Homeಮುಖಪುಟಸಂವಿಧಾನ ಪೀಠಿಕೆಯ 'ಜಾತ್ಯತೀತ', 'ಸಮಾಜವಾದಿ' ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!

ಸಂವಿಧಾನ ಪೀಠಿಕೆಯ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!

- Advertisement -
- Advertisement -

ಸಂವಿಧಾನದ ಪೀಠಿಕೆಯಲ್ಲಿ ಸೇರ್ಪಡೆ ಮಾಡಲಾದ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳನ್ನು ಪರಿಶೀಲಿಸಬೇಕು ಎಂದು ಆರೆಸ್ಸೆಸ್‌ ಗುರುವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. “ತುರ್ತು ಪರಿಸ್ಥಿತಿಯಲ್ಲಿ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದಾಗ, ಸಂಸತ್ತು ಕಾರ್ಯನಿರ್ವಹಿಸದಿದ್ದಾಗ ಮತ್ತು ನ್ಯಾಯಾಂಗವು ಕುಂಟುತ್ತಾ ಹೋದಾಗ ಈ ಪದಗಳನ್ನು ಸೇರಿಸಲಾಯಿತು” ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಸಂವಿಧಾನ ಪೀಠಿಕೆಯ

“ಹಾಗಾದರೆ, ಅವು ಪೀಠಿಕೆಯಲ್ಲಿ ಉಳಿಯಬೇಕೆ ಎಂಬುವುದನ್ನು ಪರಿಗಣಿಸಬೇಕಿದೆ. ಪೀಠಿಕೆ ಶಾಶ್ವತವಾಗಿದೆ. ಆದರೆ ಭಾರತಕ್ಕೆ ಸಿದ್ಧಾಂತವಾಗಿ ಸಮಾಜವಾದದ ಚಿಂತನೆಗಳು ಶಾಶ್ವತವೇ?” ಎಂದು ಅವರು ಕೇಳಿದ್ದಾರೆ. ಆರ್‌ಎಸ್‌ಎಸ್ ಸಂಘಟನೆಯು ಬಿಜೆಪಿಯ ಮಾತೃ ಸಂಘಟನೆಯಾಗಿದೆ.

1975 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಬಾಳೆ ಈ ಹೇಳಿಕೆಗಳನ್ನು ನೀಡಿದ್ದಾರೆ.

ತುರ್ತು ಪರಿಸ್ಥಿತಿಯ ಸಮಯದಲ್ಲಿ ಉಂಟಾದ “ಹಲವಾರು ಅನ್ಯಾಯಗಳ” ಬಗ್ಗೆ ಮಾತನಾಡಿದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ, “ಕ್ರೂರ” ಕ್ರಮಗಳಿಗಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಅವಧಿಯಲ್ಲಿ 250 ಪತ್ರಕರ್ತರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಜೈಲಿಗೆ ಹಾಕಲಾಯಿತು ಎಂದು ಹೊಸಬಾಳೆ ಹೇಳಿದ್ದಾರೆ. ಆಗಿನ ಸರ್ಕಾರವು 60 ಲಕ್ಷಕ್ಕೂ ಹೆಚ್ಚು ಜನರನ್ನು ಬಲವಂತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಮೂಲಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಅವರು ಹೇಳಿದ್ದಾರೆ.

ಹೊಸಬಾಳೆ ಅವರ ಹೇಳಿಕೆಗಳನ್ನು ಕಾಂಗ್ರೆಸ್ ಟೀಕಿಸಿದ್ದು, “ಆರ್‌ಎಸ್‌ಎಸ್-ಬಿಜೆಪಿಯ ಸಿದ್ಧಾಂತವೇ ಭಾರತೀಯ ಸಂವಿಧಾನಕ್ಕೆ ನೇರ ವಿರುದ್ಧವಾಗಿದೆ. ಈ ಹೇಳಿಕೆಗಳು ಕೇವಲ ಸಲಹೆಯಲ್ಲ, ಬದಲಾಗಿ ನಮ್ಮ ಸಂವಿಧಾನದ ಆತ್ಮದ ಮೇಲೆ ಉದ್ದೇಶಪೂರ್ವಕ ದಾಳಿ” ಎಂದು ಆರೋಪಿಸಿದೆ.

“ಇದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಪ್ರಜಾಪ್ರಭುತ್ವ ಭಾರತಕ್ಕಾಗಿನ ದೃಷ್ಟಿಕೋನವನ್ನು ಕೆಡವಲು ದೀರ್ಘಕಾಲದಿಂದ ನಡೆಸಲಾಗುತ್ತಿರುವ ಪಿತೂರಿಯ ಭಾಗವಾಗಿದೆ. ಈ ಸಂಚನ್ನು ಆರ್‌ಎಸ್‌ಎಸ್-ಬಿಜೆಪಿ ಯಾವಾಗಿನಿಂದಲೂ ರೂಪಿಸುತ್ತಿದೆ” ಎಂದು ಪಕ್ಷ ಹೇಳಿದೆ.

“ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳು 1950 ರಲ್ಲಿ ಅಂಗೀಕರಿಸಲ್ಪಟ್ಟ ಸಂವಿಧಾನದ ಭಾಗವಾಗಿರಲಿಲ್ಲ ಮತ್ತು 1976 ರಲ್ಲಿ 42 ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸೇರಿಸಲ್ಪಟ್ಟವು.

ನವೆಂಬರ್‌ನಲ್ಲಿ, ಸಂವಿಧಾನದ ಪೀಠಿಕೆಯಿಂದ ಎರಡು ಪದಗಳನ್ನು ಅಳಿಸಲು ಕೋರಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಸುಮಾರು 44 ವರ್ಷಗಳ ನಂತರ ಸಾಂವಿಧಾನಿಕ ತಿದ್ದುಪಡಿಯನ್ನು ಪ್ರಶ್ನಿಸಲು ಯಾವುದೇ ಕಾನೂನುಬದ್ಧ ಸಮರ್ಥನೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 2015 ರ ಗಣರಾಜ್ಯೋತ್ಸವದಂದು ನೀಡಿದ್ದ ಪತ್ರಿಕೆ ಜಾಹೀರಾತುಗಳಲ್ಲಿ ಎರಡು ಪದಗಳನ್ನು ಬಿಟ್ಟು ಸಂವಿಧಾನದ ಪೀಠಿಕೆ ಕಾಣಿಸಿಕೊಂಡಿತ್ತು. ಇದರ ನಂತರ ವಿವಾದ ಭುಗಿಲೆದ್ದಿತು. ಸೆಪ್ಟೆಂಬರ್ 2023 ರಲ್ಲಿ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಸಂಸದರಿಗೆ ವಿತರಿಸಲಾದ ಸಂವಿಧಾನದ ಪ್ರತಿಗಳಲ್ಲಿ ಪೀಠಿಕೆಯಿಂದ ಎರಡು ಪದಗಳು ಕಾಣೆಯಾಗಿವೆ ಎಂದು ಹೇಳಿಕೊಂಡಿದ್ದರು. ಸಂವಿಧಾನ ಪೀಠಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಜಾ: ಹೆಚ್ಚಿನ ಕುಟುಂಬಗಳಿಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ – ವಿಶ್ವ ಆಹಾರ ಕಾರ್ಯಕ್ರಮದ ಆತಂಕಕಾರಿ ವರದಿ

ಗಾಜಾ: ಹೆಚ್ಚಿನ ಕುಟುಂಬಗಳಿಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ – ವಿಶ್ವ ಆಹಾರ ಕಾರ್ಯಕ್ರಮದ ಆತಂಕಕಾರಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...