Homeಮುಖಪುಟಮೋದಿ ಸರ್ಕಾರದ ವಿರುದ್ಧ ಆರ್‌ಎಸ್‌ಎಸ್‌ ಅಂಗಸಂಸ್ಥೆ ಬಿಕೆಎಸ್‌ ಪ್ರತಿಭಟನೆ

ಮೋದಿ ಸರ್ಕಾರದ ವಿರುದ್ಧ ಆರ್‌ಎಸ್‌ಎಸ್‌ ಅಂಗಸಂಸ್ಥೆ ಬಿಕೆಎಸ್‌ ಪ್ರತಿಭಟನೆ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಂಗಸಂಸ್ಥೆಯಾದ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಸೋಮವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ರ್‍ಯಾಲಿಯನ್ನು ನಡೆಸಿದೆ.

ಭಾರತದ ರೈತರ ಪ್ರಸ್ತುತ ಸ್ಥಿತಿಗತಿಯ ವಿರುದ್ಧ ಬಿಕೆಎಸ್‌ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟಿದೆ. ಬಿಕೆಎಸ್ ಇದನ್ನು ‘ಕಿಸಾನ್ ಗರ್ಜನ ರ್‍ಯಾಲಿ’ ಎಂದು ಕರೆದಿದೆ.

‘‘ಸರ್ಕಾರವು ರೈತರ ಬೇಡಿಕೆಗೆ ಸಕಾಲದಲ್ಲಿ ಕಿವಿಗೊಡದಿದ್ದರೆ ತೊಂದರೆ ಎದುರಿಸಬೇಕಾಗುತ್ತದೆ” ಎಂದು ಬಿಕೆಎಸ್‌ ಹೊರಡಿಸಿದ ಕರಪತ್ರದಲ್ಲಿ ತಿಳಿಸಲಾಗಿದೆ.

ಭಾರತದ ಮೂಲೆಮೂಲೆಗಳಿಂದ ಸುಮಾರು 60,000 ರೈತರು ರಾಮಲೀಲಾ ಮೈದಾನದಲ್ಲಿ ಸೇರಿದ್ದಾಗಿ ಬಿಕೆಎಸ್ ತಿಳಿಸಿದೆ. ತಮ್ಮ ಬೆಳೆಗಳಿಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುವಂತೆ  ಒತ್ತಾಯಿಸುವುದಕ್ಕಾಗಿ ರೈತರು ಪ್ರತಿಭಟಿಸುತ್ತಿದ್ದಾರೆ ಎಂದು ಬಿಕೆಎಸ್ ತಿಳಿಸಿದೆ.

ಬಿಕೆಎಸ್‌ ಏಕೆ ಪ್ರತಿಭಟನೆ ನಡೆಸುತ್ತಿದೆ?

ಭಾರತೀಯ ಕಿಸಾನ್ ಸಂಘವು (ಬಿಕೆಸ್‌) ಆರ್‌ಎಸ್‌ಎಸ್‌ನ ಅಂಗಸಂಸ್ಥೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಬಿಕೆಎಸ್‌ ಕೆಲವೊಮ್ಮೆ ಪ್ರತಿಭಟಿಸಿದ ಉದಾಹರಣೆಗಳಿವೆ. ಆ ಮೂಲಕ ರೈತರನ್ನು ತನ್ನ ತೆಕ್ಕೆಯಲ್ಲಿ ಹಿಡಿದುಕೊಳ್ಳುವ ತಂತ್ರವನ್ನು ಆರ್‌ಎಸ್‌ಎಸ್‌ ರೂಪಿಸುತ್ತದೆ ಎಂಬ ವಾದವಿದೆ.

ಸೋಮವಾರ ನಡೆದ ರ್‍ಯಾಲಿಯಲ್ಲಿ ‘ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ತೆರವು, ರೈತರಿಗೆ ಆರ್ಥಿಕ ನೆರವು ಹೆಚ್ಚಳ, ಕುಲಾಂತರಿ ಸಾಸುವೆ ನಿರಾಕರಣೆ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ, ಸೂಕ್ತವಾದ ರಫ್ತು ನೀತಿ ಜಾರಿ’ಗಾಗಿ ಬಿಕೆಎಸ್‌ ಒತ್ತಾಯಿಸಿದೆ.

“ಕೃಷಿ ಉಪಕರಣಗಳು ಮತ್ತು ರಸಗೊಬ್ಬರಗಳ ಮೇಲಿನ ಶೇ.18ರಷ್ಟು ಜಿಎಸ್‌ಟಿಯಿಂದಾಗಿ ಕೃಷಿ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಹೀಗಿದ್ದರೂ ರೈತರಿಗೆ ಅರ್ಹವಾದ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಹೀಗಾಗಿ ಈ ಜಿಎಸ್‌ಟಿ ತೆರವು ಮಾಡುವುದು ಅನಿವಾರ್ಯವಾಗಿದೆ” ಎಂದು ಬಿಕೆಎಸ್ ಪ್ರಧಾನ ಕಾರ್ಯದರ್ಶಿ ಮೋಹಿನಿ ಮೋಹನ್ ಮಿಶ್ರಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.

ಕಳೆದ ವಾರ ಬಿಕೆಎಸ್‌ನ ಕಾರ್ಯಕಾರಿ ಸಮಿತಿ ಸದಸ್ಯ ನಾನಾ ಆಖ್ರೆ ಅವರು ಮಾತನಾಡಿ, “ತಮ್ಮ ಕೃಷಿ ಉತ್ಪನ್ನಗಳ ಆದಾಯದ ಕೊರತೆಯಿಂದಾಗಿ ರೈತರು ಇಂದು ಅತ್ಯಂತ ನಿರಾಶೆಗೊಂಡಿದ್ದಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದಿದ್ದರು.

“ರೈತರ ಸಂಕಷ್ಟಗಳನ್ನು ಪರಿಹರಿಸುವ ಸಲುವಾಗಿ, ಎಲ್ಲಾ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ನೀಡಬೇಕೆಂದು ಬಿಕೆಎಸ್ ಒತ್ತಾಯಿಸುತ್ತದೆ. ಅಲ್ಲದೆ, ಕೃಷಿ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಬಾರದು. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಒದಗಿಸಲಾದ ಆರ್ಥಿಕ ಪರಿಹಾರವನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...