Homeಮುಖಪುಟಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ನಾಲ್ಕು ವರ್ಷಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

2017-18 ಮತ್ತು 2020-21ರ (ನಾಲ್ಕು ವರ್ಷಗಳ) ನಡುವೆ ಪರಿಶಿಷ್ಟಜಾತಿ (SC) ಸಮುದಾಯದ ಕಲ್ಯಾಣಕ್ಕಾಗಿ ನಿಗದಿಪಡಿಸಿದ ಹಣದ ಶೇಕಡಾ 20 ರಷ್ಟು ಅಂದರೆ ಒಟ್ಟು 50,000 ಕೋಟಿ ರೂಪಾಯಿಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳು ಬಳಕೆ ಮಾಡಿಲ್ಲ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಹೀಗಾಗಿ , ಹಂಚಿಕೆ ನಿಯಂತ್ರಿಸುವ ಚೌಕಟ್ಟಿನಲ್ಲಿ ಬದಲಾವಣೆಯನ್ನು ಪ್ರಸ್ತಾಪಿಸಲು ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯಗಳು ಮತ್ತು ಇಲಾಖೆಗಳಾದ್ಯಂತ ಏಕರೂಪದ ವಿತರಣೆಯನ್ನು ಹೆಚ್ಚಿನ ಆದ್ಯತೆಯ ಪ್ರದೇಶಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಅದರ ಫಲಾನುಭವಿಗಳಿಗೆ ವಾರ್ಷಿಕ 50,000 ರೂ.ಗಳವರೆಗೆ ನಗದು ವರ್ಗಾವಣೆ ಮಾಡುವ ಉದ್ದೇಶ ಹೊಂದಲಾಗಿದೆ.

ಬಳಕೆಯಾಗದ ನಿಧಿಯ ವಿಷಯ ಮತ್ತು ಹಂಚಿಕೆಗಾಗಿ ಹೊಸ ವ್ಯವಸ್ಥೆಯನ್ನು ರೂಪಿಸುವ ಸರ್ಕಾರದ ಪ್ರಸ್ತಾಪವು ಈ ತಿಂಗಳ ಆರಂಭದಲ್ಲಿ ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಕ್ರಿಯಾ ಯೋಜನೆಯ (ಡಿಎಪಿಎಸ್‌ಸಿ) ಪರಿಶೀಲನಾ ಸಭೆಯಲ್ಲಿ ಚರ್ಚೆಗೆ ಬಂದಿತು.

ಇದನ್ನೂ ಓದಿ: ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ಡಿಎಪಿಎಸ್‌ಸಿ ಎಂಬುದು ಸರ್ಕಾರದ ಸಂಸ್ಥೆಯಾಗಿದ್ದು, ಪರಿಶಿಷ್ಟ ಜಾತಿಗಳ (ಎಸ್‌ಸಿ) ಉನ್ನತಿಯನ್ನು ಗುರಿಯಾಗಿಟ್ಟುಕೊಂಡು ಹಲವು ಯೋಜನೆಗಳಿಗಾಗಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಹಣವನ್ನು ಹಂಚಲಾಗುತ್ತದೆ.

ಕಳೆದ ನಾಲ್ಕು ವರ್ಷಗಳಲ್ಲಿ, 2017- 18 ರಿಂದ 2020-21 ರವರೆಗೆ ಒಟ್ಟು 2,59,977.40 ಕೋಟಿ ರೂಪಾಯಿ ಹಣವನ್ನು ಡಿಎಪಿಎಸ್‌ಸಿ ಅಡಿಯಲ್ಲಿ ಪರಿಶಿಷ್ಟಜಾತಿ ಕಲ್ಯಾಣಕ್ಕೆ ಮಂಜೂರು ಮಾಡಲಾಗಿದೆ.

ಸರ್ಕಾರಿ ಹಿರಿಯ ಅಧಿಕಾರಿಗಳ ಪ್ರಕಾರ, ಈ ಅವಧಿಯಲ್ಲಿ ಎಂಟು ಸಚಿವಾಲಯಗಳು ಅಥವಾ ಇಲಾಖೆಗಳು ಶೇಕಡಾ 80 ರಷ್ಟು ಹಣವನ್ನು ಬಳಸಿಲ್ಲ.  ಇವುಗಳಲ್ಲಿ ಕೃಷಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿವೆ.

ಹಣ ಹಂಚಿಕೆಯ ಚೌಕಟ್ಟಿನ ಬದಲಾವಣೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪ್ರಸ್ತಾಪಿಸಿದೆ. ಇದನ್ನು “ಪಿಎಂ-ಸೋಶಿಯಲ್ ಇನ್‌ಕ್ಲೂಷನ್ ಮಿಷನ್” (SIM) ಎಂದು  ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ SIM ಅಡಿಯಲ್ಲಿ, ಶೇಕಡಾ 40 ರಷ್ಟು ಹಣವನ್ನು ಹೆಚ್ಚಿನ ಆದ್ಯತೆಯ ಕ್ಷೇತ್ರಗಳಲ್ಲಿ ಮತ್ತು ಶೇಕಡಾ 60 ರಷ್ಟು ಹಣವನ್ನು ಶರತ್ತುಬದ್ಧ ನಗದು ವರ್ಗಾವಣೆಯ ಮೂಲಕ ನೀಡಬೇಕೆಂದು ಸೂಚಿಸಲಾಗಿದೆ. ಆದರೆ ಈ ಪ್ರಸ್ತಾಪಕ್ಕೆ ಇನ್ನೂ ಅನುಮೋದನೆ ದೊರೆತಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರು, “ವಿವಿಧ ಸಚಿವಾಲಯಗಳಿಗೆ ನಿಗದಿಪಡಿಸಿದ ಪರಿಶಿಷ್ಟಜಾತಿ ಕಲ್ಯಾಣ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರ ಗಂಭೀರವಾಗಿದೆ ಮತ್ತು ಮುಂದೆ ಉತ್ತಮ ಫಲಿತಾಂಶಗಳನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

ಪರಿಶಿಷ್ಟಜಾತಿಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಹಂಚಿಕೆಯ ಪರಿಕಲ್ಪನೆಯನ್ನು ಆರನೇ ಪಂಚವಾರ್ಷಿಕ ಯೋಜನೆಯಲ್ಲಿ ಪರಿಚಯಿಸಲಾಯಿತು. ಇದನ್ನು 1980 ರಿಂದ ಜಾರಿಗೆ ತರಲಾಗಿದೆ. “2009 ರಲ್ಲಿ ನಡೆಸಿದ ಪರಿಶೀಲನೆಯಲ್ಲಿ ಕೇವಲ 17 ಕೇಂದ್ರ ಸಚಿವಾಲಯಗಳು ಇದನ್ನು ಕಾರ್ಯಗತಗೊಳಿಸುತ್ತಿವೆ ಎಂದು ಕಂಡು ಬಂದಿದೆ.

2017 ರಲ್ಲಿ ನೀತಿ ಆಯೋಗದ ವರದಿಯು ಎಸ್‌ಸಿ /ಎಸ್‌ಟಿಗಳಿಗೆ ವಿಶೇಷ ಹಂಚಿಕೆಯನ್ನು ಮುಂದುವರೆಸುವ ಅಗತ್ಯವನ್ನು ಸೂಚಿಸಿತ್ತು. ಇದನ್ನು ಯೋಜನೆಯ ಬಜೆಟ್‌ಗೆ ಮೀಸಲಿಡಲಾಗಿದೆ.

ನಾಲ್ಕು ವರ್ಷಗಳ ಹಂಚಿಕೆಯಲ್ಲಿ 49,722.18 (ಸುಮಾರು 50 ಸಾವಿರ ಕೋಟಿ) ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...