Homeಕರೋನಾ ತಲ್ಲಣಮಧ್ಯಪ್ರದೇಶ: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ಮಾಸಿಕ 5000 ರೂ. ಪಿಂಚಣಿ

ಮಧ್ಯಪ್ರದೇಶ: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ಮಾಸಿಕ 5000 ರೂ. ಪಿಂಚಣಿ

- Advertisement -
- Advertisement -

ದೇಶದಲ್ಲಿ ಉಲ್ಬಣಗೊಂಡಿರುವ ಕೊರೊನಾ ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಮಾಸಿಕ 5,000 ರೂಪಾಯಿ ಪಿಂಚಣಿ ನೀಡುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಮಾಸಿಕ 5,000 ರೂ. ಪಿಂಚಣಿ ನೀಡಲಾಗುತ್ತದೆ. ಇದಲ್ಲದೆ, ಕೆಲಸ ಮಾಡಲು ಬಯಸುವ ಜನರಿಗೆ ಸರ್ಕಾರವು ಬಡ್ಡಿ ರಹಿತ ಸಾಲವನ್ನು ನೀಡುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

“ಈ ಕೊರೊನಾ ಸಾಂಕ್ರಾಮಿಕದಲ್ಲಿ ತಂದೆ-ತಾಯಿಯನ್ನು / ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ತಿಂಗಳಿಗೆ 5000 ರೂ. ಪಿಂಚಣಿ ನೀಡುತ್ತೇವೆ. ಈ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಈ ಕುಟುಂಬಗಳಿಗೆ ಉಚಿತ ಪಡಿತರವನ್ನು ಸಹ ನಾವು ವ್ಯವಸ್ಥೆಗೊಳಿಸುತ್ತೇವೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

ಮಧ್ಯಪ್ರದೇಶವು ಮೇ 12 (ಬುಧವಾರ) ರಂದು 8,970 ಹೊಸ ಪ್ರಕರಣಗಳು ಮತ್ತು 84 ಸಾವುಗಳನ್ನು ವರದಿ ಮಾಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 7,00,202 ಮತ್ತು ಸಾವಿನ ಸಂಖ್ಯೆ 6,679 ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಏಪ್ರಿಲ್ 30 ಮತ್ತು ಮೇ 1 ರಿಂದ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಕೊರೊನಾಕಾರಣದಿಂದ ರಾಜ್ಯ ಸರ್ಕಾರ ಮುಂದೂಡಿದೆ. 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳಿಗೆ ಪರ್ಯಾಯ ಮಾರ್ಗಗಳನ್ನು ಮಂಡಳಿ ಪರಿಗಣಿಸುತ್ತಿದೆ ಮತ್ತು 10, 12 ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲೇ ನಡೆಸಲು ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಯಜ್ಞ ಮಾಡಿದರೆ ಕೊರೊನಾ 3ನೇ ಅಲೆ ಭಾರತವನ್ನು ಟಚ್ ಮಾಡಲ್ಲ ಎಂದ ಬಿಜೆಪಿ ಸಚಿವೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್; ನಾನು ಭಯೋತ್ಪಾದಕನಲ್ಲ..; ಸಂಜಯ್ ಸಿಂಗ್

0
'ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಜನರ ಮಗ ಮತ್ತು ಸಹೋದರನಂತೆ ಕೆಲಸ ಮಾಡಿದ್ದಾರೆ' ಎಂದು ಹೇಳಿದ ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದರು. ತಿಹಾರ್ ಜೈಲಿನಲ್ಲಿರುವ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಲು...