Homeಮುಖಪುಟಹಫ್ತಾ ವಸೂಲಿಗಾಗಿ ಮಚ್ಚು ಬೀಸಿದ ರೌಡಿ: ಇದು ಬಿಜೆಪಿ ರೌಡಿ ಮೋರ್ಚಾದ ಪರಿಣಾಮ ಎಂದ ಕಾಂಗ್ರೆಸ್

ಹಫ್ತಾ ವಸೂಲಿಗಾಗಿ ಮಚ್ಚು ಬೀಸಿದ ರೌಡಿ: ಇದು ಬಿಜೆಪಿ ರೌಡಿ ಮೋರ್ಚಾದ ಪರಿಣಾಮ ಎಂದ ಕಾಂಗ್ರೆಸ್

- Advertisement -
- Advertisement -

ಹಫ್ತಾ ಕೊಡಲಿಲ್ಲ ಎಂಬ ಕಾರಣಕ್ಕೆ ಮೀನು ವ್ಯಾಪಾರಿಯ ಮೇಲೆ ರೌಡಿಯೊಬ್ಬ ಮಚ್ಚು ಬೀಸಿರುವ ಘಟನೆ ಬೆಂಗಳೂರಿನ ಬಾಣಸವಾಡಿಯ ಜೈಭೀಮ್ ನಗರದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ವ್ಯಾಪಾರಿಯು ಕೂದಲೆಳೆ ಅಂತರದಲ್ಲಿ ಮಚ್ಚೇಟಿನಿಂದ ಪಾರಾಗಿರುವುದು ಸಿಸಿಕ್ಯಾಮರದಲ್ಲಿ ದಾಖಲಾಗಿದೆ.

ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬ ಬಾಣಸವಾಡಿಯಲ್ಲಿ ಮೀರು ಮಾರಾಟ ಅಂಗಡಿ ನಡೆಸುತ್ತಿದ್ದರು. ಅಲ್ಲಿಗೆ ಬಂದ ರೌಡಿಯೊಬ್ಬ ಹಫ್ತಾ ಕೊಡಲಿಲ್ಲ ಎಂದು ಓಡಿಸಿಕೊಂಡು ಬಂದು ಮಚ್ಚು ಬೀಸಿದ್ದಾರೆ. ವ್ಯಾಪಾರಿ ತಪ್ಪಿಸಿಕೊಂಡು ಅಂಗಡಿಯೊಳಗೆ ಪ್ರವೇಶಿಸಿದ್ದಾರೆ. ಅಷ್ಟರಲ್ಲಿ ಜನ ಸೇರಿದ್ದರಿಂದ ರೌಡಿ ಅಲ್ಲಿಂದ ವಾಪಸ್ ತೆರಳಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

“ರೌಡಿಗಳನ್ನ ಮುದ್ದಿಸುವ ಬಿಜೆಪಿ ಸರ್ಕಾರದಿಂದಾಗಿ ಬೆಂಗಳೂರು ಐಟಿ ಸಿಟಿಯಿಂದ ಕ್ರೈಮ್ ಸಿಟಿಯಾಗುತ್ತಿದೆ. ಬಾಣಸವಾಡಿಯಲ್ಲಿ ಹಫ್ತಾ ವಸೂಲಿಗಾಗಿ ಮಚ್ಚು ಬೀಸಿದ್ದಾರೆ ರೌಡಿಗಳು, ಇದು ಬಿಜೆಪಿ ರೌಡಿ ಮೋರ್ಚಾದ ಪರಿಣಾಮವಲ್ಲವೇ ಬಿಜೆಪಿ ಸರ್ಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕೈಯ್ಯಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ಕೆಲಸಕ್ಕೆ ಬಾರದ ಕಳ್ಳೆಪುರಿಯಂತಾಗಿದೆ!” ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.

ಈ ಭಯಾನಕ ಘಟನೆಯ ಸಿಸಿ ಕ್ಯಾಮರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಿಜೆಪಿ ಸರ್ಕಾರವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ರೌಡಿಗಳನ್ನು ಮಟ್ಟ ಹಾಕುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಆ ಪುಡಿ ರೌಡಿ ಬೀಸಿದ ಮಚ್ಚು ಆ ಬಡಪಾಯಿಯ ಕತ್ತಿಗೆ ಬಿದ್ದಿದ್ದರೆ ಇನ್ನೊಂದು ಮನೆಯ ದೀಪ ಆರುತ್ತಿತ್ತು.
ಸಮಾಜ ಘಾತುಕ ಕೆಲಸ ಮಾಡಿದ ರೌಡಿಗಳ ಕೇಸ್ ಗಳನ್ನು ವಾಪಾಸ್ ಪಡೆದದ್ದು ಒಂದೆಡೆಯಾದರೆ, ರೌಡಿ ಶೀಟರ್ ಗಳಿಗೆ ರೆಡ್ ಕಾರ್ಪೆಟ್ ಹಾಕಿ #ಬಿಜೆಪಿಗೆ ಕರೆ ತಂದದ್ದು ಮತ್ತೊಂದೆಡೆ. ಇದರ ಜೊತೆ ಆಡಳಿತ ಪಕ್ಷದ ಸಚಿವರು, ಶಾಸಕರುಗಳು ರೌಡಿಗಳ ಪರ ಓಪನ್ನಾಗಿ ಬ್ಯಾಟಿಂಗ್‌ ಮಾಡ್ತಿರೋದು ಈ ರೀತಿಯ ಪುಡಿರೌಡಿಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ ಎನ್ನಬಹುದು ಎಂದು ಗಣೇಶ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಉಗ್ರರನ್ನೇ ಬಿಡದ ಮೋದಿಗೆ ಹೆದರಿ ರೌಡಿಗಳು ಮನ ಪರಿವರ್ತನೆಯಾಗಿ ಸಮಾಜ ಸೇವೆಗೆ ಮರಳಿರುವ ಅಮೋಘ ದೃಶ್ಯ. ಮತಾಪು ಸಿಂಹನ ಅವಗಾಹನೆಗೆ ಈ ಪಟ ಎಂದು ಲೇಖಕ ಯೋಗೇಶ್ ಮಾಸ್ಟರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮಂಡ್ಯ: ಪದೇ ಪದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...