HomeಮುಖಪುಟRR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

- Advertisement -
- Advertisement -

ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿ ಪರಿಣಮಿಸಿದೆ. ಈ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಇದ್ದ ಈ ಕ್ಷೇತ್ರ ಬೆಂಗಳೂರು ಬೆಳೆಯುತ್ತಿದ್ದಂತೆ ನಗರದೊಳಗೆ ಸೇರಿದೆ. ಹೊಸ ಬಡಾವಣೆ, ಅಪಾರ್ಟ್ಮೆಂಟ್‌ಗಳು ಸೇರಿದಂತೆ ನಿರ್ಮಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆಯಾದ್ದರಿಂದ ಸ್ಲಂಗಳು, ವಲಸಿಗರು, ಕೂಲಿಕಾರ್ಮಿಕರ ಜನಸಂಖ್ಯೆ ಕೂಡಾ ಹೆಚ್ಚಿರುವ ಕ್ಷೇತ್ರ ಇದು.

ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹೊಸ ಮುಖವಾದ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಮಾಜಿ ಕಾಂಗ್ರೆಸ್ ಶಾಸಕ, ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರು ಬಿಜಪಿಯೊಳಗಿನ ಎಲ್ಲಾ ಅಸಮಧಾನಗಳನ್ನು ಬದಿಗೆ ತಳ್ಳಿ ಟಿಕಟ್ ಗಿಟ್ಟಿಸಿಕೊಂಡಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದ್ದರೂ ಕ್ಷೇತ್ರದಲ್ಲಿ ಜೆಡಿಎಸ್ ಬಗ್ಗೆ ಒಲವಿಲ್ಲ.

ಇದುವರೆಗಿನ ಲೆಕ್ಕಾಚಾರದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಅವರೇ ಫೇವರೆಟ್ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುದಕ್ಕೆ ಕಾರಣಕರ್ತರು ಮತ್ತು ಈ ಹಿಂದೆ ಗೆದ್ದಿದ್ದ ಪಕ್ಷಕ್ಕೆ ಮುನಿರತ್ನ ಮೋಸ ಮಾಡಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಪದೇ ಪದೇ ನೆನಪಿಸುತ್ತಿದ್ದರೂ ಜನರಿಗೆ ಇದೆ ಸಮಸ್ಯೆಯಂತೆ ಕಾಣುತ್ತಿದೆಯೇ ಎಂಬ ಪ್ರಶ್ನೆ ಉಳಿದಿದೆ. ಕ್ಷೇತ್ರದ ಜನರಿಗೆ ಬಿಜೆಪಿಯ ಕಾರ್ಪೋರೇಟರ್‌ಗಳ ಮೇಲೆ ಕೋಪವಿದ್ದರೂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮುನಿರತ್ನ ಜನರೊಂದಿಗೆ ನಿಂತು ನೀಡಿರುವ ಕಿಟ್‌ಗಳು ಈ ಸಮಯದಲ್ಲಿ ಕೈಹಿಡಿಯಲಿವೆ ಎಂಬುದೊಂದು ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಕುಸುಮ ಅವರನು ಮತದಾರರಿಗೆ ಪರಿಚಯಿಸುವಲ್ಲಿ ಒಂದು ಮಟ್ಟಿಗೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಮುಂಚೆಯೆ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ ಕಾಂಗ್ರೆಸ್ ಈ ಕ್ಷೇತ್ರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿಂದೆ ಎರಡು ಭಾರಿ ಗೆದ್ದಿರುವುದಲ್ಲದೆ, ಕಳೆದ ಲೋಕಸಭಾ ಕ್ಷೇತ್ರದಲ್ಲಿ ಇಡೀ ಕರ್ನಾಟಕವೆ ಬಿಜೆಪಿಮಯವಾದಾಗ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದೊಳಗೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರವಿದೆ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷರಾಗಿ ನಡೆಯುತ್ತಿರುವ ಮೊದಲ ಚುನಾವಣೆ ಆಗಿರುವುದರಿಂದ ಇದು ಅವರಿಗೂ ಪ್ರತಿಷ್ಟೆಯ ಕಣವಾಗಿದೆ. ಡಿಕೆ ಸಹೋದದರು ಖುದ್ದಾಗಿ ನಿಂತು ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬ ಕಾಂಗ್ರೆಸ್ ಶಾಸಕನನ್ನು ಪ್ರಚಾರಕ್ಕೆ ನೇಮಿಸಿದೆ. ಅಷ್ಟೇ ಅಲ್ಲದೆ ಕನಕಪುರ ಹಾಗೂ ಕುಣಿಗಲ್‌ನಿಂದ ಕೂಡಾ ಪ್ರಚಾರಕ್ಕೆಂದು ಕಾರ್ಯಕರ್ತರನ್ನು ಕರೆಸಿ ಕೆಲಸ ಮಾಡಿಸುತ್ತಿದೆ.

ಜೆಡಿಎಸ್ ಪಕ್ಷವು ಆರ್.ಆರ್. ನಗರಕ್ಕಿಂತ ಹೆಚ್ಚಾಗಿ ಶಿರಾದಲ್ಲೇ ಗಮನವನ್ನು ನೆಟ್ಟಿದೆ. ಅಷ್ಟೊಂದು ವರ್ಚಸ್ಸು ಇಲ್ಲದ ಮುಖವನ್ನು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಸದ್ಯಕ್ಕೆ ಜೆಡಿಎಸ್ ತನ್ನ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದು, ವಿಧಾನಸಭಾ ಉಪಚುನಾವಣೆಗಿಂತಲೂ ಮುಂಬರುವ ಬಿಬಿಎಂಪಿ ಚುನಾವಣೆ ಕಡೆಗೆ ದೃಷ್ಟಿ ನೆಟ್ಟಂತಿದೆ. ಮುಖ್ಯವಾಗಿ ತಮ್ಮ ಪರವಾಗಿ ಇರುವ ಮತಗಳನ್ನು ಹಾಗೂ ತಮ್ಮ ಕಾರ್ಯಕರ್ತರನ್ನು ತಮ್ಮಲ್ಲೇ ಉಸಿಕೊಳ್ಳುವ ಪ್ರಯತ್ನವನ್ನು ಜೆಡಿಎಸ್ ಇಲ್ಲಿ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಥಾನ ನಿಗದಿಯಾಗುತ್ತದೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿಯಿದ್ದರೂ ಜೆಡಿಎಸ್‌ಅನ್ನು ಅಲ್ಲಗೆಳೆಯುವಂತಿಲ್ಲ. ಜೆಡಿಎಸ್ ಎಷ್ಟು ಮತವನ್ನು ಪಡೆಯುತ್ತದೆ ಎನ್ನುವುದಕ್ಕಿಂತ ಹೆಚ್ಚಾಗಿ, ಯಾರ ಮತವನ್ನು ಪಡೆಯುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಪಕ್ಷ ಟಿಕೆಟ್ ನೀಡುವವರೆಗೂ ಜೆಡಿಎಸ್‌ನಲ್ಲೇ ಇದ್ದ ಅವರ ತಂದೆ ಹನುಮಂತರಾಯಪ್ಪ ಈ ಹಿಂದೆ ಅಲ್ಲಿ ಸ್ಫರ್ಧಿಸಿದ್ದವರು. ಆರ್.ಆರ್. ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆ ಎದುರಿಸಬೇಕು ಎಂದು ಅವರು ಓಡಾಡಿದ್ದರೂ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ತಂದೆಯ ಬೆಂಬಲಿಗ ಮತದಾರರು ಕುಸುಮಾಗೆ ಸಹಕರಿಸಲಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ಹೆಚ್ಚಿರುವುದು ಕಾಂಗ್ರೆಸ್‌ಗೆ ಸಮಾಧಾನಕರವಾದ ವಿಷಯವಾಗಿದ್ದರೂ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯ್ಡು ಸಮುದಾಯದ ಸುಮಲತಾ ಅವರ ಕೈಹಿಡಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದೆಲ್ಲದರ ನಡುವೆ ಈ ಚುನಾವಣೆಗೆ ಕಾರಣವಾಗಿರುವ ಆಪರೇಷನ್ ಕಮಲದ ಮೂಲಕ ಯಶಸ್ವಿಯಾಗಿ ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುನಿರತ್ನ ಪರವಾಗಿ ಪ್ರಚಾರಕ್ಕೆ ಬಂದಿಲ್ಲ! ಈ ಬಗ್ಗೆ ಅವರ ಲೆಕ್ಕಾಚಾರಗಳು ಮತ್ತು ಮುಂದಿನ ನಡೆಗಳು ನಿಗೂಢವಾಗಿದೆ. ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಬೆಂಬಲಿಗರಿಗೆ ಕೆರಳಿಸಿದೆ. ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ರಾಜಿನಾಮೆ ನೀಡಿದ್ದಾರೆ. ಮೂಲತಃ ಆರೆಸ್ಸೆಸ್ಸಿಗರಾದ ಮುನಿರಾಜು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿಲ್ಲ.

ಜೆಡಿಎಸ್‌ನ ಅಭ್ಯರ್ಥಿ ಯಾವ ಕಡೆಯ ಮತವನ್ನು ಒಡೆಯುತ್ತಾರೆ ಮತ್ತು ಪಡೆಯುತ್ತಾರೆ, ಬಿಜೆಪಿಯ ಮುನಿರಾಜು ಗೌಡ ಅವರು ಏನು ಮಾಡುತ್ತಾರೆ ಹಾಗೂ ಕೊನೆಗೆ ಮತದಾರರ ಒಲವು ಯಾರ ಕಡೆಗಿದೆ ಎಂಬುದರ ಮೇಲೆ ಈ ಪ್ರತಿಷ್ಟಿತ ಕ್ಷೇತ್ರದ ಆಭ್ಯರ್ಥಿಗಳ ಚುನಾವಣಾ ಭವಿಷ್ಯ ಅಡಗಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...