Homeಮುಖಪುಟಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಕೆಲವು ಟಿವಿ ಚಾನೆಲ್‌ ನಿರೂಪಕರಿಗೆ ಮತ್ತು ರಾಜಕೀಯ ವಿಷಯಗಳನ್ನು ಕವರ್ ಮಾಡುವವರಿಗೆ ಸಹ 5 ಲಕ್ಷ ರೂಗಳ ವರೆಗೆ ಹಣ ನೀಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಅದೇ ಸಂದರ್ಭದಲ್ಲಿ ಕೆಲ ಪತ್ರಿಕೆಗಳಿಗೆ ಕೇವಲ ಸಿಹಿ ತಿಂಡಿಗಳ ಪೊಟ್ಟಣಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಜಾವಾಣಿಯ ಸಿಇಓ ಸೀತಾರಾಮನ್ ಶಂಕರ್‌ರವರಿಗೆ ಕರೆ ಮಾಡಿದಾಗ, “ಸಾರಿ, ನೋ ಕಮೆಂಟ್” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಎಂ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಮೋಹನ್ ಕೃಷ್ಣರವರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲಾಯಿತು. ಅವರು, “ನಾನು ಯಾರಿಗೂ ಹಣ ಕೊಟ್ಟಿಲ್ಲ, ಹುಷಾರಿಲ್ಲದ ಕಾರಣದಿಂದ 15 ದಿನದಿಂದ ಕಚೇರಿಗೆ ನಾನು ಹೋಗಿಲ್ಲ, ಹಾಗಾಗಿ ಈ ಬಗ್ಗೆ ನನಗೆ ತಿಳಿದಿಲ್ಲ” ಎಂದರು.

ಈ ಕುರಿತು ಸ್ಪಷ್ಟೀಕರಣ ಪಡೆಯಲು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಪಾಗೋಜಿ ಶಂಕರ್‌ರವರಿಗೆ ಸಂಪರ್ಕಿಸಲು ಯತ್ನಿಸಲಾದರೂ ಅವರು ಕರೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಅಪ್ಡೇಟ್ ಮಾಡಲಾಗುತ್ತದೆ.

ಸರ್ಕಾರದ ಈ ನಡೆಯಿಂದ ಹಬ್ಬದ ಉಡುಗೊರೆ ರೂಪದಲ್ಲಿ ಕೋಟ್ಯಾಂತರ ರೂಗಳನ್ನು ಪತ್ರಕರ್ತರಿಗೆ ನೀಡುವ ಮೂಲಕ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ಇಷ್ಟು ಹಣ ಎಲ್ಲಿಂದ ಬಂತು? ಅದರ ಮೂಲವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಸರ್ಕಾರ ಪತ್ರಕರ್ತರಿಗೆ ಹಣದ ರೂಪದಲ್ಲಿ ಉಡುಗೊರೆ ನೀಡುವ ಮೂಲಕ ಅವರು ಪಕ್ಷಪಾಗಿಗಳಾಗಿ ವರ್ತಿಸಲು ಲಂಚದ ಆಮಿಷ ಒಡ್ಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಸಚಿವರೊಬ್ಬರು ಪತ್ರಕರ್ತರಿಗೆ ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಮಾತುಗಳು ಸಹ ಹರಿದಾಡುತ್ತಿವೆ.

ಇದನ್ನೂ ಓದಿ; ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದ ಪರಿಸ್ಥಿತಿ ಭಿನ್ನವಾಗಿಲ್ಲ
    ನ್ಯಾಯಾಂಗ ದ ಆದೇಶಕ್ಕೂ ಮುನ್ನ ತೀರ್ಪು ಗಳು ಹೇಳುವ ಕೆಲವು ಪತ್ರಕರ್ತರು ಜ್ಯೋತಿಷಿಗಳು ರಾಜಕಾರಣಿ ಗಳು ಇದು ನಮ್ಮ ದೇಶದ ವ್ಯವಸ್ಥೆ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...