಟ"ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು"?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು

“ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು”?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು

- Advertisement -
- Advertisement -

ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್‌ ಹಾಗೂ ಕರ್ಲಿ ಟೇಲ್ಸ್‌ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಕಾಮಿಯಾ ಜಾನಿ ಭೇಟಿ ಕೊಟ್ಟಿರುವುದನ್ನು ಬಿಜೆಪಿ ಮತ್ತು ಬಲಪಂಥೀಯ ಮಾಧ್ಯಮಗಳು ವಿವಾದ ಮಾಡಿವೆ.

ಪುರಿ ಜಗನ್ನಾಥ ದೇವಸ್ಥಾನದ ಅಭಿವೃದ್ದಿಗಾಗಿ ‘ಪರಿಕ್ರಮ’ ಎಂಬ ಯೋಜನೆಯನ್ನು ಸರ್ಕಾರ ರೂಪಿಸಿದೆ. ಈ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರ ಮುಖ್ಯಸ್ಥರಾಗಿ ಮಾಜಿ ಐಎಎಸ್ ಅಧಿಕಾರಿ, ಬಿಜೆಡಿ ನಾಯಕ ವಿ.ಕೆ ಪಾಂಡಿಯನ್ ಅವರನ್ನು ನೇಮಕ ಮಾಡಲಾಗಿದೆ. ಪಾಂಡಿಯನ್ ಅವರ ಜೊತೆ ಪರಿಕ್ರಮ ಯೋಜನೆಯ ಕುರಿತು ಕಾಮಿಯಾ ಜಾನಿ ವಿಡಿಯೋ ಮಾಡಿದ್ದಾರೆ.

ಕಾಮಿಯಾ ಜಾನಿ ಈ ಹಿಂದೆ ತಮ್ಮ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಗೋಮಾಂಸ (ಬೀಫ್) ಕುರಿತು ವಿಡಿಯೋ ಮಾಡಿದ್ದರು. ಆ ವಿಡಿಯೋ ಮುಂದಿಟ್ಟುಕೊಂಡು, ‘ಗೋಮಾಂಸ ಪ್ರಚಾರಕಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಈ ಕಾರಣಕ್ಕೆ ಕಾಮಿಯಾ ಜಾನಿ ಮತ್ತು ವಿ.ಕೆ ಪಾಂಡಿಯನ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಬಲ ಪಂಥೀಯರು ಆಗ್ರಹಿಸಿದ್ದಾರೆ.

ಬಲ ಪಂಥೀಯ ನ್ಯೂಸ್ ಪೋರ್ಟಲ್ ಓಪ್‌ಇಂಡಿಯಾ (Opindia.com) ಕಾಮಿಯಾ ಜಾನಿ ದೇವಸ್ಥಾನ ಭೇಟಿ ಕುರಿತು, “ಬೀಫ್ ಪ್ರಚಾರಕಿಯನ್ನು ಜಗನ್ನಾಥ ದೇವಸ್ಥಾನದೊಳಗೆ ಹೇಗೆ ಬಿಡಲಾಯಿತು?” ಒಡಿಶಾ ಬಿಜೆಪಿ ಇನ್‌ಫ್ಲ್ಯುಯೆನ್ಸರ್‌ ಕಾಮಿಯಾ ಜಾನಿ ಬಂಧನಕ್ಕೆ ಆಗ್ರಹಿಸಿದೆ ಎಂದು ಸುದ್ದಿ ಮಾಡಿದೆ.

“ಐತಿಹಾಸಿಕ ಮತ್ತು ಆಧ್ಯಾತ್ಮಿಕ ಪರಂಪರೆಯಿಂದ ಸಮೃದ್ಧವಾಗಿರುವ ಪುರಿ ಮಂದಿರದ ಪಾವಿತ್ರ್ಯತೆಯನ್ನು 5ಟಿ ಅಧ್ಯಕ್ಷ ವಿಕೆ ಪಾಂಡಿಯನ್ ಅವಮಾನಿಸಿದ್ದಾರೆ. ಅವರು ಜಗನ್ನಾಥ ಮಂದಿರದ ಪೂಜ್ಯ ಆವರಣಕ್ಕೆ ಗೋಮಾಂಸ ಪ್ರಚಾರಕಿಯ ಪ್ರವೇಶಕ್ಕೆ ಅನುಮತಿಸಿದ್ದಾರೆ. ಇದರ ಹೊಣೆಗಾರರು ತ್ವರಿತ ಮತ್ತು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಬಿಜೆಪಿ ಒಡಿಶಾ ಒಡಿಯಾದ ಭಾವನೆಗಳು ಮತ್ತು ಜಗನ್ನಾಥ ಸಂಸ್ಕೃತಿಯ ಪಾವಿತ್ರ್ಯದ ಬಗ್ಗೆ ಕಾಳಜಿ ವಹಿಸುತ್ತದೆ” ಎಂದು ಒಡಿಶಾ ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಬಿಜೆಪಿಯ ಈ ಆರೋಪಕ್ಕೆ ಕೆಲ ಎಕ್ಸ್‌ ಬಳಕೆದಾರರು ತಿರುಗೇಟು ಕೊಟ್ಟಿದ್ದು, ಕಾಮಿಯಾ ಅವರು ಕೇಂದ್ರ ಸಚಿವ, ಬಿಜೆಪಿ ನಾಯಕ ಅನುರಾಗ್ ಠಾಕೂರ್, ಶಿವಸೇನೆ(ಯುಬಿಟಿ) ನಾಯಕ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಜೊತೆ ಮಾಡಿರುವ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಕಾಮಿಯಾ ಜಾನಿಯವರ ಯೂಟ್ಯೂಬ್ ಚಾನೆಲ್ 2.77 ಮಿಲಿಯನ್ ಚಂದಾರರನ್ನು ಹೊಂದಿದ್ದು, ರಾಜಕೀಯ ನಾಯಕರು ಮತ್ತು ಇತರ ಖ್ಯಾತನಾಮರ ಜೊತೆ ವಿಡಿಯೋ ಮಾಡಿದ್ದಾರೆ.

ವಿ.ಕೆ ಪಾಂಡಿಯನ್ ಯಾರು? 5ಟಿ ಎಂದರೆ ಏನು? 

ಒಡಿಶಾದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ವಿ.ಕೆ ಪಾಂಡಿಯನ್ ಈ ವರ್ಷದ ಅಕ್ಟೋಬರ್ 23ರಂದು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಅವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಪಾಂಡಿಯನ್ ಅಧಿಕಾರಿಯಾಗಿದ್ದಾಗಲೇ ಸಿಎಂ ನವೀನ್‌ ಪಟ್ನಾಯಕ್‌ ಅವರಿಗೆ ಬಹಳ ಆಪ್ತರಾಗಿದ್ದರು.

ಸಂಪುಟ ದರ್ಜೆ ಸ್ಥಾನಮಾನ ನೀಡಿದ ಬಳಿಕ ಪಾಂಡಿಯನ್ ಅವರನ್ನು ಒಡಿಶಾ ರಾಜ್ಯ ಸರ್ಕಾರದ 5ಟಿ (Team work, Technology, Transparency, Transformation and Time limit ಪರಿವರ್ತನೆ ಉಪಕ್ರಮಗಳು ಮತ್ತು ನಬಿನ್ ಒಡಿಶಾ ಯೋಜನೆಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಾಗಾಗಿ, ಅವರು ಜಗನ್ನಾಥ ದೇವಸ್ಥಾನದ ಪರಿಕ್ರಮ ಯೋಜನೆಯ ಮೇಲುಸ್ತುವಾರಿ ವಹಿಸಿದ್ದಾರೆ.

ಇದನ್ನೂ ಓದಿ : ‘ಜೇಬುಗಳ್ಳ’ ಹೇಳಿಕೆ: ರಾಹುಲ್ ವಿರುದ್ಧ ಕ್ರಮಕ್ಕೆ 8 ವಾರಗಳ ಗಡುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...