Homeಮುಖಪುಟರಾಜ್ಯಸಭೆಯಲ್ಲಿ ಅಂಚೆ ಕಚೇರಿ ಮಸೂದೆ 2023 ಅಂಗೀಕಾರ

ರಾಜ್ಯಸಭೆಯಲ್ಲಿ ಅಂಚೆ ಕಚೇರಿ ಮಸೂದೆ 2023 ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಸೋಮವಾರ ಅಂಚೆ ಕಚೇರಿ ಮಸೂದೆ 2023 ಅಂಗೀಕಾರವಾಗಿದ್ದು, 125 ವರ್ಷಗಳಷ್ಟು ಹಳೆಯದಾದ ಭಾರತೀಯ ಅಂಚೆ ಕಚೇರಿ ಕಾಯಿದೆಯನ್ನು ರದ್ದುಪಡಿಸಿ ದೇಶದಲ್ಲಿ ಅಂಚೆ ಕಚೇರಿಗಳಿಗೆ ಸಂಬಂಧಿಸಿದ ಕಾನೂನನ್ನು ತಿದ್ದುಪಡಿ ಮಾಡುವ ಉದ್ದೇಶವನ್ನು ಈ ಮಸೂದೆ ಹೊಂದಿದೆ.

ಪ್ರಸ್ತಾವಿತ ಶಾಸನದ ಪ್ರಕಾರ, ಕೇಂದ್ರ ಸರ್ಕಾರವು ಅಧಿಸೂಚನೆಯ ಮೂಲಕ ಯಾವುದೇ ಅಧಿಕಾರಿಗೆ ರಾಜ್ಯದ ಭದ್ರತೆ, ಸೌಹಾರ್ದ ಸಂಬಂಧ, ಸಾರ್ವಜನಿಕ ಸುವ್ಯವಸ್ಥೆ, ತುರ್ತುಸ್ಥಿತಿ ಅಥವಾ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಯಾವುದೇ ವಸ್ತುವನ್ನು ತಡೆಹಿಡಿಯಲು, ತೆರೆಯಲು ಅಥವಾ ಪರಿಶೀಲಿಸಲು, ವಶಪಡಿಸಿಕೊಳ್ಳಲು ಅಧಿಕಾರ ನೀಡುತ್ತದೆ.

1898ರಲ್ಲಿ ಜಾರಿಗೆ ಬಂದಿದ್ದ ಭಾರತೀಯ ಅಂಚೆ ಕಚೇರಿ ಕಾಯ್ದೆಯನ್ನು ರದ್ದುಗೊಳಿಸುವ ಗುರಿಯನ್ನು ನೂತನ ಮಸೂದೆಯು ಹೊಂದಿದ್ದು, ಅಂಚೆ ಸೇವೆಗಳ ಮಹಾನಿರ್ದೇಶಕರಿಗೆ ಆ ಸೇವೆಗಳಿಗೆ ಸಂಬಂಧಿಸಿದ ನಿಯಮ ರೂಪಿಸಲು ಮತ್ತು ಅದಕ್ಕೆ ಶುಲ್ಕವನ್ನು ನಿಗದಿಪಡಿಸಲು ಅಧಿಕಾರವನ್ನು ನೀಡುತ್ತದೆ. ಅಂಚೆ ಕಚೇರಿಗಳು ಮತ್ತು ಅಂಚೆ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಮಸೂದೆ ಹೊಂದಿದೆ. ನೂತನ ಮಸೂದೆ ಅಂಚೆ ಕಚೇರಿಗಳನ್ನು ಖಾಸಗೀಕರಣಗೊಳಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಲಾಗಿದೆ.

ಸಂಸತ್ತಿನ ಮೇಲ್ಮನೆಯಲ್ಲಿ ಮಸೂದೆ ಕುರಿತ ಚರ್ಚೆ ವೇಳೆ ಉತ್ತರಿಸಿದ ಸಚಿವ ಅಶ್ವಿನಿ ವೈಷ್ಣವ್, ಮಸೂದೆಯ ನಿಬಂಧನೆಯನ್ನು ವಿವರಿಸಿದ್ದಾರೆ. ಸಂಕೀರ್ಣವಾದ ಮತ್ತು ವೈವಿಧ್ಯಮಯವಾಗಿರುವ ಸಮಾಜದಲ್ಲಿ  ಕಷ್ಟಕರವಾದ ಸಮಯಗಳಲ್ಲಿ, ಪ್ರತಿಬಂಧಕವನ್ನು ಮಾಡುವುದು ಬಹಳ ಮುಖ್ಯ. ಈ ರೀತಿಯ ನಿಬಂಧನೆಯನ್ನು ರಾಷ್ಟ್ರೀಯ ಭದ್ರತೆಗಾಗಿ ಮಾಡಲಾಗುತ್ತದೆ. ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಮಸೂದೆಗೆ ತಿದ್ದುಪಡಿ ಮಾಡಲಾಗಿದೆ. ಅಂಚೆಕಚೇರಿಗಳು, ಪೋಸ್ಟ್‌ ಮ್ಯಾನ್‌ಗಳು ಕೇವಲ ಅಂಚೆಗಳಲ್ಲಿ ಬಂದ ಕಾಗದ ವಿತರಣೆ ಮಾಡುವ ಕಾಲ ಈಗಿಲ್ಲ. ಕಳೆದ 9 ವರ್ಷಗಳಲ್ಲಿ ಅಂಚೆ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಈಗ ಲೋಕಸಭೆಯಲ್ಲಿ ಅಂಗೀಕಾರ ಪಡೆದು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...