ಮಂಗಳೂರಿನ ಹೊರವಲಯದಲ್ಲಿ ರೌಡಿ ಶೀಟರ್ ಹತ್ಯೆಯ ನಂತರ ಉದ್ವಿಗ್ನಗೊಂಡಿದ್ದ ಕರಾವಳಿಯಲ್ಲಿ ಶನಿವಾರ ಪರಿಸ್ಥಿತಿ ಶಾಂತವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ, ಮತ್ತು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯ ಸ್ಥಿತಿ ನೆಲೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಅಪರಿಚಿತ ಗುಂಪೊಂದು ಕುಖ್ಯಾತ ರೌಡಿ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿತ್ತು. ರೌಡಿ ಹತ್ಯೆಯ
ರೌಡಿಯ ಹತ್ಯೆಯ ನಂತರ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ನೀಡಿತ್ತು. ಹಲವೆಡೆ ಬಿಜೆಪಿಯ ಬೆಂಬಲಿಗ ದುಷ್ಕರ್ಮಿಗಳು ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದರು ವರದಿಯಾಗಿತ್ತು. ಜೊತೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಚೂರಿ ಇರಿತ ಸೇರಿದಂತೆ ಹಿಂಸಾಚಾರಗಳು ವರದಿಯಾಗಿತ್ತು.
ಶುಕ್ರವಾರ ಪಂಪ್‌ವೆಲ್ ಮತ್ತು ಕಂಕನಾಡಿ ಪ್ರದೇಶಗಳ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದ ನಂತರ ಮತ್ತು ಕೆಲವು ಹಲ್ಲೆ ಪ್ರಕರಣಗಳು ದಾಖಲಾಗಿದ್ದರಿಂದ ಉಪನಗರಗಳಿಗೆ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಗೃಹ ಸಚಿವ ಜಿ. ಪರಮೇಶ್ವರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಮಂಗಳೂರಿಗೆ ಧಾವಿಸಿ, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮತ್ತು ಉಪ ಆಯುಕ್ತ ಮುಲ್ಲೈ ಮುಹಿಲನ್ ಅವರೊಂದಿಗೆ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿರ್ಣಯಿಸಲು ಉನ್ನತ ಮಟ್ಟದ ಚರ್ಚೆ ನಡೆಸಿದ್ದರು.
ಸಚಿವರು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿ, ನಾಗರಿಕರಿಗೆ ಶಾಂತವಾಗಿರಲು ಮನವಿ ಮಾಡಿದ್ದು, ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಉಪನಗರ ಪ್ರದೇಶಗಳಲ್ಲಿ ಬಸ್ ಸೇವೆ ಇನ್ನೂ ಸ್ಥಗಿತಗೊಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಆದಾಗ್ಯೂ, ಕೆಎಸ್‌ಆರ್‌ಟಿಸಿ ಶನಿವಾರ ಗ್ರಾಮೀಣ ಪ್ರದೇಶಗಳು ಮತ್ತು ರಾಜ್ಯ ರಾಜಧಾನಿಗೆ ಅಪೂರ್ಣ ಸೇವೆಯನ್ನು ಒದಗಿಸಿತು ಎಂದು ಅದು ಹೇಳಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳ ನಿಯೋಜನೆ ಮುಂದುವರೆಸಲಾಗಿದೆ.
ರೌಡಿಯ ಕೊಲೆಯ ನಂತರ, ಪೊಲೀಸರು ಮೇ 2 ರಿಂದ ಮೇ 6 ರವರೆಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತದ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ. ಘಟನೆಯ ನಂತರ ಸಂಭಾವ್ಯ ಹಿಂಸಾಚಾರವನ್ನು ತಡೆಗಟ್ಟುವುದು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವುದು ಈ ಆದೇಶದ ಉದ್ದೇಶವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ರೌಡಿಯನ್ನು ಕೊಲೆ ಮಾಡಿದ 8 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 10 ಜನರನ್ನು ಆರೋಪಿಗಳು ಎಂದು ಪೊಲೀಸರು ಗುರುತಿಸಿದ್ದು, 8 ಜನರ ಬಂಧನ ನಡೆದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಹೇಳಿದ್ದಾರೆ. ರೌಡಿ ಹತ್ಯೆಯ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಬುಡಕಟ್ಟು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ವಿಜಯ್ ದೇವರಕೊಂಡ
ಬುಡಕಟ್ಟು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ವಿಜಯ್ ದೇವರಕೊಂಡ