Homeಕರ್ನಾಟಕKarnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

- Advertisement -
- Advertisement -

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂ.ಗಳನ್ನು ಮೀಸಲಿರಿಸಿದೆ” ಎಂದು ಹೇಳಿದ್ದಾರೆ.

“ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ʻಅಕ್ಕಪಡೆ ಯೋಜನೆʼಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುವುದು” ಎಂದು ಘೋಷಣೆ ಮಾಡಿದ್ದಾರೆ.

“ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೆ ತರಲು ಐದು ಕೋಟಿ ರೂ.ಗಳನ್ನು ಮೀಸಲಿಡಲಾಗುವುದು” ಎಂದು ಸಿಎಂ ತಮ್ಮ ಭಾಷಣದಲ್ಲಿ ಹೇಳಿದರು.

“ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30,000 ರೂ.ಗಳ ಪ್ರೋತ್ಸಾಹಧನವನ್ನು 45,000 ರೂ.ಗಳಿಗೆ ಹೆಚ್ಚಿಸಲಾಗುವುದು” ಎಂದರು.

“ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ʻಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರʼಗಳನ್ನು ಪ್ರಾರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣವನ್ನು (ECCE) ಬಲಪಡಿಸಲು ಈ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ಕೆಕೆಆರ್‌ಡಿಬಿ ಅನುದಾನದಿಂದ ಕೈಗೊಳ್ಳಲಾಗುವುದು.

“2026–27ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ ‘ಟೇಕ್‌ ಹೋಮ್‌ ರೇಷನ್‌’ಗೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿದಂತಾಗಿರುತ್ತದೆ. ಇದನ್ನು ಮನಗಂಡು, ಎಲ್ಲಾ ಫಲಾನುಭವಿಗಳಿಗೂ ಹಿಂದಿನಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು” ಎಂದು ಮುಖ್ಯಮಂತ್ರಿಗಳು ಹೇಳಿದರು.

“ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು. 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663ಕೋಟಿ ರೂ. ಒದಗಿಸಲಾಗಿದೆ” ಎಂದು ಘೋಷಿಸಿದರು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

    ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

    ‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

    ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

    ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

    ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

    ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

    ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

    “ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

    ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

    ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

    ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

    ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

    ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

    ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

    ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

    ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

    ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

    ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...