Homeಕರ್ನಾಟಕಕುಡಿಯುವ ನೀರಿನ ಪೂರೈಕೆಗೆ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ ಮಂಜೂರು: ಸಚಿವ ಕೃಷ್ಣಭೈರೇಗೌಡ

ಕುಡಿಯುವ ನೀರಿನ ಪೂರೈಕೆಗೆ ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ ಮಂಜೂರು: ಸಚಿವ ಕೃಷ್ಣಭೈರೇಗೌಡ

- Advertisement -
- Advertisement -

ಮುಂಗಾರು ವಿಳಂಬದಿಂದಾಗಿ ಕುಡಿಯುವ ನೀರಿನ‌‌ ಸಮಸ್ಯೆ ಇರುವ ಗ್ರಾಮಗಳಿಗೆ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಪ್ರತಿ ಜಿಲ್ಲೆಗೆ ತಲಾ 1 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡರವರು ತಿಳಿಸಿದರು.

ವಿಧಾನಸಭಾ ಅಧಿವೇಶನದ ಶೂನ್ಯ ವೇಳೆ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಡೆದ ಚರ್ಚೆಯಲ್ಲಿ,  ‘ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ ಸರ್ಕಾರ ಈ ಬಗ್ಗೆ ಯಾವ ಕ್ರಮ ತೆಗೆದುಕೊಂಡಿದೆ’ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

“ರಾಜ್ಯದಲ್ಲಿ 193 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ ಮತ್ತು ಟ್ಯಾಂಕರ್ ಮೂಲಕ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದ್ದು, ಯಾವ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾದರೂ ತುರ್ತು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಜೊತೆಗೂ ಸಭೆ ನಡೆಸಿದ್ದು, ಈಗಾಗಲೇ ಪ್ರತಿ ಜಿಲ್ಲೆಗೂ ನೀರಿನ ಪೂರೈಕೆಗಾಗಿ ಒಂದು ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಕುಡಿಯುವ ನೀರಿನ ಸಮಸ್ಯೆ ಎಲ್ಲೇ ಉಂಟಾದರೂ ಅಧಿಕಾರಿಗಳು ತುರ್ತು ಕ್ರಮಕ್ಕೆ ಮುಂದಾಗಬೇಕು. ಈ ಸಂಬಂಧ ಇತ್ತೀಚೆಗೆ ಬೆಳಗಾಂ ವಿಭಾಗದ ಅಧಿಕಾರಿಗಳ ಜೊತೆಗೂ ಸಭೆ ನಡೆಸಿ ಸೂಚನೆ ನೀಡಲಾಗಿದೆ. ನೀರಿನ ಪೂರೈಕೆಯಲ್ಲಿ ವಿಳಂಬ ಅಥವಾ ನ್ಯೂನ್ಯತೆಗಳಿದ್ದರೆ ಶಾಸಕರು ಆ ಬಗ್ಗೆ ಗಮನಕ್ಕೆ ತಂದರೆ ಅದನ್ನೂ ಬಗೆಹರಿಸಲಾಗುವುದು” ಎಂದು ಸಚಿವರು ಭರವಸೆ ನೀಡಿದರು.

ಮಳೆ ಪ್ರಮಾಣದ ಕುಸಿತದ ಬಗೆಗೆ ಮಾತನಾಡಿದ ಅವರು, “ಜೂನ್ ತಿಂಗಳಲ್ಲಿ ಸರಾಸರಿಗಿಂತ ಕಡಿಮೆ‌ ಮಳೆಯಾಗಿದೆ. ಆದರೆ, ಮುಂದಿನ ಹತ್ತು ದಿನಗಳಲ್ಲಿ ಉತ್ತಮ ಮಳೆಯಾಗಲಿದೆ, ಕಲ್ಯಾಣ ಕರ್ನಾಟಕ ಭಾಗದಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ನಾನಾ ಕಡೆಗಳಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ಈಗಾಗಲೇ ವರದಿಗಳಾಗುತ್ತಿವೆ. ಈ ಮಳೆಯ ಪ್ರಮಾಣ ಸರಾಸರಿಗಿಂತ ಹೆಚ್ಚಿನ ಪ್ರಮಾಣದಲ್ಲಿದ್ದು, ಮತ್ತಷ್ಟು ಮಳೆಯಾಗುವ ಬಗ್ಗೆ ವಿಶ್ವಾಸ ಇದೆ” ಎಂದು ತಿಳಿಸಿದರು.

ಇದನ್ನೂ ಓದಿ; ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...