Homeಮುಖಪುಟಮೂರು ರಾಜ್ಯಗಳಲ್ಲಿ ಐಟಿ ದಾಳಿ: ದಾಖಲೆಯ ₹290 ಕೋಟಿ ವಶ; ಶೋಧ ಕಾರ್ಯ ಮುಂದುವರಿಕೆ

ಮೂರು ರಾಜ್ಯಗಳಲ್ಲಿ ಐಟಿ ದಾಳಿ: ದಾಖಲೆಯ ₹290 ಕೋಟಿ ವಶ; ಶೋಧ ಕಾರ್ಯ ಮುಂದುವರಿಕೆ

- Advertisement -
- Advertisement -

ಒಡಿಶಾ, ಜಾರ್ಖಂಡ್‌ ಮತ್ತು ಪಶ್ಚಿಮ ಬಂಗಾಳದಲ್ಲಿ ಮದ್ಯ ತಯಾರಿಕಾ ಕಂಪನಿ ಬೌಧ್ಧ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ (ಬಿಡಿಪಿಎಲ್) ಸಂಸ್ಥೆಗೆ ಸೇರಿದ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಅಧಿಕಾರಿಗಳು ದಾಳಿ ಮುಂದುವರೆಸಿದ್ದು, ನಿನ್ನೆಯವರೆಗೆ ಕಂಪನಿಗೆ ಸಂಬಂಧಿಸಿದ್ದು ಎನ್ನಲಾದ 290 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಮೂರು ರಾಜ್ಯಗಳ ಮೂರು ಸ್ಥಳಗಳಲ್ಲಿನ ಒಂಬತ್ತು ಲಾಕರ್‌ಗಳು ಮತ್ತು ಏಳು ಕೊಠಡಿಗಳ ಪರಿಶೀಲನೆ ಇನ್ನಷ್ಟೇ ನಡೆಯಬೇಕಿದೆ ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ. ಕಪಾಟುಗಳು ಮತ್ತು ಇತರ ಪೀಠೋಪಕರಣಗಳಲ್ಲಿ ಅಡಗಿಸಿಟ್ಟ ನಗದು ವಶಪಡಿಸಿಕೊಳ್ಳಲಾಗಿದೆ.

ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ಕಂಪನಿಗೆ ಸೇರಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ದಾಳಿಯಲ್ಲಿ ಇಷ್ಟೊಂದು ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಟಿ ಇಲಾಖೆಯು ವಶಪಡಿಸಿಕೊಂಡ ನೋಟುಗಳನ್ನು ಎಣಿಸಲು ಸುಮಾರು 40 ದೊಡ್ಡ ಮತ್ತು ಸಣ್ಣ ಯಂತ್ರಗಳನ್ನು ಬಳಸಿಕೊಂಡಿದೆ. ಎಣಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಇಲಾಖೆ ಮತ್ತು ಬ್ಯಾಂಕ್ ಸಿಬ್ಬಂದಿಯನ್ನು ಕರೆತಂದಿದೆ. ವಶಪಡಿಸಿಕೊಂಡ ಹಣವನ್ನು ರಾಜ್ಯದ ಸರ್ಕಾರಿ ಬ್ಯಾಂಕ್‌ಗಳಿಗೆ ಸಾಗಿಸಲು ಇಲಾಖೆಯಿಂದ ಹೆಚ್ಚಿನ ವಾಹನಗಳನ್ನು ತರಿಸಲಾಗಿದೆ.

ಮದ್ಯ ತಯಾರಿಕಾ ಕಂಪನಿ ಬೌಧ್ಧ್ ಡಿಸ್ಟಿಲರೀಸ್ ವಿವಿಧ ಆಸ್ತಿಗಳಲ್ಲದೆ, ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸಂಸದ ಧೀರಜ್ ಪ್ರಸಾದ್ ಸಾಹು ಅವರ ಆಸ್ತಿಗಳ ಮೇಲೂ ಐಟಿ ಇಲಾಖೆ ದಾಳಿ ನಡೆಸಿದೆ. ಸಾಹು ಅವರಿಗೆ ಸಂಬಂಧಿಸಿದ್ದು ಎನ್ನಲಾದ ಕೋಟ್ಯಾಂತರ ರೂ. ಹಣ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಸಾಹು ಅವರು ಬೌಧ್ಧ್ ಡಿಸ್ಟಿಲರೀಸ್ ನ ಜೊತೆಗ ವ್ಯಾವಹಾರ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗ್ತಿದೆ.

ದಾಳಿಗೆ ಸಂಬಂಧಿಸಿದಂತೆ ಇದುವರೆಗೆ ಡಿಸ್ಟಿಲರಿ ಗ್ರೂಪ್ ಆಗಲಿ, ಕಾಂಗ್ರೆಸ್ ಸಂಸದ ಸಾಹು ಆಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಅಧಿಕಾರಿಗಳು ಹಣದ ಮೂಲ ಮತ್ತು ಅದರ ಹಿಂದಿನ ವ್ಯಕ್ತಿಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...